ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ಓರ್ವನ ಸಾವು, ನಾಲ್ವರ ಪ್ರಾಣ ಉಳಿಸಿದ ಸ್ಥಳೀಯರು

Suvarna News   | Asianet News
Published : Aug 13, 2020, 11:55 AM IST
ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ಓರ್ವನ ಸಾವು, ನಾಲ್ವರ ಪ್ರಾಣ ಉಳಿಸಿದ ಸ್ಥಳೀಯರು

ಸಾರಾಂಶ

ರಸ್ತೆ ಪಕ್ಕ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು| ಹುಬ್ಬಳ್ಳಿ ಸಮೀಪದ ಅದರಗುಂಚಿ ಕ್ರಾಸ್ ಬಳಿ ನಡೆದ ಘಟನೆ| ಅಪಘಾತ ನಡೆದ ಸಂದರ್ಭದಲ್ಲಿ ಜನರು ನಾಲ್ಕು ಜನರ ಪ್ರಾಣ ಉಳಿಸಿದ ಸ್ಥಳೀಯರು| ಗಾಯಾಗಳನ್ನ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲು| 

ಹುಬ್ಬಳ್ಳಿ(ಆ.13):  ಲಾರಿ ಮತ್ತು ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ, ನಾಲ್ಕು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಸಮೀಪದ ಅದರಗುಂಚಿ ಕ್ರಾಸ್ ಬಳಿ ಇಂದು(ಗುರುವಾರ) ನಡೆದಿದೆ. ಮೃತ ವ್ಯಕ್ತಿಯನ್ನು ತಮಿಳುನಾಡು ಮೂಲದ ಅಯ್ಯನಾರ್ (35) ಎಂದು ಗುರುತಿಸಲಾಗಿದೆ.

ರಸ್ತೆ ಪಕ್ಕ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಅಯ್ಯನಾರ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಅಪಘಾತ ನಡೆದ ಸಂದರ್ಭದಲ್ಲಿ ಜನರು ನಾಲ್ಕು ಜನರ ಪ್ರಾಣ ಉಳಿಸಿದ್ದಾರೆ. ಕಾರಿನ ಗ್ಲಾಸ್ ಒಡೆದು ಕಾರಿನಲ್ಲಿದ್ದವರ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. 

ವಿಜಯಪುರ: ಖಾಸಗಿ ಬಸ್‌ಗೆ ಬೆಂಕಿ, ಒಂದೇ ಕುಟುಂಬದ ಐವರ ದುರ್ಮರಣ

ನಾಲ್ಕು ಜನರ ಪ್ರಾಣ ರಕ್ಷಣೆ ಮಾಡಿ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರಿನಲ್ಲಿದ್ದವರು ತಮಿಳುನಾಡಿನ ಮೂಲದವರಾಗಿದ್ದು , ಸೇಲಂನಿಂದ ಮುಂಬೈಗೆ ಕಾರು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!