ಪೋಕ್ಸೋ ಕೇಸ್‌ ಬೆನ್ನಲ್ಲೇ ಹೈದರಾಬಾದ್‌ನಲ್ಲಿ ತಲೆ ಮರೆಸಿಕೊಂಡ ಖ್ಯಾತ ಸ್ವಾಮೀಜಿ!

Published : Feb 26, 2026, 09:17 AM IST
POCSO Case Filed Against Mallikarjuna Mutya

ಸಾರಾಂಶ

ಯಾದಗಿರಿಯ ಶಹಪುರ ತಾಲೂಕಿನ ಖ್ಯಾತ ಸ್ವಾಮೀಜಿ ಮಲ್ಲಿಕಾರ್ಜುನ ಮುತ್ಯಾ, ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆದ ನಂತರ, ಅವರ ವಿರುದ್ಧ 75(2) ಬಿಎನ್‌ಎಸ್‌ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ: ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ತೋರಿದ ಆರೋಪದಡಿ ಇಲ್ಲಿನ ಶಹಪುರ ತಾಲೂಕಿನ ಮಹಲ್ ರೋಜಾದ ಸ್ವಾಮೀಜಿ ಮಲ್ಲಿಕಾರ್ಜುನ ಮುತ್ಯಾ ವಿರುದ್ದ 75(2) ಬಿಎನ್‌ಎಸ್‌ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಕರ್ನಾಟಕ ಮಾತ್ರವಲ್ಲದೆ ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಲ್ಲೂ ಅಪಾರ ಭಕ್ತರನ್ನ ಹೊಂದಿರುವ ಸ್ವಾಮೀಜಿ ಹೈದರಾಬಾದ್‌ನಲ್ಲಿ ತಲೆ ಮರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ಉತ್ತರ ಕರ್ನಾಟಕದ ಖ್ಯಾತ ಸ್ವಾಮೀಜಿಯಾಗಿರುವ ಮಲ್ಲಿಕಾರ್ಜುನ ಮುತ್ಯಾ, ಅಪ್ರಾಪ್ತ ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾ ಮಠದ ಸ್ವಾಮಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾನೆ. ಈ ಸಂಬಂಧ ಶಹಪುರ ಸಿಡಿಪಿಒ ಮಲ್ಲಣ್ಣ ಉಮಾಪತಿ ಅವರಿಂದ ದೂರು ದಾಖಲಾಗಿತ್ತು. ಇದೀಗ ಐಪಿಸಿ 12ರ ಅಡಿಯಲ್ಲಿ ಮಲ್ಲಿಕಾರ್ಜುನ ಮುತ್ಯಾ ಮೇಲೆ ಪೋಕ್ಸೋ ಕೇಸ್ ದಾಖಲಾಗಿತ್ತು. ಪೋಕ್ಸೋ ಕೇಸ್ ಬೆನ್ನಲ್ಲೇ ಮುತ್ಯಾ ಹೈದರಾಬಾದ್‌ನಲ್ಲಿ ತಲೆ ಮರೆಸಿಕೊಂಡಿದ್ಧಾರೆ.

ಪೋಕ್ಸೋ ಕೇಸ್

ಅಪ್ರಾಪ್ತ ಮಗುವಿನ ಜತೆ ಮಲ್ಲಿಕಾರ್ಜುನ ಮುತ್ಯಾ ಅನುಚಿತವಾಗಿ ವರ್ತಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸುಂಬೆ ದೂರು ದಾಖಲಿಸಲು ಸೂಚಿಸಿದ್ದರು. ಇದರ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಹಲ್ ರೋಜಾಗೆ ಹೋಗಿ ತನಿಖೆ ನಡೆಸಿದ್ದಾರೆ. ಇದಾದ ನಂತರ ಗೋಗಿ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ.

PREV
Read more Articles on
click me!

Recommended Stories

ಬೆಂಗಳೂರಿನಲ್ಲಿ ರೌಡಿಶೀಟರ್ ಭೀಕರ ಹತ್ಯೆ, ಹೆತ್ತ ತಾಯಿಯ ಎದುರೇ ಮಾರಾಕಾಸ್ತ್ರಗಳಿಂದ ಕೊಚ್ಚಿ ಹಾಕಿದ್ರು!
ಸ್ವತ್ತುಗಳಿಗೆ ನಕಲಿ ಇ-ಖಾತಾ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಆಗ್ರಹ