ಹಾವೇರಿ: ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

Suvarna News   | Asianet News
Published : Nov 26, 2020, 11:37 AM IST
ಹಾವೇರಿ: ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಸಾರಾಂಶ

ತುಂಗಭದ್ರಾ ನದಿಯಲ್ಲಿ ಮುಳುಗಿ ವ್ಯಕ್ತಿಯೊಬ್ಬ ಸಾವು| ಹಾವೇರಿ ತಾಲೂಕಿನ ಹಾವನೂರು ಗ್ರಾಮದ ಬಳಿ ನಡೆದ ಘಟನೆ| ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆ|  

ಹಾವೇರಿ(ನ.26): ತುಂಗಭದ್ರಾ ನದಿಯಲ್ಲಿ ವ್ಯಕ್ತಿಯೊಬ್ಬ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಹಾವನೂರು ಗ್ರಾಮದ ಬಳಿ ಇಂದು(ಗುರುವಾರ) ನಡೆದಿದೆ. ಹೊನ್ನಪ್ಪ ಅನ್ವೇರಿ (30) ಮೃತ ದುರ್ದೈವಿಯಾಗಿದ್ದಾನೆ. 

ಮೃತ ಹೊನ್ನಪ್ಪ ಅನ್ವೇರಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹನುಮಾಪುರ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿಗಳು: ಕೃಷಿ ಸಚಿವ ಪಾಟೀಲ

ನೀರು ಪಾಲಾದ ಹೊನ್ನಪ್ಪ ಅನ್ವೇರಿ ಶೋಧಕಾರ್ಯ ಆರಂಭಿಸಲಾಗಿದೆ. ಮೀನು ಹಿಡಿಯಲು ಹೋಗಿ ನದಿ ನೀರು ಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ. 
 

PREV
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ