ಕೊರೋನಾ ಭಯ: ಪ್ರವಾ​ಸಿ​ಗರ ವಾಹನ ತಡೆದು ವಾಪಸ್‌ ಕಳು​ಹಿ​ಸಿದ ಗ್ರಾಮ​ಸ್ಥ​ರು

By Kannadaprabha News  |  First Published Jul 5, 2020, 9:59 AM IST

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ಕೊಟ್ಟಿರುವುದರಿಂದ ಕೋವಿಡ್‌-19 ವೈರಸ್‌ ಸೋಂಕು ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಕೂಡಲೇ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ, ಬೆಟ್ಟದಳ್ಳಿ ಮತ್ತು ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲ ಗ್ರಾಮಸ್ಥರು ಬೆಟ್ಟದಳ್ಳಿ ಜಂಕ್ಷನ್‌ ಬಳಿ ಶನಿವಾರ ರಸ್ತೆ ತಡೆ ನಡೆಸಿ, ಪ್ರವಾಸಿಗರ ವಾಹನಗಳನ್ನು ತಡೆದು ವಾಪಸ್‌ ಕಳುಹಿಸಿದರು.


ಸೋಮವಾರಪೇಟೆ(ಜು.05): ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ಕೊಟ್ಟಿರುವುದರಿಂದ ಕೋವಿಡ್‌-19 ವೈರಸ್‌ ಸೋಂಕು ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಕೂಡಲೇ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ, ಬೆಟ್ಟದಳ್ಳಿ ಮತ್ತು ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲ ಗ್ರಾಮಸ್ಥರು ಬೆಟ್ಟದಳ್ಳಿ ಜಂಕ್ಷನ್‌ ಬಳಿ ಶನಿವಾರ ರಸ್ತೆ ತಡೆ ನಡೆಸಿ, ಪ್ರವಾಸಿಗರ ವಾಹನಗಳನ್ನು ತಡೆದು ವಾಪಸ್‌ ಕಳುಹಿಸಿದರು.

ನಗರ ಪ್ರದೇಶಗಳಲಿದ್ದ ಸೋಂಕು ಈಗ ಗ್ರಾಮೀಣ ಭಾಗದಲ್ಲೂ ಹರಡುತ್ತಿದೆ. ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಲ್ಲಳ್ಳಿ ಜಲಪಾತ ವೀಕ್ಷಿಸುವ, ಬೆಟ್ಟದ ಮೇಲೆ ಟ್ರಕ್ಕಿಂಗ್‌ ಮಾಡುವ ನೆಪದಲ್ಲಿ ರೆಸಾರ್ಟ್‌ಗಳಲ್ಲಿ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ಅಂಗಡಿಗಳಿಗೆ ತೆರಳಿ ವಸ್ತುಗಳನ್ನು ಖರೀದಿ ಮಾಡುತ್ತಾರೆ. ಅದರಲ್ಲಿ ಸೋಂಕಿತರನ್ನು ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದು ಶಾಂತಳ್ಳಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಲೋಕೇಶ್‌ ಕುಮಾರ್‌ ಆರೋಪಿಸಿದರು.

Tap to resize

Latest Videos

undefined

ಗರ್ಭಿ​ಣಿಗೆ ಕೊರೋನಾ ಪಾಸಿಟಿವ್‌: 10 ಮನೆ ಸೀಲ್‌ಡೌನ್

ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ರೈತಾಪಿ ವರ್ಗ ಸಂಕಷ್ಟದಲ್ಲಿದೆ. ಮಳೆಗಾಲದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಬೇಕಾಗಿದೆ. ಈಗಂತೂ ಕೊರೋನಾ ಭಯದಿಂದ ಮನೆ ಬಿಟ್ಟು ಹೊರಬರಲು ರೈತರು ಭಯಪಡುತ್ತಿದ್ದಾರೆ. ಹೊರಗಿನಿಂದ ಬರುವ ಪ್ರವಾಸಿಗರನ್ನು ಕಂಡರೆ ಭಯವಾಗುತ್ತಿದೆ ಎಂದು ಬೆಟ್ಟದಳ್ಳಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್‌.ಎಂ. ಸತೀಶ್‌ ಹೇಳಿದರು.

ನಿರ್ಬಂಧ ಹೇರಲು ಆಗ್ರ​ಹ:

ಮುಂದಿನ ನಾಲ್ಕು ದಿನಗಳ ಒಳಗೆ ಕೊಡಗಿಗೆ ಪ್ರವಾಸಿಗರು ಬರುವುದಕ್ಕೆ ನಿರ್ಬಂಧ ಹೇರಬೇಕು. ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಇದರ ಬಗ್ಗೆ ಕ್ರಮಕೈಗೊಳ್ಳಬೇಕು. ತಪ್ಪಿದಲ್ಲಿ ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಜನರು ಹಾಗು ಸ್ತ್ರೀಶಕ್ತಿ ಸಂಘದವರ ಸಹಕಾರದಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಸ್ಥಳದಲ್ಲಿ ಠಾಣಾಧಿಕಾರಿ ಸೂಕ್ತ ಬಂದೋಬಸ್‌್ತ ಕಲ್ಪಿಸಿದ್ದರು. ಗ್ರಾಮದ ಪ್ರಮುಖರುಗಳಾದ ಕೆ.ಕೆ. ಈರಪ್ಪ, ಕೆ.ಆರ್‌. ಶಂಕರ್‌, ಸಂಪತ್‌ ಮತ್ತಿತರರು ಇದ್ದರು. ಮಧ್ಯಾಹ್ನದ ತನಕ ಹೊರಜಿಲ್ಲೆಯ ವಾಹನಗಳನ್ನು ತಡೆದು ವಾಪಸ್‌ ಕಳುಹಿಸಲಾಯಿತು. ನಂತರ ಜಿಲ್ಲಾಡಳಿತಕ್ಕೆ 4 ದಿನದ ಗಡವು ನೀಡಿ, ಪ್ರತಿಭಟನೆ ಹಿಂಪಡೆದರು.

click me!