ಮುರುಡೇಶ್ವರದ ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿನಿಯರು ಸಾವು: ಶಿಕ್ಷಕರನ್ನ ವಶಕ್ಕೆ ಪಡೆದ ಪೊಲೀಸರು

By Girish Goudar  |  First Published Dec 11, 2024, 11:31 PM IST

ಕೋಲಾರ ಜಿಲ್ಲೆಯ ಮುಳಬಾಗಿಲು ಮೊರಾರ್ಜಿ ವಸತಿ ಶಾಲೆಯ ಶಿಕ್ಷಕರನ್ನು ಮುರುಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊರಾರ್ಜಿ ವಸತಿ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಶಿಕ್ಷಕರ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದರು. 
 


ಕಾರವಾರ(ಡಿ.11):  ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರದ ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿನಿಯರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಶಿಕ್ಷಕರನ್ನು ಮುರುಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. 
ಕೋಲಾರ ಜಿಲ್ಲೆಯ ಮುಳಬಾಗಿಲು ಮೊರಾರ್ಜಿ ವಸತಿ ಶಾಲೆಯ ಶಿಕ್ಷಕರನ್ನು ಮುರುಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊರಾರ್ಜಿ ವಸತಿ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಶಿಕ್ಷಕರ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದರು. 

ಮುಖ್ಯೋಪಾಧ್ಯಾಯರಾದ ಶಶಿಕಲಾ (40), ಶಿಕ್ಷಕರಾದ ಸುನೀಲ್ ಆರ್. (33), ಚೌಡಪ್ಪ ಎಸ್. (34), ವಿಶ್ವನಾಥ್ ಎಸ್. (27), ಶಾರದಮ್ಮ ಸಿ.ಎನ್.‌ (37), ನರೇಶ ಕೆ. (30) ವಿರುದ್ಧ ಪ್ರಕರಣ ದಾಖಲಾಗುತ್ತು. ಆರು ಜನ ಶಿಕ್ಷಕರನ್ನು ಸಂಜೆ ವೇಳೆ ವಶಕ್ಕೆ ಪಡೆದು ಪೊಲೀಸರು ತನಿಖೆಯನ್ನ ನಡೆಸಿದ್ದಾರೆ.  

Tap to resize

Latest Videos

ಉತ್ತರಕನ್ನಡ: ಪ್ರವಾಸಕ್ಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿನಿ ಸಮುದ್ರದಲ್ಲಿ ಮುಳುಗಿ ಸಾವು, ಮೂವರು ನಾಪತ್ತೆ!

ನಿನ್ನೆ ಮುರುಡೇಶ್ವರ ಸಮುದ್ರದಲ್ಲಿ ನಡೆದ ದುರ್ಘಟನೆಯಲ್ಲಿ ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ನಿನ್ನೆ ವಿದ್ಯಾರ್ಥಿನಿ ಶ್ರಾವಂತಿ (15) ಮೃತದೇಹ ಸಿಕ್ಕಿದ್ರೆ, ಇಂದು ದೀಕ್ಷಾ, ಲಾವಣ್ಯ, ವಂದನಾ ಮೃತದೇಹ ಪತ್ತೆಯಾಗಿತ್ತು. ಯಶೋಧ, ಲಿಪಿಕಾ, ವೀಕ್ಷಣಾ ರಕ್ಷಣೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

undefined

ಕೋಲಾರ ಜಿಲ್ಲೆಯ ಮುಳುಬಾಗಿಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ರು. 19 ಬಾಲಕಿಯರು ಹಾಗೂ 27 ಬಾಲಕರು ಸೇರಿ ಒಟ್ಟು 46 ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತರಲಾಗಿತ್ತು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರು ಮೋನೋ ಟ್ರಾವೆಲ್ಸ್‌ನಲ್ಲಿ ವಿದ್ಯಾರ್ಥಿಗಳನ್ನ ಪ್ರವಾಸಕ್ಕೆ ಕರೆತಂದಿದ್ದರು. 

ಆದರೆ, ನಿನ್ನೆ ನಡೆದ ದುರ್ಘಟನೆಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರ ನಿರ್ಲಕ್ಷ್ಯವೇ ಕಾರಣವೆಂದು ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬೆನ್ನಲ್ಲೇ ಆರು ಜನ ಶಿಕ್ಷಕರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆಯನ್ನ ಮುಂದುವರಿಸಿದ್ದಾರೆ. 

ಮುರುಡೇಶ್ವರ ದುರಂತ: ಮೃತ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ಘೋಷಣೆ!

ಉತ್ತರ ಕನ್ನಡ/ಬೆಂಗಳೂರು: ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನಾಲ್ವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದು, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಹುಟ್ಟಿಸಿದ ಮಕ್ಕಳಿಂದಲೇ ನೆಮ್ಮದಿ ಹಾಳು, ತಂದೆ ಆತ್ಮಹತ್ಯೆ; ಮೃತದೇಹದ ಎದುರೂ ಮಕ್ಕಳ ಜಗಳ!

ಈ ಕುರಿತು ಸಾಮಾಜಿಕ ಜಾಲತಾಣದ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು ಎಂದಿದ್ದಾರೆ.

ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ. ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

click me!