Mysuru : 'ಚಾಮುಂಡೇಶ್ವರಿ ಕ್ಷೇತ್ರದ ಜನತೆ ಬಿಜೆಪಿ ಬೆಂಬಲಿಸಲಿದ್ದಾರೆ'

Published : Dec 02, 2022, 05:46 AM IST
Mysuru :  'ಚಾಮುಂಡೇಶ್ವರಿ ಕ್ಷೇತ್ರದ ಜನತೆ ಬಿಜೆಪಿ ಬೆಂಬಲಿಸಲಿದ್ದಾರೆ'

ಸಾರಾಂಶ

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಸಾಕಷ್ಟುಅನುದಾನ ನೀಡಿದ್ದು, ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದ ಜನತೆ ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ಬಿಜೆಪಿ ನಗರಾಧ್ಯಕ್ಷ ಟಿ.ಎಸ್‌. ಶ್ರೀವತ್ಸ ವಿಶ್ವಾಸ ವ್ಯಕ್ತಪಡಿಸಿದರು.

  ಮೈಸೂರು (ಡಿ.02):  ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಸಾಕಷ್ಟುಅನುದಾನ ನೀಡಿದ್ದು, ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದ ಜನತೆ ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ಬಿಜೆಪಿ ನಗರಾಧ್ಯಕ್ಷ ಟಿ.ಎಸ್‌. ಶ್ರೀವತ್ಸ ವಿಶ್ವಾಸ ವ್ಯಕ್ತಪಡಿಸಿದರು.

ಶ್ರೀರಾಂಪುರ ಜಿಪಂ ವ್ಯಾಪ್ತಿಯ ಬೂತ್‌ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಬಿಜೆಪಿ (BJP)  ಶಾಸಕರು ಇಲ್ಲದಿದ್ದರು ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟುಅನುದಾನ ನೀಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದಲೂ ಹಲವಾರು ಗ್ರಾಮಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ನೀಡಿರುವುದು ನಮ್ಮ ಸರ್ಕಾರದ ಹೆಗ್ಗಳಿಕೆ ಎಂದು ಹೇಳಿದರು.

ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ಎಲ್ಲಾ ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಮತದಾರರಿಗೆ ಮನವರಿಕೆ ಮಾಡಿ ಕೊಡುವ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದರು.

ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ಗೆಜ್ಜಗಳ್ಳಿ ಮಹೇಶ್‌, ಮಾಜಿ ಅಧ್ಯಕ್ಷ ಎನ್‌. ಅರುಣ್‌ಕುಮಾರ್‌ ಗೌಡ, ಮಾಜಿ ಜಿಲ್ಲಾಧ್ಯಕ್ಷ ಎಸ್‌.ಡಿ. ಮಹೇಂದ್ರ, ಮುಖಂಡರಾದ ಗೋಪಾಲರಾವ್‌, ಪರಶುರಾಮಪ್ಪ, ವಾನೀಶ್‌, ಭಾಗ್ಯಶ್ರೀ, ನಂದಕುಮಾರ್‌, ನಾಡನಹಳ್ಳಿ ಸುರೇಶ್‌, ಶ್ರೀಕಂಠ, ಜಯಸಿಂಹ, ಶಿವು ಗುರೂರು, ಚೇತನ್‌, ನಂಜುಂಡಸ್ವಾಮಿ, ವೃಷಭೇಂದ್ರ, ಶಂಕರ್‌ ನಾರಾಯಣ್‌ ಮೊದಲಾದವರು ಇದ್ದರು.

ಚಾಮುಂಡೇಶ್ವರಿಯಿಂದ ಸ್ಪರ್ಧೆ ಮಾಡುವುದಿಲ್ಲ

ಮೈಸೂರು : ನನ್ನ ಸೋಲಿಗೆ ಕಾರಣವಾದ ಚಾಮುಂಡೇಶ್ವರಿ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ತಾಲೂಕು ಹಳೇ ಕಾಮನಕೊಪ್ಪಲು ಗ್ರಾಮದ ಬಳಿ ಇಲವಾಲ ಭಾಗದ ಕಾಂಗ್ರೆಸ್‌ ಕಾರ್ಯಕರ್ತರು ಸ್ವಾಗತಿಸಿ, ಚಾಮುಂಡೇಶ್ವರಿ ಕ್ಷೇತ್ರದಿಂದಲೇ ನೀವು ಸ್ಪರ್ಧಿಸಬೇಕು. ಈ ಬಾರಿ ಗೆದ್ದೇ ಗೆಲ್ಲಿಸುತ್ತೇವೆ ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರ ನನ್ನನ್ನು ಮುಖ್ಯಮಂತ್ರಿ ಆಗುವವರೆಗೆ ಬೆಳೆಸಿದೆ. ಈ ಕ್ಷೇತ್ರ ಜನರ ಋುಣವನ್ನು ಈ ಜನ್ಮದಲ್ಲಿ ತೀರಿಸಲು ಸಾಧ್ಯವಿಲ್ಲ. ನಿಮ್ಮ ಅಭಿಮಾನಕ್ಕೆ ನಾನು ಋುಣಿಯಾಗಿದ್ದೇನೆ. ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತದೆ. ನೀವೆಲ್ಲರೂ ಪಕ್ಷ ನಿರ್ಧರಿಸಿದ ಅಭ್ಯರ್ಥಿಗೆ ಬೆಂಬಲ ನೀಡಿ. ಒಗ್ಗಟ್ಟಿನಿಂದ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.

ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ, ಮಾಜಿ ಸದಸ್ಯ ಅರುಣ್‌ಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ಕುಮಾರ್‌, ತಾಪಂ ಮಾಜಿ ಸದಸ್ಯ ಸಿ.ಎಂ. ಸಿದ್ಧರಾಮೇಗೌಡ, ಕಾಮನಕೊಪ್ಪಲು ಕರೀಗೌಡ, ಮೈದನಹಳ್ಳಿ ಶಿವಣ್ಣ, ಶಿವೇಗೌಡ, ನಾಗವಾಲ ಮಹೇಶ, ಆನಂದೂರು ರಾಮೇಗೌಡ, ವೈ.ಸಿ. ಸ್ವಾಮಿ, ರವಿ, ರಾಮು, ಪಾಷ, ಮಂಜುನಾಥ್‌, ನಾಗೇಶ್‌, ರಾಜೇಶ್‌ ಮೊದಲಾದವರು ಇದ್ದರು.

’ಸಿದ್ದರಾಮಯ್ಯ ನಾಲಾಯಕ್ ಎಂದೇ ಚಾಮುಂಡೇಶ್ವರಿಯಿಂದ ಬದಾಮಿಗೆ ಓಡಿಸಿದ್ದಾರೆ’

ಬಿಜೆಪಿ ಗೆಲ್ಲಿಸುವುದೇ ಗುರಿ

 ಮೈಸೂರು  :  ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಬಿಜೆಪಿ ಗೆಲುವಿನೊಂದಿಗೆ ಕಮಲ ಅರಳಿಸುವುದೇ ನಮ್ಮ ಗುರಿ ಎಂದು ಬಿಜೆಪಿ ನಗರಾಧ್ಯಕ್ಷ ಟಿ.ಎಸ್‌. ಶ್ರೀವತ್ಸ ತಿಳಿಸಿದರು.

ಮೈಸೂರು (Mysuru )  ತಾಲೂಕಿನ ಬೀರಿಹುಂಡಿಯಲ್ಲಿ ನಡೆದ ಬೀರಿಹುಂಡಿ ಜಿಪಂ ಭಾಗದ ಕಾರ್ಯಕರ್ತರು ಹಾಗೂ ಬೂತ್‌ ಪ್ರಮುಖ ಸಭೆಯಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ (BJP) ತನ್ನದೇ ಆದ ಪ್ರಭಾವ ಹೊಂದಿದ್ದು, ಕಳೆದೆರಡು ಚುನಾವಣೆಗಳಲ್ಲಿ ಕೆಲವು ರಾಜಕೀಯ ವ್ಯತ್ಯಾಸಗಳಿಂದ ಗಂಭೀರ ಸ್ಪರ್ಧೆ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ, 2023ರ ಚುನಾವಣೆಯಲ್ಲಿ ಪಕ್ಷ ಒಬ್ಬ ಸಮರ್ಥ ಅಭ್ಯರ್ಥಿಯನ್ನು ನಿಲ್ಲಿಸಿ, ಜೆಡಿಎಸ್‌ (JDS)  ಹಾಗೂ ಕಾಂಗ್ರೆಸ್‌ ಪಕ್ಷ ಗಳಿಗೆ ಪೈಪೋಟಿ ನೀಡಲು ಬೇಕಾದ ಎಲ್ಲಾ ತಯಾರಿಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.

ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ಗೆಜ್ಜಗಳ್ಳಿ ಮಹೇಶ್‌ ಮಾತನಾಡಿ, ಕ್ಷೇತ್ರದಲ್ಲಿ ಬಿಜೆಪಿಗೆ ಪೂರಕ ವಾತಾವರಣವಿದ್ದು, ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಸಂಘಟಿತರಾಗಬೇಕು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಪ್ರತಿ ಮನೆ ಮನೆಗೂ ಮಾಹಿತಿಯನ್ನು ನೀಡಿ ಮತದಾರರನ್ನು ಜಾಗೃತಿಗೊಳಿಸಬೇಕು ಎಂದು ಕರೆ ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಅಧ್ಯಕ್ಷ ಎನ್‌. ಅರುಣ್‌ಕುಮಾರ್‌ ಗೌಡ ಮಾತನಾಡಿ, ಕ್ಷೇತ್ರದಲ್ಲಿ ಜೆಡಿಎಸ್‌ ಶಾಸಕರು ಯಾವುದೇ ರೀತಿಯ ಮಹತ್ವದ ಅಭಿವೃದ್ಧಿ ಯೋಜನೆ ತರಲು ವಿಫಲವಾಗಿರುವುದು ಮತದಾರರ ಗಮನದಲ್ಲಿದೆ. ಹಾಗೂ ಅವರ ಪಕ್ಷದಲ್ಲೇ ಒಡಕು ಮತ್ತು ಭಿನ್ನಮತವಿರುವುದು ಜಗಜ್ಜಾಹೀರಾಗಿದೆ. ನಾವು ಒಮ್ಮತದಿಂದ ಕ್ಷೇತ್ರದ ಪ್ರವಾಸ ಮಾಡುತ್ತಿದ್ದೇವೆ. 2023ರ ಚುನಾವಣೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ಚುನಾವಣೆಯಾಗಿ ಹೊರಹೊಮ್ಮುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV
Read more Articles on
click me!

Recommended Stories

ಪರಿಷತ್ತಿನಲ್ಲಿ ಬಸವರಾಜ ಹೊರಟ್ಟಿ ಬದಲಾವಣೆ ಇಲ್ಲ, ಈ ಕುರಿತು ಚರ್ಚೆ ಆಗಿಲ್ಲ: ಸಲೀಂ ಅಹ್ಮದ್
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು