ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆ| ಕಲಬುರಗಿ ನಗರದಲ್ಲಿ ನಡೆದ ಘಟನೆ| ನಾಗರಾಜ್ ಸಾವು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ ಕುಟುಂಬಸ್ಥರು| ಅನಿತಾ ಎಂಬ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ನಾಗರಾಜ್| ಅನಿತಾ ಕೊಲೆ ಮಾಡಿಸಿದ್ದಾಳೆ ಎಂದು ಆರೋಪಿಸಿದ ಮೃತ ನಾಗರಾಜ್ ಕುಟುಂಬಸ್ಥರು|
ಕಲಬುರಗಿ(ಜ.08): ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾದ ಘಟನೆ ನಗರದ ಗಣೇಶ ನಗರದಲ್ಲಿರುವ ಮನೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನ ತಾಲೂಕಿನ ಹರಸೂರು ಗ್ರಾಮದ ನಿವಾಸಿ ನಾಗರಾಜ್ ಸಮಾಳ(33) ಎಂದು ಗುರುತಿಸಲಾಗಿದೆ.
ನಾಗರಾಜ್ ಸಮಾಳ ಸಾವು ಆತ್ಮಹತ್ಯೆಯಲ್ಲ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅನಿತಾ ಎಂಬ ಮಹಿಳೆ ಕೊಲೆ ಮಾಡಿ ನೇಣು ಹಾಕಿಸಿದ್ದಾಳೆ ಅಂತ ಆರೋಪಿಸಲಾಗಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ನಾಗರಾಜ್ ಸಮಾಳ ಅನಿತಾ ಎಂಬ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಹೇಳಲಾಗುತ್ತಿದೆ. ನಾಗರಾಜ್ ಗೆ ಪದೇ ಪದೆ ಅನಿತಾ ಕಿರುಕುಳ ನೀಡುತ್ತಿದ್ದಳು. ಹೀಗಾಗಿ ಅನಿತಾ ಅವರೇ ನಾಗರಾಜ್ ಅವರನ್ನ ಕೊಲೆ ಮಾಡಿಸಿ ನೇಣು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕಲಬುರಗಿ ನಗರದ ಮಹಾತ್ಮ ಬಸವೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.