ದಾವಣಗೆರೆಯ DAR 2011 ಬ್ಯಾಚ್ ಗುರುಮೂರ್ತಿ ಎಂಬುವರೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪೇದೆ ಗುರುಮೂರ್ತಿ ಅವರನ್ನ ದಾವಣಗೆರೆ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾವಣಗೆರೆ(ಫೆ.15): ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ನಡೆದಿದೆ. ಇವಿಎಂ ಕಾವಲಿಗಿದ್ದ ಪೊಲೀಸ್ ಪೇದೆ ತನ್ನ ಬಂದೂಕಿನಿಂದ ಫೈರ್ ಮಾಡಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ.
ದಾವಣಗೆರೆಯ DAR 2011 ಬ್ಯಾಚ್ ಗುರುಮೂರ್ತಿ ಎಂಬುವರೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪೇದೆ ಗುರುಮೂರ್ತಿ ಅವರನ್ನ ದಾವಣಗೆರೆ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ, ವರದಕ್ಷಿಣೆ ಕಿರುಕುಳ?
ಪೇದೆ ಗುರುಮೂರ್ತಿ ಅವರು ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಗಾರ್ಡ್ ಡ್ಯೂಟಿ ಮಾಡುತ್ತಿದ್ದರು. ಗುರುಮೂರ್ತಿ ಪರಿಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.