ಮಲೇಷ್ಯಾದಿಂದ ಬಂದ ವೈದ್ಯ: ಮದುವೆಯಲ್ಲಿ ಭಾಗಿಯಾದವರಿಗೆ ಕ್ವಾರೆಂಟೈನ್

Kannadaprabha News   | Asianet News
Published : Jun 04, 2020, 07:42 AM IST
ಮಲೇಷ್ಯಾದಿಂದ ಬಂದ ವೈದ್ಯ: ಮದುವೆಯಲ್ಲಿ ಭಾಗಿಯಾದವರಿಗೆ ಕ್ವಾರೆಂಟೈನ್

ಸಾರಾಂಶ

ಸುಳ್ಯದ ಆರಂತೋಡಿನಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಿತರೊಬ್ಬರು ಭಾಗವಹಿಸಿದ ಹಿನ್ನೆಲೆಯಲ್ಲಿ ಆ ಮದುವೆಯಲ್ಲಿ ಭಾಗಿಯಾದವರ ಮಾಹಿತಿ ಕಲೆ ಹಾಕಿ ಹೋಂ ಕ್ವಾರಂಟೈೕನ್‌ ಮಾಡಲಾಗಿದೆ.

ಮಂಗಳೂರು(ಜೂ.03): ಸುಳ್ಯದ ಆರಂತೋಡಿನಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಿತರೊಬ್ಬರು ಭಾಗವಹಿಸಿದ ಹಿನ್ನೆಲೆಯಲ್ಲಿ ಆ ಮದುವೆಯಲ್ಲಿ ಭಾಗಿಯಾದವರ ಮಾಹಿತಿ ಕಲೆ ಹಾಕಿ ಹೋಂ ಕ್ವಾರಂಟೈೕನ್‌ ಮಾಡಲಾಗಿದೆ. ಇದೇ ಮದುವೆಯಲ್ಲಿ ಪಾಲ್ಗೊಂಡಿದ್ದ ದೇವಚಳ್ಳ ಗ್ರಾಮದ ತಳೂರಿನ ಎರಡು ಕುಟುಂಬದ 7 ಜನರಿಗೆ ಹೋಂ ಕ್ವಾರಂಟೈನ್‌ ಮಾಡಲಾಗಿದೆ.

ಮಲೇಷ್ಯಾದಿಂದ ಬಂದಿದ್ದ ವೈದ್ಯರೊಬ್ಬರು ಬೆಂಗಳೂರಿನಲ್ಲಿ ಕ್ವಾರಂಟೈನ್‌ನಲ್ಲಿದ್ದರು. ಅಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿತ್ತು. ಮೇ 29ರಂದು ಅವರು ಅಲ್ಲಿಂದ ಮಂಗಳೂರಿನ ಮನೆಗೆ ಬಂದಿದ್ದರು.

ಇನ್ಮುಂದೆ ಸೋಂಕಿತರ ಮನೆ ಮಾತ್ರ ಸೀಲ್‌ಡೌನ್!

ಬಳಿಕ ಅವರು ಪತ್ನಿ ಹಾಗೂ ಮಗುವಿನೊಂದಿಗೆ ಅರಂತೋಡು ಬಳಿಯ ತನ್ನ ಸಂಬಂಧಿಕರ ಮನೆಗೆ ಬಂದಿದ್ದರು. ಈ ಮನೆಯವರು ಆ ಬಳಿಕ ವಿವಾಹ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು. ಅದೇ ವೇಳೆ ವೈದ್ಯರಿಗೆ ಪಾಸಿಟಿವ್‌ ಇರುವುದು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ, ಅರಂತೋಡಿನ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಹೋಂ ಕ್ವಾರಂಟೈನ್‌ ಮಾಡಲಾಗಿದೆ.

PREV
click me!

Recommended Stories

ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ; ಪ್ರೌಢಶಾಲೆಗೆ ನುಗ್ಗಿ ಪ್ರಾಂಶುಪಾಲನಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು!
ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!