ಫೆ.13ರಿಂದ 17ರ ವರೆಗೆ ಏರೋ ಇಂಡಿಯಾ ಶೋ, ಪ್ರಧಾನಿ ಮೋದಿ ಉದ್ಘಾಟನೆ: ಸಿಎಂ ಬೊಮ್ಮಾಯಿ

By Kannadaprabha NewsFirst Published Jan 25, 2023, 7:30 AM IST
Highlights

1996ರಿಂದಲೂ ಬೆಂಗಳೂರೇ ದೇಶದ ಈ ಬೃಹತ್‌ ವೈಮಾನಿಕ ಪ್ರದರ್ಶನಕ್ಕೆ ಆತಿಥ್ಯ ನೀಡುತ್ತಾ ಬಂದಿದೆ. ಇದು ಕರ್ನಾಟಕಕ್ಕೆ ಹೆಮ್ಮೆಯ ಸಂಗತಿ. ಈ ಬಾರಿ ಪ್ರದರ್ಶನ ಇನ್ನೂ ಹೆಚ್ಚಿನ ರೂಪದಲ್ಲಿ ಜನಮನ ಸೆಳೆಯಲಿದೆ. ಅದಕ್ಕಾಗಿ ಯಲಹಂಕ ವಾಯುನೆಲೆಯಲ್ಲಿ ಸಕಲ ಸಿದ್ಧತೆಗಳು ಸಾಗಿವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

ಕಲಬುರಗಿ(ಜ.25):  ಬೆಂಗಳೂರಲ್ಲಿ ಫೆ.13ರಿಂದ ಫೆ.17ರ ವರೆಗೆ 5 ದಿನಗಳ ಕಾಲ ಏರೋ ಇಂಡಿಯಾ ಬೃಹತ್‌ ವೈಮಾನಿಕ ಪ್ರದರ್ಶನ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ವೈಮಾನಿಕ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಏರೋ ಇಂಡಿಯಾ ಏರ್‌ ಶೋ ಪೂರ್ವ ಸಿದ್ಧತೆ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರೊಂದಿಗೆ ಕಲಬುರಗಿ ವಿಮಾನ ನಿಲ್ದಾಣದಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿ ಪೂರ್ವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

Aero India 2023, ಬೆಂಗಳೂರಲ್ಲಿ ಫೆ.13ರಿಂದ ವೈಮಾನಿಕ ಪ್ರದರ್ಶನ, ಟಿಕೆಟ್ ಬೆಲೆ ಪ್ರಕಟ!

1996ರಿಂದಲೂ ಬೆಂಗಳೂರೇ ದೇಶದ ಈ ಬೃಹತ್‌ ವೈಮಾನಿಕ ಪ್ರದರ್ಶನಕ್ಕೆ ಆತಿಥ್ಯ ನೀಡುತ್ತಾ ಬಂದಿದೆ. ಇದು ಕರ್ನಾಟಕಕ್ಕೆ ಹೆಮ್ಮೆಯ ಸಂಗತಿ. ಈ ಬಾರಿ ಪ್ರದರ್ಶನ ಇನ್ನೂ ಹೆಚ್ಚಿನ ರೂಪದಲ್ಲಿ ಜನಮನ ಸೆಳೆಯಲಿದೆ. ಅದಕ್ಕಾಗಿ ಯಲಹಂಕ ವಾಯುನೆಲೆಯಲ್ಲಿ ಸಕಲ ಸಿದ್ಧತೆಗಳು ಸಾಗಿವೆ ಎಂದರು.

ಏರೋ ಇಂಡಿಯಾ ಶೋ ಪೂರ್ವ ಸಿದ್ಧತೆ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದೇನೆ. ಈ ಬಾರಿ ಅತಿದೊಡ್ಡ ಏರ್‌ ಶೋ ಮತ್ತು ಏರೋಸ್ಪೇಸ್‌ ವಸ್ತುಪ್ರದರ್ಶನ ಆಯೋಜಿಸಲಾಗುತ್ತಿದೆ. ವೈಮಾನಿಕ ಕ್ಷೇತ್ರದ ಅನೇಕ ಕಂಪನಿಗಳು, ತಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ. ವೈಮಾನಿಕ ಪ್ರದರ್ಶನದಲ್ಲಿ ಜಾಗತಿಕವಾಗಿ ಹೆಸರು ಮಾಡಿರುವ ಅನೇಕ ಸಾಧಕರೂ ಪಾಲ್ಗೊಳ್ಳುತ್ತಿದ್ದಾರೆ, ಕರ್ನಾಟಕ ಈ ಏರ್‌ ಶೋ ಆತಿಥ್ಯ ವಹಿಸುತ್ತಿರುವುದು ನಾಡಿಗೆ ಗೌರವದ ವಿಷಯ ಎಂದರು.

click me!