Bengaluru ಸಮಸ್ಯೆಗಳಿಗೆ ಶಾಶ್ವತ ಪರಿಹಾರ: ಸಿಎಂ ಬೊಮ್ಮಾಯಿ

Kannadaprabha News   | Asianet News
Published : Dec 22, 2021, 06:37 AM IST
Bengaluru ಸಮಸ್ಯೆಗಳಿಗೆ ಶಾಶ್ವತ ಪರಿಹಾರ: ಸಿಎಂ ಬೊಮ್ಮಾಯಿ

ಸಾರಾಂಶ

*   ರಾಜಕಾಲುವೆ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ *   ಮಳೆನೀರು ನುಗ್ಗದಂತೆ ಕ್ರಮ *   ಟೆಂಡರ್‌ ಶ್ಯೂರ್‌ ರಸ್ತೆ ನಿರ್ಮಾಣ, ಸ್ಮಾರ್ಟ್‌ಸಿಟಿ ಯೋಜನೆ ಉತ್ತಮ ಸೌಲಭ್ಯ  

ಬೆಳಗಾವಿ(ಡಿ.22):  ಬೆಂಗಳೂರನ್ನು(Bengaluru) ಕೇಂದ್ರ ವಾಣಿಜ್ಯ ಪ್ರದೇಶ ಎಂದು ಪರಿಗಣಿಸಿ ಮಾಡುತ್ತಿರುವ ಅಭಿವೃದ್ಧಿಯ ಮಾದರಿಯಲ್ಲಿಯೇ ರಾಜ್ಯದ ಇತರೆ ಜಿಲ್ಲೆಗಳನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತಿಳಿಸಿದ್ದಾರೆ.

ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌(Congress) ಸದಸ್ಯ ಕೆ.ಜೆ.ಜಾರ್ಜ್‌(KG George) ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನ ಮೂಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ(Permnent Solution) ಕಲ್ಪಿಸಲು ಸಂಕಲ್ಪ ಮಾಡಲಾಗಿದೆ. ರಾಜಕಾಲುವೆಗಳನ್ನು ಸರಿಪಡಿಸುವ ಕೆಲಸ ಕೈಗೊಳ್ಳಲಾಗಿದೆ. ಕಾಂಕ್ರೀಟ್‌ ರಾಜಕಾಲುವೆ ನಿರ್ಮಾಣಕ್ಕೆ ಯೋಜನಾ ವರದಿ ಸಿದ್ಧಪಡಿಸಲಾಗಿದೆ. ಮುಂದಿನ ದಿನದಲ್ಲಿ ಮಳೆ ಬಂದರೆ ನೀರು ನುಗ್ಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬೆಂಗ್ಳೂರು ಅಭಿವೃದ್ಧಿಗೆ 6,000 ಕೋಟಿ ವಿಶೇಷ ಪ್ಯಾಕೇಜ್‌: ಸಚಿವ ಅಶೋಕ್‌

ಟೆಂಡರ್‌ ಶ್ಯೂರ್‌ ರಸ್ತೆಗಳ ನಿರ್ಮಾಣ, ಸ್ಮಾರ್ಟ್‌ ಸಿಟಿ ಯೋಜನೆಯಡಿ ನಾಗರಿಕ ಸವಲತ್ತು ಉತ್ತಮಗೊಳಿಸುವುದು ಸರ್ಕಾರದ ಉದ್ದೇಶ. ಬೆಂಗಳೂರನ್ನು ಕೇಂದ್ರ ವಾಣಿಜ್ಯ ಪ್ರದೇಶ ಎಂದು ಪರಿಗಣಿಸಲಾಗಿದೆ. ಈ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಇದೇ ಮಾದರಿಯಲ್ಲಿ ರಾಜ್ಯದ(Karnataka) ಇತರೆ ಜಿಲ್ಲೆಗಳನ್ನು ಸಹ ಅಭಿವೃದ್ಧಿಗೊಳಿಸಲು ಸರ್ಕಾರ(Government of Karnataka) ಬದ್ಧವಾಗಿದೆ. ಸ್ಮಾರ್ಟ್‌ ಸಿಟಿ(SmartCity) ಯೋಜನೆಯಡಿ ಮೂರನೇ ಹಂತದಲ್ಲಿ ಬೆಂಗಳೂರು ಆಯ್ಕೆಯಾಗಿದೆ. ಒಂದು ಸಾವಿರ ಕೋಟಿ ರು. ಅನುದಾನ ಲಭ್ಯವಿದೆ. 16 ಕಾಮಗಾರಿಗಳ ಪೈಕಿ 10 ಕಾಮಗಾರಿಗಳು ಪೂರ್ಣಗೊಂಡಿವೆ. ಮಾರ್ಚ್‌ 2022ರ ವೇಳೆಗೆ ಮುಗಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

1000 ಕೋಟಿ ಅನುದಾನ

ಸಾರ್ಟ್‌ ಸಿಟಿ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ತಲಾ 500 ಕೋಟಿ ರು.ನಂತೆ ಒಟ್ಟು ಒಂದು ಸಾವಿರ ಕೋಟಿ ರು. ಅನುದಾನ(Grants) ಒದಗಿಸಲಾಗುತ್ತದೆ. ಬೆಂಗಳೂರು ಸ್ಮಾರ್ಟ್‌ ಸಿಟಿ ಲಿಮಿಟೆಡ್‌ಗೆ ನವೆಂಬರ್‌ವರೆಗೆ ಕೇಂದ್ರ ಸರ್ಕಾರದಿಂದ 243 ಕೋಟಿ ರು. ಮತ್ತು ರಾಜ್ಯ ಸರ್ಕಾರದಿಂದ 250 ಕೋಟಿ ರು. ನಂತೆ 493 ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ಭವಿಷ್ಯದ ಬೆಂಗಳೂರು ಅಭಿವೃದ್ಧಿಗೆ ಸರ್ಕಾರ ಬದ್ಧ

ಭವಿಷ್ಯದ 50 ವರ್ಷ ಗಮನದಲ್ಲಿಟ್ಟುಕೊಂಡು ಯೋಜನಾ ಬದ್ಧವಾಗಿ ರಾಜಧಾನಿ ಬೆಂಗಳೂರನ್ನು ಅಂತಾರಾಷ್ಟ್ರೀಯ ನಗರವನ್ನಾಗಿ ಮಾಡಲು ರಾಜ್ಯ ಸರ್ಕಾರ ಸಿದ್ಧವಿದೆ. ಈ ನಿಟ್ಟಿನಲ್ಲಿ ನಗರದಲ್ಲಿ ಮೂಲಭೂತ ಸೌಲಭ್ಯ ಹೆಚ್ಚಿಸಲು ಶಾಸಕರು, ಸಚಿವರು ಕಾರ್ಯೋನ್ಮುಖರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. 

ಡಿ.13 ರಂದು ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಅವರ ಸ್ವಕ್ಷೇತ್ರವಾದ ಗೋವಿಂದರಾಜ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್‌ ಕೇಂದ್ರ’, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ’ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಿದ್ದರು.

ಸಂಕಷ್ಟವಿದ್ದರೂ ಉತ್ತಮ ಆಡಳಿತ: ಬಸವರಾಜ ಬೊಮ್ಮಾಯಿ

ಬಳಿಕ ಮಾತನಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಆರೋಗ್ಯ ಇಲಾಖೆ(Department of Health) ಹಾಗೂ ಬಿಬಿಎಂಪಿ(BBMP) ಸೇರಿ ಆರೋಗ್ಯ ವಲಯದ ನಿರ್ವಹಣೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ವಲಯದ ಸೂಕ್ತ ನಿರ್ವಹಣೆಗಾಗಿ ಏಕರೂಪ ವ್ಯವಸ್ಥೆ ತರುವ ಚಿಂತನೆ ನಡೆದಿದೆ. ಅದಕ್ಕಾಗಿ ಆರೋಗ್ಯ ಸಿಬ್ಬಂದಿ ಹೆಚ್ಚಿಸುವ ಜತೆಗೆ ಎಲ್ಲ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು. ಬಡವರಿಗೆ ತುರ್ತು ಆರೋಗ್ಯ ಸೇವೆ ಒದಗಿಸಲು ವಾರ್ಡ್‌ಗೆ ಒಂದರಂತೆ ಆಸ್ಪತ್ರೆ(Hospital) ನಿರ್ಮಿಸಲಾಗುವುದು ಎಂದು ತಿಳಿಸಿದ್ದರು.

ನಗರದಲ್ಲಿ ಸೂರಿಲ್ಲದ ಬಡವರಿಗೆ ಮನೆ ಕಟ್ಟಿಕೊಡಲು ಇರುವ ಕಾನೂನು ತೊಡಕು ನಿವಾರಣೆಗಾಗಿ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳು, ಸಚಿವರ ಜತೆ ಚರ್ಚಿಸಿದ್ದು, ಈ ಬಗ್ಗೆ ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ. ಮನೆ ಇದ್ದು, ದಾಖಲೆ ಇಲ್ಲದವರಿಗೆ ದಾಖಲಾತಿ ನೀಡಲು ಕ್ರಮ ವಹಿಸಲಾಗುವುದು. ರಾಜಧಾನಿ ನಾಗರಿಕರಿಗೆ ಮನೆ ಬಾಗಿಲಿಗೆ ಎಲ್ಲ ಸರ್ಕಾರಿ ಸೌಲಭ್ಯ(Government Facility) ಲಭ್ಯವಾಗುವಂತೆ ನೋಡಿಕೊಳ್ಳಲಿದ್ದೇವೆ. ಸ್ಥಳೀಯ ಮೂಲಸೌಕರ್ಯ ಅಭಿವೃದ್ಧಿಗಾಗಿ ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುವುದು ಎಂದು ಭವಿಷ್ಯದ ಬೆಂಗಳೂರು ಅಭಿವೃದ್ಧಿಯ ಯೋಜನೆಗಳ ಕುರಿತು ಮಾಹಿತಿ ನೀಡಿದ್ದರು. 
 

PREV
Read more Articles on
click me!

Recommended Stories

ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ