ಮಹದಾಯಿ ನ್ಯಾಯಾಧಿಕರಣದ ತೀರ್ಪಿನ ಬಗ್ಗೆ ಗೋವಾ ಮುಖ್ಯಮಂತ್ರಿ ಅಸಮಧಾನಗೊಂಡಿರುವ ಬಗ್ಗೆ ನನಗೆ ಗೊತ್ತಿಲ್ಲ. ಆದರೆ, ಹತ್ತು ವರ್ಷಗಳ ಕಾಲ ಎಲ್ಲ ಆಯಾಮಗಳಲ್ಲಿ ಪರಿಶೀಲನೆ ನಡೆಸಿ ನ್ಯಾಯಾಧಿಕರಣ ತೀರ್ಪು ನೀಡಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ(ಫೆ.01): ಮಹದಾಯಿ ಯೋಜನೆ ಕುರಿತಂತೆ ನ್ಯಾಯಾಧಿಕರಣ ಈಗಾಗಲೇ ತೀರ್ಪು ನೀಡಿದೆ. ಆ ತೀರ್ಪಿನ ಅನುಷ್ಠಾನದ ಅಧಿಸೂಚನೆಯನ್ನು 2017ರಲ್ಲೇ ಕೇಂದ್ರ ಸರ್ಕಾರ ಹೊರಡಿಸಿತ್ತು. ಇದೀಗ ಡಿಪಿಆರ್ ಸಹ ಅನುಮೋದನೆಗೊಂಡಿದೆ. ಕಾನೂನು ಹೋರಾಟದಿಂದಲೇ ಯೋಜನೆ ಜಾರಿಗೆ ಬಂದಿದೆ. ಹಂತ ಹಂತವಾಗಿ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಹದಾಯಿ ನ್ಯಾಯಾಧಿಕರಣದ ತೀರ್ಪಿನ ಬಗ್ಗೆ ಗೋವಾ ಮುಖ್ಯಮಂತ್ರಿ ಅಸಮಧಾನಗೊಂಡಿರುವ ಬಗ್ಗೆ ನನಗೆ ಗೊತ್ತಿಲ್ಲ. ಆದರೆ, ಹತ್ತು ವರ್ಷಗಳ ಕಾಲ ಎಲ್ಲ ಆಯಾಮಗಳಲ್ಲಿ ಪರಿಶೀಲನೆ ನಡೆಸಿ ನ್ಯಾಯಾಧಿಕರಣ ತೀರ್ಪು ನೀಡಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅಭಿವೃದ್ಧಿಗೆ ಸರ್ಕಾರ ಬದ್ಧ, ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ರೈತರಿಗೆ ವಿಶೇಷ ಆದ್ಯತೆ: ಸಿಎಂ ಬೊಮ್ಮಾಯಿ
ರೈತಶಕ್ತಿ ಯೋಜನೆಗೆ ಚಾಲನೆ: 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ರೈತಶಕ್ತಿ ಯೋಜನೆಗೆ ಮಂಗಳವಾರ ಚಾಲನೆ ನೀಡಲಾಗಿದೆ. ರೈತರಿಗೆ ಯಂತ್ರೋಪಕರಣ ಬಳಸುವಾಗ ಆಗುವ ಡೀಸೆಲ್ ವೆಚ್ಚ ಭರಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯದ ರೈತರಿಗೆ ಅನುಕೂಲ ಕಲ್ಪಿಸುವ ಸದುದ್ದೇಶದಿಂದ ರೈತಪರ ಯೋಜನೆ ಜಾರಿಗೊಳಿಸಲಾಗಿದೆ ಎಂದರು.
ಮೋದಿಯಿಂದ ಉದ್ಘಾಟನೆ
ಬೆಂಗಳೂರಿನಲ್ಲಿ ಫೆ. 6ರಂದು ನಡೆಯಲಿರುವ ‘ಇಂಡಿಯಾ ಎನರ್ಜಿ ವೀಕ್’ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಬಳಿಕ ತುಮಕೂರಿನಲ್ಲಿ ಎಚ್‌ಎಎಲ್ ಹೆಲಿಕಾಪ್ಟರ್ ಉತ್ಪಾದನಾ ಘಟಕವನ್ನು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.