Pocso case: ಮುರುಘಾಶ್ರೀಗೆ ನಿರ್ಬಂಧ: ಸರ್ಕಾರ ಸಮರ್ಥನೆ

By Kannadaprabha News  |  First Published Mar 3, 2023, 5:05 AM IST

ಚಿತ್ರದುರ್ಗದ ಮುರುಘಾ ಮಠದಲ್ಲಿ ಸರಣಿ ಅಪರಾಧಗಳು ನಡೆದಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಯನ್ನು ಪ್ರಯೋಗಿಸಿ, ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಅಧಿಕಾರ ಚಲಾವಣೆ ಮಾಡುವುದನ್ನು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ನಿರ್ಬಂಧಿಸಿದೆ ಎಂದು ರಾಜ್ಯ ಸರ್ಕಾರ ಪ್ರತಿಪಾದಿಸಿದೆ.


ಬೆಂಗಳೂರು (ಮಾ.3) : ಚಿತ್ರದುರ್ಗದ ಮುರುಘಾ ಮಠದಲ್ಲಿ ಸರಣಿ ಅಪರಾಧಗಳು ನಡೆದಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಯನ್ನು ಪ್ರಯೋಗಿಸಿ, ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಅಧಿಕಾರ ಚಲಾವಣೆ ಮಾಡುವುದನ್ನು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ನಿರ್ಬಂಧಿಸಿದೆ ಎಂದು ರಾಜ್ಯ ಸರ್ಕಾರ ಪ್ರತಿಪಾದಿಸಿದೆ.

ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲ(Chitradurga District and Sessions Court)ಯದ ಆದೇಶ ಪ್ರಶ್ನಿಸಿ ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ(Basavaprabhu swamiji) ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ಪೀಠದ ಮುಂದೆ ಸರ್ಕಾರದ ಪರ ಅಡ್ವೋಕೇಟ್‌ ಜನರಲ್‌ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

Latest Videos

undefined

ಮುರುಘಾಮಠಕ್ಕೆ ಸರ್ಕಾರ ನೀಡಿದ ಹಣದ ವಿವರ ಕೇಳಿದ ಹೈಕೋರ್ಟ್

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು, ಧಾರ್ಮಿಕ ಸಂಸ್ಥೆಗಳಲ್ಲಿ ಸರಣಿಯೋಪಾದಿಯಲ್ಲಿ ಅನೈತಿಕ ಚಟುವಟಿಕೆಗಳು ನಡೆದಿಲ್ಲ. ಒಂದು ಬಾರಿ ಮಾತ್ರವೇ ಘಟಿಸಿದೆ ಎನ್ನಲಾಗಿದೆ. ಅದನ್ನೇ ನೆಪವಾಗಿಟ್ಟುಕೊಂಡು, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ ಅನ್ವಯಿಸಿ, ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ಹೇರಿರುವುದು ತಪ್ಪು ಎಂದು ವಾದ ಮಂಡಿಸಿದರು.

ಅರ್ಜಿದಾರ ಪರ ವಕೀಲರ ವಾದಕ್ಕೆ ಪ್ರತಿಯಾಗಿ ರಾಜ್ಯ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ, ಮಠದಲ್ಲಿ ಸರಣಿಯೋಪಾದಿಯಲ್ಲಿ ಅಪರಾಧಗಳು ನಡೆದಿವೆ ಎಂಬ ಅಂಶ ತನಿಖಾಧಿಕಾರಿಗಳ ತನಿಖೆಯಿಂದ ಮೇಲ್ನೋಟಕ್ಕೆ ಕಂಡುಬಂದಿದೆ. ಅದಕ್ಕಾಗಿ ಈ ಕಾಯ್ದೆಯನ್ನೂ ತನಿಖಾಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ಅಡಕಗೊಳಿಸಿದ್ದಾರೆ. ಅದನ್ನೇ ಪರಿಗಣಿಸಿ ಶರಣರ ಅಧಿಕಾರ ಚಲಾವಣೆಗೆ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ನಿರ್ಬಂಧ ಹೇರಿದೆ. ಈ ಆದೇಶ ಸಮಂಜಸವಾಗಿದೆ. ಇನ್ನೂ ಪೀಠಾಧಿಪತಿಯನ್ನು ಕೇವಲ ಮಠದ ಜವಾಬ್ದಾರಿಯಿಂದ ಮಾತ್ರವೇ ದೂರವಿಡುವಂತೆ ನಿರ್ಬಂಧಕಾಜ್ಞೆ ನೀಡಿದರೆ ಮತ್ತೊಂದಷ್ಟುಅನಾಹುತಕಾರಿ ಪರಿಣಾಮಗಳನ್ನು ನಡೆಸಲು ಕಾರಣವಾಗಬಹುದು ಎಂದು ಸಮಜಾಯಿಷಿ ನೀಡಿದರು.

ಅಡ್ವೊಕೇಟ್‌ ಜನರಲ್‌ ಅವರ ವಾದಕ್ಕೆ ಉತ್ತರಿಸಲು ಅರ್ಜಿದಾರ ಪರ ವಕೀಲರು ಸಮಯಾವಕಾಶ ಕೋರಿದ್ದನ್ನು ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಮಾ.23ಕ್ಕೆ ಮುಂದೂಡಿತು.

ಮುರುಘಾಮಠಕ್ಕೆ ಉಸ್ತುವಾರಿ ನೇಮಕಕ್ಕೆ ನಿಯಮ ಇದೆಯೇ; ಹೈಕೋರ್ಟ್ ಪ್ರಶ್ನೆ

ಪ್ರಕರಣದ ಹಿನ್ನೆಲೆ:

ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ(A case of sexual assault on a minor) ಸಂಬಂಧ ಮುರುಘಾ ಮಠ(Murugha mutt)ದ ಪೀಠಾಧಿಪತಿ ಶಿವಮೂರ್ತಿ ಶರಣರು(Shivamurthy shivasharana) 2022ರ ಸೆ.1ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ತನಿಖಾಧಿಕಾರಿಗಳು ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಯನ್ನೂ ಸೇರ್ಪಡೆ ಮಾಡಿದ್ದರು. ಈ ಕಾಯ್ದೆಯ ಅನ್ವಯ ಶರಣರನ್ನು ಪೀಠಾಧಿಪತಿ ಅಧಿಕಾರ ಚಲಾಯಿಸುವುದರಿಂದ ನಿರ್ಬಂಧಿಸಬೇಕು ಎಂದು ಭಕ್ತರು ಸೆಷನ್ಸ್‌ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ದಾವೆ ಪುರಸ್ಕರಿಸಿ ಸೆಷನ್ಸ್‌ ನ್ಯಾಯಾಲಯ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿದೆ. ಈ ಆದೇಶವನ್ನು ಹೈಕೋರ್ಟ್‌ನಲ್ಲಿ(Karnataka Highcourt) ಪ್ರಶ್ನಿಸಲಾಗಿದೆ.

click me!