Yoga Day in Mysuru; ಜೂನ್ 20 ರಂದು 1 ಲಕ್ಷ ಫಲಾನುಭವಿಗಳ ಜತೆ ಮೋದಿ ಸಂವಾದ

Published : Jun 09, 2022, 03:27 AM IST
Yoga Day in Mysuru;  ಜೂನ್ 20 ರಂದು 1 ಲಕ್ಷ ಫಲಾನುಭವಿಗಳ ಜತೆ ಮೋದಿ ಸಂವಾದ

ಸಾರಾಂಶ

20ಕ್ಕೆ ಮೈಸೂರಲ್ಲಿ 1 ಲಕ್ಷ ಫಲಾನುಭವಿಗಳ ಜತೆ ಮೋದಿ ಸಂವಾದ ಕೇಂದ್ರ ಯೋಜನೆ ಫಲಾನುಭವಿಗಳ ಜತೆ ಚರ್ಚೆ 21ಕ್ಕೆ ಬೆಳಗ್ಗೆ 7ಕ್ಕೆ ಮೋದಿ ಯೋಗ ಕಾರ್ಯಕ್ರಮ

ಮೈಸೂರು (ಜೂ.9): ವಿಶ್ವ ಯೋಗ ದಿನದ (International  Yoga Day) ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ (PM narendra Modi) ಅವರು ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ನಿರೀಕ್ಷೆ ಇದೆ ಎಂದು ಸಂಸದ ಪ್ರತಾಪಸಿಂಹ ತಿಳಿಸಿದ್ದಾರೆ.

ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ಮೋದಿ ಅವರು ಜೂ.20ರ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸುವರು. ಈ ವೇಳೆ ಮೈಸೂರಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ಏರ್ಪಡಿಸಲಾಗಿದೆ. ಇದಕ್ಕಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮದಲ್ಲಿ 1 ಲಕ್ಷ ಫಲಾನುಭವಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಇದೇ ವೇಳೆ ಚಾಮುಂಡಿ ಬೆಟ್ಟ ಹಾಗೂ ಸುತ್ತೂರು ಮಠಕ್ಕೆ ಪ್ರಧಾನಿ ಕರೆತರುವ ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಜೂ.20ರ ಕಾರ್ಯಕ್ರಮ ಇನ್ನೂ ಅಧಿಕೃತವಾಗಿಲ್ಲ ಎಂದರು.

BANNERGHATTA ; ಹೋಟೆಲ್‌ನಲ್ಲಿ ರೈಲಿನ ಮೂಲಕ ಟೇಬಲ್‌ಗೆ ಊಟ!

ಯೋಗದಿನಾಚರಣೆ ಕಾರ್ಯಕ್ರಮಕ್ಕೆ ಜೂ.21ರ ಬೆಳಗ್ಗೆ 6.30ಕ್ಕೆ ಅಂಬಾವಿಲಾಸ ಅರಮನೆಗೆ ಪ್ರಧಾನಿ ಆಗಮಿಸುವರು. ಇಲ್ಲಿ 10 ರಿಂದ 15 ಸಾವಿರ ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವೇದಿಕೆಯಲ್ಲಿ ಪ್ರಧಾನಿ ಮೋದಿ, ಸಿಎಂ, ರಾಜ್ಯಪಾಲರು, ಕೇಂದ್ರ ಆಯುಷ್‌ ಇಲಾಖೆ ಸಚಿವರು ಹಾಗೂ ಉಸ್ತುವಾರಿ ಸಚಿವರಿಗೆ ಮಾತ್ರ ಇರಲಿದ್ದಾರೆ ಎಂದರು.

ಯೋಗದಿನದಂದು ಯೋಗಪಟುಗಳು ಬೆಳಗ್ಗೆ 5.30ರ ಒಳಗೆ ಅರಮನೆ ಆವರಣಕ್ಕೆ ಆಗಮಿಸಬೇಕು. ಬೆಳಗ್ಗೆ 6:30ರಿಂದ 7 ರವರೆಗೆ ವೇದಿಕೆ ಕಾರ್ಯಕ್ರಮ, 7 ರಿಂದ 7.45 ರವರಗೆ ಪ್ರಧಾನಿ ಅವರೊಂದಿಗೆ ಯೋಗ ಪ್ರದರ್ಶನ ನಡೆಯಲಿದೆ ಎಂದರು.

ವಿಶ್ವ ಬಾಲಕಾರ್ಮಿಕ ವಿರೋಧಿ ದಿನ, Tumakuruನಲ್ಲಿ ಜೂ. 9ರಂದು ವಿವಿಧ ಸ್ಪರ್ಧೆಗಳು 

ಜೂ.21ರಂದು ಆಯೋಜನೆಯಾಗಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದು, ಈ ಹಿನ್ನೆಲೆಯಲ್ಲಿ ಅವರು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಸಂವಾದ ನಡೆಸಿ ಪೂರ್ವಭಾವಿ ಸಿದ್ಧತೆಗಳ ಕುರಿತು ಮಾಹಿತಿ ಪಡೆದಿದ್ದಾರೆ.

ಯೋಗ ದಿನಾಚರಣೆ ಮೈಸೂರಿನ ಅರಮನೆ ಆವರಣದಲ್ಲಿ ಆಯೋಜಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದ್ದು, ತಮ್ಮ ಆಗಮನವನ್ನು ಎದುರು ನೋಡುತ್ತಿದ್ದೇವೆ ಎಂದು ಈ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

Uttara Kannada; ರಾಜ್ಯಕ್ಕೆ ಮಾದರಿ ಈ ಕೃಷಿ ಪಾಠದ ಶಾಲೆ!

ಜಿಲ್ಲಾಡಳಿತ ಜತೆ ಮಾತುಕತೆ ನಡೆಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ಸಂಸದ ಪ್ರತಾಪ್‌ ಸಿಂಹ ಮತ್ತು ಶಾಸಕರು ಸೇರಿಂತೆ ಇತರರು ಸಿದ್ಧತೆಗಳನ್ನು ನಡೆಸುವಲ್ಲಿ ತೊಡಗಿದ್ದಾರೆ. ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲಿಯೂ ಸಿದ್ಧತೆಯನ್ನು ಪೂರ್ಣಗೊಳಿಸಿದೆ. ಕಾರ್ಯಕ್ರಮಕ್ಕೆ ಯಾರೆಲ್ಲಾ ಭಾಗವಹಿಸಬೇಕು ಸೇರಿದಂತೆ ಇತರೆ ಹಲವು ವಿಷಯಗಳ ಮಾಹಿತಿಯನ್ನು ವಿನಿಯಮ ಮಾಡಿಕೊಳ್ಳಲಾಯಿತು ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ್‌ ಪ್ರಸಾದ್‌ ಮುಂತಾದವರು ಉಪಸ್ಥಿತರಿದ್ದರು.

PREV
Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
4,808 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ