'ಬ್ಯಾಂಕ್‌ಗಳಿಗೆ ಹೊರೆಯಾಗ್ತಿದ್ದಾರೆ ಪ್ರಧಾನಿ ಮೋದಿ'..!

By Kannadaprabha NewsFirst Published Nov 30, 2019, 8:25 AM IST
Highlights

ಉದ್ಯಮಿಗಳ ಬ್ಯಾಂಕ್‌ ಸಾಲ ಮನ್ನಾ ಮಾಡುವ ಪ್ರಧಾನಿ ನರೇಂದ್ರಮೋದಿ ಅವರಿಗೆ ದೇಶದ ರೈತರ ಸಾಲಮನ್ನಾ ಮಾಡಲು ಏಕೆ ಮುಂದಾಗಲಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್‌ .ಮುನಿಯಪ್ಪ ಪ್ರಶ್ನೆ ಮಾಡಿದ್ದಾರೆ.

ಕೆ.ಆರ್‌ .ಪೇಟೆ(ನ.30): ಉದ್ಯಮಿಗಳ ಬ್ಯಾಂಕ್‌ ಸಾಲ ಮನ್ನಾ ಮಾಡುವ ಪ್ರಧಾನಿ ನರೇಂದ್ರಮೋದಿ ಅವರಿಗೆ ದೇಶದ ರೈತರ ಸಾಲಮನ್ನಾ ಮಾಡಲು ಏಕೆ ಮುಂದಾಗಲಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್‌ .ಮುನಿಯಪ್ಪ ಪ್ರಶ್ನೆ ಮಾಡಿದ್ದಾರೆ.

ತಾಲೂಕಿನ ವಿವಿಧೆಡೆ ಕಾಂಗ್ರೆಸ್‌ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್‌ ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಮನಮೋಹನಸಿಂಗ್‌ ಪ್ರಧಾನ ಮಂತ್ರಿಗಳಾಗಿದ್ದ ವೇಳೆ ಸುಮಾರು 2.5 ಲಕ್ಷ ಕೋಟಿಗೂ ಅಧಿಕ ಮೊತ್ತದ ದೇಶದ ರೈತರ ಸಾಲವನ್ನು ಬ್ಯಾಂಕ್‌ಗಳಿಗೆ ಹೊರೆಯಾಗದಂತೆ ಮನ್ನಾ ಮಾಡಿದ್ದೇವೆ. ಆದರೆ , ಇಂದಿನ ಪ್ರಧಾನಿಗಳು ಬ್ಯಾಂಕ್‌ಗಳಿಗೆ ಹೊರೆಯಾಗುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಕಾಡಿಬೇಡಿ ಟಿಕೆಟ್‌ ಪಡೆದು ಗೆದ್ದು ಕೈಕೊಟ್ಟ ಅನರ್ಹ ಶಾಸಕ..!

ಪ್ರಧಾನಿಗಳು ದೊಡ್ಡ ದೊಡ್ಡ ಕಾರ್ಖಾನೆಗಳು ಹಾಗೂ ಉದ್ಯಮಿಗಳ ಬ್ಯಾಂಕ್‌ ಸಾಲವನ್ನು ಮನ್ನಾ ಮಾಡುತ್ತಾರೆ. ಆದರೆ, ರೈತರ ಸಾಲವನ್ನು ಮನ್ನಾ ಮಾಡಲು ಮುಂದಾಗಲಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ರೈತರ 15 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದಾರೆ. ಕುಮಾರಸ್ವಾಮಿ 45 ಸಾವಿರ ಕೋಟಿ ಸಾಲಮನ್ನಾ ಮಾಡಲು ಸಮ್ಮಿಶ್ರ ಸರ್ಕಾರ ಪಾಲುದಾರರಾಗಿದ್ದ ಕಾಂಗ್ರೆಸ್‌ ಪಕ್ಷದ ನೆರವು ಇದೆ ಎಂಬುದನ್ನು ಮರೆಯಬೇಡಿ ಎಂದಿದ್ದಾರೆ.

ಬಿಎಸ್‌ವೈ ತವರಿನಲ್ಲಿ ಬಿಜೆಪಿಗೆ ಕಠಿಣ ಪರೀಕ್ಷೆ; 2 ಸೋಲಿನ ಅನುಕಂಪದ ನಿರೀಕ್ಷೆಯಲ್ಲಿ ಕಾಂಗ್ರೆಸ್‌

ದಲಿತರ ಸರ್ವಾಂಗೀಣ ಅಭಿವೃದ್ಧಿಗೆ ಕಾಂಗ್ರೆಸ್‌ ಪಕ್ಷದ ಕೊಡುಗೆ ಅಪಾರವಾಗಿದೆ. ಆದ್ದರಿಂದ ದಲಿತ ಬಂಧುಗಳು ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಬೇಕೆಂದು ಕೇಂದ್ರದ ಮಾಜಿ ಸಚಿವ ಕೆ.ಹೆಚ್‌.ಮುನಿಯಪ್ಪ ಮನವಿ ಮಾಡಿದರು. ಬಿಜೆಪಿಯವರು ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಾರೆ. ಗಾಂಧೀಜಿಯವರ, ಬಾಬ ಸಾಹೇಬ… ಅಂಬೇಡ್ಕರ್‌ ರವರ ಚಿಂತನೆ ಇಂದಿಗೂ ಈಡೇರಲಿಲ್ಲ. ದಲಿತರು ನೆಮ್ಮದಿಯಿಂದ ಬದುಕಲು ಬಿಡಬೇಕು ಎಂದಿದ್ದಾರೆ.

ನಾರಾಯಣ ಗೌಡ ಮಾತು ಕೇಳಿದ್ರೆ ಹೇಸಿಗೆಯಾಗುತ್ತೆ: ದೇವೇಗೌಡ

ಅವರ ಭಾವನೆಗಳ ಜೊತೆ ಚೆಲ್ಲಾಟವಾಡಬಾರದು ಎಂದು ಎಚ್ಚರಿಕೆ ನೀಡಿದರು. ಕಾಂಗ್ರೆಸ್‌ ದೇಶವನ್ನು, ರೈತರನ್ನು, ಧೀನದಲಿತರು, ಅಲ್ಪಸಂಖ್ಯಾತರನ್ನ ರಕ್ಷಣೆ ಮಾಡಿದೆ. ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯಕೊಟ್ಟಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲಿದೆ. ಸರಳ ಸಜ್ಜನಿಕೆಗೆ ಹೆಸರಾದ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್‌ ಕೈಬಿಡಬೇಡಿ. ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಕರೆ ನೀಡಿದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್‌ , ಶಿವಣ್ಣ ಸೇರಿದಂತೆ ಹಲವರು ಇದ್ದರು.

click me!