ರಾಯಚೂರು: ಹಾಡಹಗಲೇ ವ್ಯಕ್ತಿಯ ಬರ್ಬರ ಕೊಲೆ, ಬೆಚ್ಚಿ ಬಿದ್ದ ಜನತೆ

Suvarna News   | Asianet News
Published : Mar 11, 2020, 02:42 PM IST
ರಾಯಚೂರು: ಹಾಡಹಗಲೇ ವ್ಯಕ್ತಿಯ ಬರ್ಬರ ಕೊಲೆ, ಬೆಚ್ಚಿ ಬಿದ್ದ ಜನತೆ

ಸಾರಾಂಶ

ವ್ಯಕ್ತಿಯೋರ್ವನನ್ನ ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು| ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕಜ್ಜಿ ಬಂಡಿ ಗ್ರಾಮದ ಬಳಿ ನಡೆದ ಘಟನೆ| ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು|

ರಾಯಚೂರು(ಮಾ.11): ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೋರ್ವನನ್ನ ಕೊಲೆ ಮಾಡಿ ಪರಾರಿಯಾದ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಕಜ್ಜಿ ಬಂಡಿ ಗ್ರಾಮದ ಬಳಿ ಇಂದು(ಬುಧವಾರ) ನಡೆದಿದೆ. ಶೇಖರ್ ನಿಲೋಗಲ್ ಗಲಗ್ (35) ಹತ್ಯೆಯಾದ ವ್ಯಕ್ತಿಯಾಗಿದ್ದಾರೆ.

ಮೃತ ಶೇಖರ್ ನಿಲೋಗಲ್ ಗಲಗ್ ಗ್ರಾಮದವರಾಗಿದ್ದಾರೆ. ಶೇಖರ್ ನಿಲೋಗಲ್ ಕ್ರೂಸರ್ ಚಾಲಕನಾಗಿದ್ದ ಎಂದು ತಿಳಿದು ಬಂದಿದೆ. ಹಾಡಹಗಲೇ ಕೊಲೆಯಾಗಿದ್ದರಿಂದ ಗ್ರಾಮದ ಜನತೆ ಆತಂಕಕ್ಕೊಳಗಾಗಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ದುಷ್ಕರ್ಮಿಗಳು ಶೇಖರ್ ನಿಲೋಗಲ್ ಅವರನ್ನ ನಡುರಸ್ತೆಯಲ್ಲಿ ಬರ್ಬರ ಹತ್ಯೆಗೈದಿದ್ದಾರೆ. ಕೊಲೆಗೆ ಹಳೆ ವೈಷಮ್ಯ ಕಾರಣವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ