ಯುವಜನರ ಭವಿಷ್ಯವನ್ನು ಸಮಾಧಿ ಮಾಡಿದ ಬಿಜೆಪಿ ಸರ್ಕಾರ, ಈಗ ಆ ಸಮಾಧಿ ಮೇಲೆ ಯುವಜನರ ಉತ್ಸವ ಮಾಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಕಾಂಗ್ರೆಸ್ ಮುಖಂಡ ಪಿ.ಎಚ್.ನೀರಲಕೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವರದಿ: ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್
ಧಾರವಾಡ (ಜ.13): ಯುವಜನರ ಭವಿಷ್ಯವನ್ನು ಸಮಾಧಿ ಮಾಡಿದ ಬಿಜೆಪಿ ಸರ್ಕಾರ, ಈಗ ಆ ಸಮಾಧಿ ಮೇಲೆ ಯುವಜನರ ಉತ್ಸವ ಮಾಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಕಾಂಗ್ರೆಸ್ ಮುಖಂಡ ಪಿ.ಎಚ್.ನೀರಲಕೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಯುವಜನರಿಗೆ ಉದ್ಯೋಗ ನೀಡದೇ, ಶಿಷ್ಯವೇತನ ನೀಡದೆ, ಯುವಜನರ ಶಿಕ್ಷಣಕ್ಕೆ ದ್ರೋಹ ಬಗೆಯಲಾಗುತ್ತಿದೆ. KPSC, KEA, KSP ಅಭ್ಯರ್ಥಿಗಳಿಗೆ ವಂಚನೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ನಿನ್ನೆ ಮೋದಿ ಅವರು ಹುಬ್ಬಳ್ಳಿಯಲ್ಲಿ ಉದ್ಘಾಟಿಸಿರುವುದು ಉತ್ಸವವನ್ನಲ್ಲ, ಯುವಕರ ಭವಿಷ್ಯಕ್ಕೆ ಬಿಜೆಪಿ ತೋಡಿದ ಸಮಾಧಿಯನ್ನ ಎಂದು ಖಂಡಿಸಿದ್ದಾರೆ. ಯುವಕರಿಗೆ ಪಕೋಡಾ ಮಾರುವ ಸಲಹೆ ನೀಡಿದ ಮೋದಿ ಅವರೇ, ಯುವಜನೋತ್ಸವ ಎಂದರೆ ಸಿನೆಮಾ ತಾರೆಯರನ್ನು ಕರೆಸಿ ಹಾಡು, ಡ್ಯಾನ್ಸುಗಳ ಕಾರ್ಯಕ್ರಮ ಮಾಡುವುದಲ್ಲ.ರಾಜ್ಯದಲ್ಲಿ 1500ಕ್ಕೂ ಹೆಚ್ಚು ಯುವಜನರು ನಿರುದ್ಯೋಗದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಯುವಜನರ ಈ ಸಾವು ಹಾಗೂ ನೋವಿನ ಬಗ್ಗೆ ತಾವು ಮೌನ ಮುರಿಯುವಿರಾ? ಎಂದು ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮದಲ್ಲಿ ಅದೇ ಕ್ಷೇತ್ರದ ಶಾಸಕ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ಕಡೆಗಣಿಸಿದೆ. ಅವರದ್ದೇ ಕ್ಷೇತ್ರದಲ್ಲಿ ಅವರನ್ನೇ ಕಡೆಗಣಿಸುತ್ತಿರುವುದು ಇದು ಎರಡನೇ ಬಾರಿ.ಬಿಎಸ್ವೈ ವಿರುದ್ಧ ಕಟೀಲ್ + ಸಂತೋಷ್ ಜೋಡಿಯಾದರೆ,ಶೆಟ್ಟರ್ ವಿರುದ್ಧ ಬೊಮ್ಮಾಯಿ ಜೋಶಿ ಜೋಡಿಯಾಗಿದ್ದಾರೆ ಎಂದು ಹೇಳಿದ್ದಾರೆ.
ದಾರವಾಡದಲ್ಲಿರುವ ಕೈಮಗ್ಗ ಧ್ವಜ ತಯಾರಕರ ಬದುಕಿಗೆ ಮಾರಕವಾಗುವಂತೆ ಚೀನಾ ಪಾಲಿಸ್ಟರ್ ಧ್ವಜಕ್ಕೆ ಅನುಮತಿ ನೀಡಿದ್ದೀರಿ, ಹುಬ್ಬಳ್ಳಿಗೆ ಬಂದು ಪರಂಪರಾಗತವಾಗಿ ಧ್ವಜ ತಯಾರಿಸುತ್ತಿದ್ದವರ ಬದುಕಿನ ಸಂಕಷ್ಟಗಳನ್ನು ಆಲಿಸಿದಿರಾ? ಅವರ ಬಗ್ಗೆ ಮಾತಾಡದೆ ಮೌನವಹಿಸಿರುವುದೇಕೆ? ಎಂದು ಪ್ರಶ್ನಿಸಿದ್ದಾರೆ.
National Youth Festival:15ರಂದು ಗಿನ್ನಿಸ್ ದಾಖಲೆಗೆ ಯೋಗಥಾನ್!
ವಿಶ್ವ ವೇದಿಕೆಯಲ್ಲಿ ನಿಂತು ಪ್ರಜಾಪ್ರಭುತ್ವದ ಬಗ್ಗೆ ಪುಂಖಾನುಪುಂಖವಾಗಿ ಭಾಷಣ ಮಾಡುವ ನರೇಂದ್ರ ಮೋದಿ ಅವರೇ, ಪ್ರಜಾಪ್ರಭುತ್ವ ವಿರೋಧಿಯಾಗಿ ಮತದಾರರ ಮಾಹಿತಿ ಕಳವಿನ ಚಿಲುಮೆ ಹಗರಣವನ್ನು ಮುಚ್ಚಿ ಹಾಕಲಾಗುತ್ತಿದೆ. ಬಿಜೆಪಿ ಸರ್ಕಾರದ ಸಚಿವರು ಬಾಗಿಯಾಗಿರುವ ಈ ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ವಹಿಸುವಿರಾ? ಎಂದು ನೀರಲಕೇರಿ ಅವರು ಪ್ರಶ್ನಿಸಿದ್ದಾರೆ.
National Youth Festival: ಸಾರ್ವಜನಿಕರ ಗಮನ ಸೆಳೆದ ಸಿರಿಧಾನ್ಯ ನಡಿಗೆ
ಮಹದಾಯಿ ಯೋಜನೆ ವಿರೋಧಿಸಿ, DPR ಒಪ್ಪಿಗೆಯನ್ನು ರದ್ದುಪಡಿಸುವಂತೆ ಗೋವಾ ಸಚಿವರ ನಿಯೋಗ ಮಾಡಿದ ಮನವಿಗೆ ಅಮಿತ್ ಶಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರಂತೆ. ಸಕಾರಾತ್ಮಕ ಅಂದರೆ ಏನು ಬೊಮ್ಮಾಯಿ ಅವರೇ? ಕರ್ನಾಟಕಕ್ಕೆ ಅನ್ಯಾಯ ಮಾಡುವುದೇ? ಗೋವಾದ ಬಿಜೆಪಿ ಸರ್ಕಾರದ ವಿರೋಧಕ್ಕೆ ನಿಲುವು ಏನು? ಮೌನವೇಕೆ? ಅಲ್ಲದೆ ಕೇಂದ್ರ ಸರಕಾರದ ಅನುದಾನದಲ್ಲಿ ನಡೆಯುತ್ತಿರುವ ಯುವಜನೋತ್ಸವ ಸಾರ್ವಜನಿಕರ ತೆರಿಗೆ ಹಣ, ಆದರ ದುರುಪಯೋಗ ಭಾಗವಾಗಿ ಬಿಜೆಪಿ ಪಕ್ಷದ ಫ್ಲೆಕ್ಸ್ ಮತ್ತು ಕಟೌಟ್ ಹಾಕಿ ಬಿಟ್ಟಿ ಪ್ರಚಾರಕ್ಕಾಗಿ ದುರುಪಯೋಗ ಮಾಡಿದ ಬಿಜೆಪಿ ನಡೆ ಖಂಡನಾರ್ಹ,ಅಪರಾಧ ಎಂದು ನೀರಲಕೇರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕಿಡಿಕಾರಿದ್ದಾರೆ.