ಶಿರಾ ಜನತೆಯ ಆರ್ಶೀವಾದದಿಂದ ಶಾಸಕನಾಗಿ ಆಯ್ಕೆಯಾದ ಬಳಿಕ ಭದ್ರಾ, ಎತ್ತಿನಹೊಳೆ ನೀರಾವರಿ ಯೋಜನೆಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ ಶಿರಾ ಕ್ಷೇತ್ರದಲ್ಲಿ ಶಾಶ್ವತವಾಗಿ ನೀರಿನ ಸಮಸ್ಯೆಗೆ ಮುಕ್ತಿ ಕಾಣಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಹೇಳಿದರು.
ಶಿರಾ : ಶಿರಾ ಜನತೆಯ ಆರ್ಶೀವಾದದಿಂದ ಶಾಸಕನಾಗಿ ಆಯ್ಕೆಯಾದ ಬಳಿಕ ಭದ್ರಾ, ಎತ್ತಿನಹೊಳೆ ನೀರಾವರಿ ಯೋಜನೆಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ ಶಿರಾ ಕ್ಷೇತ್ರದಲ್ಲಿ ಶಾಶ್ವತವಾಗಿ ನೀರಿನ ಸಮಸ್ಯೆಗೆ ಮುಕ್ತಿ ಕಾಣಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಹೇಳಿದರು.
ಹೊನ್ನಗೊಂಡನಹಳ್ಳಿ, ಮಾಗೋಡು ಹಾಗೂ ರತ್ನಸಂದ್ರ ಗ್ರಾ.ಪಂ.ನ ವಿವಿಧ ಹಳ್ಳಿಗಳಲ್ಲಿ ಪ್ರಚಾರ ಕೈಗೊಂಡು ಮಾತನಾಡಿದರು. ಚಿಕ್ಕ ವಯಸ್ಸಿನಲ್ಲೇ ಶಾಸಕನಾಗಿ ವಿಧಾನಸಭೆ ಪ್ರವೇಶಿಸಿದ ನನಗೆ ನಾಲ್ಕು ದಶಕಗಳ ಅನುಭವ, ಸಂಪರ್ಕದ ಕಾರಣದಿಂದ 3500 ಕೋಟಿ ಅನುದಾನವನ್ನು ಶಿರಾಕ್ಕೆ ತರಲು ಸಾಧ್ಯವಾಯಿತು. ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಸಾಕಷ್ಟುಕೈಗಾರಿಕೆಗಳನ್ನು ಆರಂಭಿಸಲು ಸಹಕಾರ ನೀಡಿ ಉದ್ಯೋಗ ಸೃಷ್ಟಿಸಲಾಗುವುದು ಎಂದರು.
ಶಿರಾ ಅಭಿವೃದ್ಧಿ ಆಗಿರಲಿಲ್ಲ, ನಾನೇ ಅಭಿವೃದ್ಧಿ ಮಾಡಿರೋದು, ನಾನು ಬಂದ ನಂತರವೇ ಎಲ್ಲಾ ಅಭಿವೃದ್ಧಿ ಆಗಿದೆ ಎನ್ನುವ ರೀತಿಯಲ್ಲಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಅವರ ದರ್ಪದ ಮಾತು ಈವರೆಗೂ ಕ್ಷೇತ್ರದಲ್ಲಿ ಪ್ರತಿನಿಧಿಸಿದ್ದ ಶಾಸಕರನ್ನು ಅವಮಾನಿಸಿದ ಹಾಗೆ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಟಿ.ಲೋಕೇಶ್, ಜಿ.ಪಂ.ಮಾಜಿ ಸದಸ್ಯ ಅರೇಹಳ್ಳಿ ರಮೇಶ್, ಸಿ.ಆರ್.ಉಮೇಶ್, ಮುಖಂಡರಾದ ಗುಳಿಗೇನಹಳ್ಳಿ ನಾಗರಾಜ್, ಚಿಕ್ಕತಿಮ್ಮಣ್ಣ, ಬಾಂಬೆ ರಾಜಣ್ಣ, ಶೋಭ ನಾಗರಾಜ್, ಸುರೇಶ್, ಅಶೋಕ್, ಮಹದೇವಣ್ಣ, ಲಕ್ಷ್ಮೀಕಾಂತ್, ವಿಜಯಮ್ಮ, ಮಂಜುನಾಥ್, ರಾಜಣ್ಣ, ಸೋಮಣ್ಣ, ಹೇಮಂತ್ ಗೌಡ ಸೇರಿದಂತೆ ಹಲವರು ಹಾಜರಿದ್ದರು.
29ಶಿರಾ2: ಶಿರಾ ತಾಲೂಕಿನ ಹೊನ್ನಗೊಂಡನಹಳ್ಳಿ, ಮಾಗೋಡು ಹಾಗೂ ರತ್ನಸಂದ್ರ ಗ್ರಾಪಂನ ವಿವಿಧ ಹಳ್ಳಿಗಳಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಚುನಾವಣಾ ಪ್ರಚಾರ ಮಾಡಿ ಮಾತನಾಡಿದರು.
ಕಾಡುಗೊಲ್ಲರ ಧ್ವನಿ ಎತ್ತಿದ್ದು ಜಯಚಂದ್ರ
ಶಿರಾ : ಕಾಡುಗೊಲ್ಲ ಸಮುದಾಯಕ್ಕೆ ನ್ಯಾಯ ಒದಗಿಸಿದ್ದು ಕಾಂಗ್ರೆಸ್ ಪಕ್ಷ. ಕಾಡುಗೊಲ್ಲ ಸಮುದಾಯವನ್ನು ಜಾತಿಪಟ್ಟಿಗೆ ಸೇರಿಸಲು ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದು ಮಾಜಿ ಸಚಿವ ಟಿ.ಬಿ.ಜಯಚಂದ್ರ. ಆದ್ದರಿಂದ ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ತೀರ್ಮಾನಿಸಿದ್ದೇವೆ ಎಂದು ಕಾಡುಗೊಲ್ಲ ಮುಖಂಡರಾದ ಹಾರೋಗೆರೆ ಮಾರಣ್ಣ ಹೇಳಿದರು.
ನಗರದ ಶ್ರೇಯಸ್ ಕಂಫಟ್ಸ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರು ಕಾಡುಗೊಲ್ಲ ಜನಾಂಗದ ಪರವಾಗಿ ದಲ್ಲಿ ಧ್ವನಿ ಎತ್ತಿ ಎಸ್.ಟಿ. ಮೀಸಲಾತಿಗಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಶ್ರಮಿಸಿದ್ದಾರೆ. ಕಾಡುಗೊಲ್ಲ ಪದವನ್ನು ಜಾತಿ ಪಟ್ಟಿಯಲ್ಲಿ ಹಟ್ಟಿಗೊಲ್ಲ, ಅಡವಿಗೊಲ್ಲ, ಕಾಡುಗೊಲ್ಲ ಎಂದು ಸೇರ್ಪಡೆಯಾಗಲು ಟಿ.ಬಿ.ಜಯಚಂದ್ರ ಅವರೇ ಕಾರಣ. ನಮ್ಮ ಸಮುದಾಯದ ವಿದ್ಯಾರ್ಥಿ ನಿಲಯಕ್ಕೆ ನಗರದಲ್ಲಿ 1 ಎಕರೆ ಜಮೀನು ನೀಡಿ 75 ಲಕ್ಷ ರು. ಅನುದಾನವನ್ನು ನೀಡಿ ಕಟ್ಟಡ ನಿರ್ಮಾಣಕ್ಕೆ ಸಹಾಯ ಮಾಡಿದ್ದರು. ಆದರೆ ನಂತರ ಬಂದ ಶಾಸಕರು ಯಾವುದೇ ಅನುದಾನ ನೀಡದೆ ಇಲ್ಲಿಯವರೆಗೂ ಸಹ ನೆನೆಗುದಿಗೆ ಬಿದ್ದಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಕಾಡುಗೊಲ್ಲ ಸಮುದಾಯದ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಮತ್ತು ಶಿರಾ ಕ್ಷೇತ್ರದಲ್ಲಿ ಟಿ.ಬಿ.ಜಯಚಂದ್ರ ಅವರು ಶಾಸಕರಾಗಬೇಕು ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಸೆರ್ಪಡೆಯಾಗುತ್ತಿದ್ದೇವೆ ಎಂದರು.