ಪರಾರಿಯಾದ ಆಂಧ್ರಪ್ರದೇಶದ ಲತಾ ಮತ್ತು ತಮಿಳುನಾಡಿನ ವನಜಾಕ್ಷಿ ಬಸ್‌ನಲ್ಲಿ ರೈಲು ನಿಲ್ದಾಣಕ್ಕೆ ಬಂದು ಅಲ್ಲಿಂದ ರೈಲಿನಲ್ಲಿ ಪ್ರಯಾಣಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೇರಳದ ಗಡಿಭಾಗದ ಮಂಗಳೂರು ಸಹಿತ ಮೂಲ್ಕಿ ರೈಲು ನಿಲ್ದಾಣಗಳಲ್ಲಿ ಪೊಲೀಸರು ಬಿಗು ತಪಾಸಣೆ ನಡೆಸುತ್ತಿದ್ದಾರೆ.
ಮೂಲ್ಕಿ(ನ.19): ಕೇರಳ-ಕರ್ನಾಟಕದ ಕಣ್ಣೂರು- ಕೊಡಗು ಗಡಿ ಪ್ರದೇಶದಲ್ಲಿ ಕೇರಳ ನಕ್ಸಲ್ ನಿಗ್ರಹ ಪಡೆ (ಬೋಲ್ಟ್) ಮತ್ತು ನಕ್ಸಲರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಗಾಯಗೊಂಡ ಘಟನೆ ನಡೆದಿದೆ.
ಈ ಸಂದರ್ಭ ಪರಾರಿಯಾದ ಆಂಧ್ರಪ್ರದೇಶದ ಲತಾ ಮತ್ತು ತಮಿಳುನಾಡಿನ ವನಜಾಕ್ಷಿ ಬಸ್‌ನಲ್ಲಿ ರೈಲು ನಿಲ್ದಾಣಕ್ಕೆ ಬಂದು ಅಲ್ಲಿಂದ ರೈಲಿನಲ್ಲಿ ಪ್ರಯಾಣಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೇರಳದ ಗಡಿಭಾಗದ ಮಂಗಳೂರು ಸಹಿತ ಮೂಲ್ಕಿ ರೈಲು ನಿಲ್ದಾಣಗಳಲ್ಲಿ ಪೊಲೀಸರು ಬಿಗು ತಪಾಸಣೆ ನಡೆಸುತ್ತಿದ್ದಾರೆ.
ಸ್ಪೀಕರ್ ಸ್ಥಾನ ಧರ್ಮಾಧಾರಿತವಾಗಿ ನೋಡುವಂಥದಲ್ಲ: ಖಾದರ್
ಮೂಲ್ಕಿ ರೈಲ್ವೆ ನಿಲ್ದಾಣದಲ್ಲಿ ಮೂಲ್ಕಿ ಪೊಲೀಸ್ ಠಾಣಾಧಿಕಾರಿ ವಿದ್ಯಾಧರ್ ಹಾಗೂ ಉಪ ನಿರೀಕ್ಷಕ ಮಾರುತಿ ನೇತೃತ್ವದಲ್ಲಿ ಬಿಗು ಬಂದೋಬಸ್ತ್ ಹಾಗೂ ತೀವ್ರ ತಪಾಸಣೆ ನಡೆಸಲಾಗುತ್ತಿದ್ದು, ಸಂಶಯಾಸ್ಪದ ವ್ಯಕ್ತಿಗಳನ್ನು ಪ್ರಶ್ನಿಸಲಾಗುತ್ತಿದೆ.