ಏ.9ರಂದು ಬಂಡೀಪುರದಲ್ಲಿ ಪ್ರಧಾನಿ ಮೋದಿ ಸಫಾರಿ..!

By Girish GoudarFirst Published Mar 31, 2023, 12:08 PM IST
Highlights

ದೇಶದಲ್ಲೇ ಮೊದಲು ಘೋಷಣೆಯಾದ 9 ಹುಲಿ ಯೋಜನೆಗಳ ಪೈಕಿ ಬಂಡೀಪುರವು ಒಂದಾಗಿದೆ. 2022 ರ ಹುಲಿಗಣತಿ ಪ್ರಕಾರ ಬಂಡೀಪುರದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳಿರುವ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಈ ಹಿನ್ನೆಲೆ ಬಂಡೀಪುರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ. 

ಚಾಮರಾಜನಗರ(ಮಾ.31): ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿ ಯೋಜನೆಗೆ 50 ವರ್ಷಗಳು ಪೂರ್ಣಗೊಂಡ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು  ಏ.9 ರಂದು ಬಂಡೀಪುರಕ್ಕೆ ಭೇಟಿ ನೀಡಲಿದ್ದಾರೆ. ಇತ್ತೀಚಿನ ಹುಲಿಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ. ಅಂದೇ ಬಂಡೀಪುರಕ್ಕೂ ಮೋದಿ ಭೇಟಿ ನೀಡಲಿದ್ದಾರೆ.

ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ದೇಶದಲ್ಲೇ ಮೊದಲು ಘೋಷಣೆಯಾದ 9 ಹುಲಿ ಯೋಜನೆಗಳ ಪೈಕಿ ಬಂಡೀಪುರವು ಒಂದಾಗಿದೆ. 2022 ರ ಹುಲಿಗಣತಿ ಪ್ರಕಾರ ಬಂಡೀಪುರದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳಿರುವ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಈ ಹಿನ್ನೆಲೆ ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. 

ಚಾಮರಾಜನಗರ: ಮತ್ತೆ ಕೋಟ್ಯಾಧಿಪತಿಯಾದ ಮಲೆ ಮಹದೇಶ್ವರ ಸ್ವಾಮಿ..!

ಬಂಡೀಪುರದಲ್ಲಿ ಪ್ರಧಾನಿ ಮೋದಿ ಸಫಾರಿ ನಡೆಸಲಿದ್ದಾರೆ. ಬಳಿಕ ತಮಿಳುನಾಡಿನ ಮದುಮಲೈ ಅರಣ್ಯಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ. 

ಪ್ರಧಾನಿ ಭೇಟಿಗೆ ಬಂಡೀಪುರದಲ್ಲಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ. ಸಫಾರಿ ರಸ್ತೆಗಳ ದುರಸ್ತಿ ಕಾರ್ಯವನ್ನ ಅರಣ್ಯ ಇಲಾಖೆ ನಡೆಸಿದೆ. ಮೇಲುಕಾಮನಹಳ್ಳಿ ಬಳಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಕರ್ನಾಟಕದ ಹುಲಿಗಳ ಮಧ್ಯೆ ಇರಲು ಬರುತ್ತೇನೆ ಎಂದು ಈಗಾಗಲೇ ಮೋದಿ ಟ್ವೀಟ್ ಮಾಡಿದ್ದಾರೆ. 

click me!