ಬೆಳಗಾವಿಯಲ್ಲಿ ವಿಕಲಚೇತನನ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆದೇಶಿಸಿದ್ದಾರೆ.
ಬೆಳಗಾವಿ (ಜು.29): ಬೆಳಗಾವಿಯಲ್ಲಿ ವಿಕಲಚೇತನನ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆದೇಶಿಸಿದ್ದಾರೆ.
ಈ ಕುರಿತು ಪೊಲೀಸ… ಆಯುಕ್ತರಿಗೆ ಸಚಿವರು ಪತ್ರ ಬರೆದಿದ್ದಾರೆ. ನಡು ರಸ್ತೆಯಲ್ಲಿ ರಾತ್ರಿ ವಿಕಲ ಚೇತನ ವ್ಯಕ್ತಿಗೆ ಪೊಲೀಸರು ಹಿಗ್ಗಾ ಮುಗ್ಗಾ ಥಳಿಸಿ, ಬೂಟುಗಾಲಿನಿಂದ ಒದ್ದು ರಾತ್ರಿಯಿಡೀ ಅಲ್ಲೇ ನರಳುವಂತೆ ಮಾಡಿದ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತು ವಿಚಾರಣೆ ನಡೆಸಿ, ತಪ್ಪಿತಸ್ಥ ಪೊಲೀಸರ ಮೇಲೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಸಚಿವರು ಸೂಚಿಸಿದ್ದಾರೆ.
ಉದ್ಯಮಬಾಗ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿ ಈ ವಿಕಲಚೇತನ ವ್ಯಕ್ತಿಯನ್ನು ನಡುರಸ್ತೆಯಲ್ಲೇ ನೆಲಕ್ಕೆ ಉರುಳಿಸಿ, ಮನಸೋ ಇಚ್ಛೆಯಂತೆ ಥಳಿಸಿದ್ದಾರೆ. ಒಬ್ಬ ಪೇದೆ ಲಾಠಿಯಿಂದ ಹೊಡೆದರೆ, ಮತ್ತೊಬ್ಬ ಪೇದೆ ಬೂಟುಗಾಲಿನಿಂದ ಒದೆಯುತ್ತಿರುವುದು, ರಸ್ತೆಯಲ್ಲಿ ನರಳಾಡುತ್ತಿರುವ ವಿಕಲಚೇತನನ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಗೃಹ ಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್: ಮೊದಲ ದಿನ 60 ಸಾವಿರ ಮಹಿಳೆಯರ ನೋಂದಣಿ