Bengaluru: ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ- ಮಗು ಸಾವು: ಚಾರ್ಜ್‌ಶೀಟ್ ಸಲ್ಲಿಸಿದ ಪೊಲೀಸರು

Published : Jun 24, 2023, 07:02 AM IST
Bengaluru: ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ- ಮಗು ಸಾವು: ಚಾರ್ಜ್‌ಶೀಟ್ ಸಲ್ಲಿಸಿದ ಪೊಲೀಸರು

ಸಾರಾಂಶ

ಕಳೆದ ಜನವರಿಯಲ್ಲಿ ಹೆಣ್ಣೂರು ಕ್ರಾಸ್‌ ಬಳಿ ಮೆಟ್ರೋ ಪಿಲ್ಲರ್‌ ಕುಸಿದು ತಾಯಿ-ಮಗು ಸಾವು ಪ್ರಕರಣ ಸಂಬಂಧ ನಗರದ ನ್ಯಾಯಾಲಯಕ್ಕೆ ಒಂದು ಸಾವಿರ ಪುಟಗಳ ಆರೋಪ ಪಟ್ಟಿಯನ್ನು ಗೋವಿಂದಪುರ ಠಾಣೆ ಪೊಲೀಸರು ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. 

ಬೆಂಗಳೂರು (ಜೂ.24): ಕಳೆದ ಜನವರಿಯಲ್ಲಿ ಹೆಣ್ಣೂರು ಕ್ರಾಸ್‌ ಬಳಿ ಮೆಟ್ರೋ ಪಿಲ್ಲರ್‌ ಕುಸಿದು ತಾಯಿ-ಮಗು ಸಾವು ಪ್ರಕರಣ ಸಂಬಂಧ ನಗರದ ನ್ಯಾಯಾಲಯಕ್ಕೆ ಒಂದು ಸಾವಿರ ಪುಟಗಳ ಆರೋಪ ಪಟ್ಟಿಯನ್ನು ಗೋವಿಂದಪುರ ಠಾಣೆ ಪೊಲೀಸರು ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಈ ದುರಂತದ ತನಿಖೆ ಪೂರ್ಣಗೊಳಿಸಿದ ಪೊಲೀಸರು, ಆರೋಪ ಪಟ್ಟಿಯನ್ನು ಕಾನೂನು ತಜ್ಞರು ಹಾಗೂ ಹಿರಿಯ ಅಧಿಕಾರಿಗಳ ಪರಮಾರ್ಶೆಗೆ ಕಳುಹಿಸಿದ್ದಾರೆ. ಕಾನೂನು ತಜ್ಞರ ಸಮ್ಮತಿಸಿ ಸಿಕ್ಕಿದ ಬಳಿಕ ನ್ಯಾಯಾಲಯಕ್ಕೆ ಆರೋಪ ಪಟ್ಟಿಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜ.10ರಂದು ಹೆಣ್ಣೂರು ಕ್ರಾಸ್‌ ಬಳಿ ಮೆಟ್ರೋ ಪಿಲ್ಲರ್‌ ಕುಸಿದು ಬೈಕ್‌ನಲ್ಲಿ ತೆರಳುತ್ತಿದ್ದ ಖಾಸಗಿ ಕಂಪನಿ ಉದ್ಯೋಗಿ ತೇಜಸ್ವಿನಿ (28) ಹಾಗೂ ಅವರ ಎರಡೂವರೆ ವರ್ಷದ ಮಗ ವಿಹಾನ್‌ ಮೃತಪಟ್ಟಿದ್ದರು. ಘಟನೆಯಲ್ಲಿ ಅವರ ಪತಿ ಹಾಗೂ ಹೆಣ್ಣು ಮಗು ಪಾರಾಗಿದ್ದರು. ಈ ಸಂಬಂಧ ಬಿಎಂಆರ್‌ಸಿಎಲ್‌ ಹಾಗೂ ನಾಗಾರ್ಜುನ್‌ ಕನ್‌ಸ್ಟ್ರಕ್ಷನ್‌ ಕಂಪನಿ (ಎನ್‌ಸಿಸಿ)ಯ 11 ಅಧಿಕಾರಿಗಳ ವಿರುದ್ಧ ಗೋವಿಂದಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ವಿಧಾನಸಭೆ ಚುನಾವಣೆ ಫಲಿತಾಂಶ ಬಿಜೆಪಿಗೆ ಕೆಟ್ಟಕನಸು: ಕೆ.ಎಸ್‌.ಈಶ್ವರಪ್ಪ

ಬಂಧನವಿಲ್ಲದೆ ಆರೋಪ ಪಟ್ಟಿ: ಮೆಟ್ರೋ ಪಿಲ್ಲರ್‌ ಕುಸಿದು ತಾಯಿ-ಮಗ ಸಾವು ಪ್ರಕರಣ ಸಂಬಂಧ ಆರೋಪಿಗಳ ಬಂಧನವಿಲ್ಲದೆ ಆರೋಪ ಪಟ್ಟಿಸಲ್ಲಿಸಲು ಪೊಲೀಸರು ನಿರ್ಧರಿಸಿದ್ದಾರೆ. ಈ ಘಟನೆಗೆ ಕಾಮಗಾರಿ ಲೋಪ ಕಾರಣವಾಗಿದೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆದರೆ ಏಳು ವರ್ಷದೊಳಗೆ ಶಿಕ್ಷಾವಧಿ ಇರುವ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸದಂತೆ ನ್ಯಾಯಾಲಯದ ಆದೇಶವಿದೆ. ಹೀಗಾಗಿ ಮೆಟ್ರೋ ದುರಂತ ಸಂಬಂಧ ನಿರ್ಲಕ್ಷ್ಯತನ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ 7 ವರ್ಷಗಳ ಶಿಕ್ಷೆ ಇರುತ್ತದೆ. ಆದ್ದರಿಂದ ಆರೋಪಿಗಳನ್ನು ಬಂಧಿಸದೆ ದೋಷಾರೋಪ ಪಟ್ಟಿಸಲ್ಲಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

ಸರ್ಕಾರಕ್ಕೆ ಕೋರ್ಟ್‌ ನೋಟಿಸ್‌: ನಾಗವಾರದ ಹೆಣ್ಣೂರು ಕ್ರಾಸ್‌ ಬಳಿ ಮೆಟ್ರೊ ಪಿಲ್ಲರ್‌ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಬೆಂಗಳೂರು ಮೆಟ್ರೊ ರೈಲು ಅಭಿವೃದ್ಧಿ ನಿಗಮಕ್ಕೆ (ಬಿಎಂಆರ್‌ಸಿಎಲ್‌) ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಮೆಟ್ರೊ ಪಿಲ್ಲರ್‌ ಕುಸಿತ ಹಾಗೂ ಬ್ರಿಗೇಡ್‌ ರಸ್ತೆಯಲ್ಲಿ ಗುಂಡಿ ಬಿದ್ದಿರುವ ವಿಚಾರದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿ ಪರಿಗಣಿಸಿ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ನ್ಯಾಯಮೂರ್ತಿ ಅಲೋಕ್‌ ಅರಾಧೆ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. 

ನನಗೆ 100 ದಿನ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕೊಡಿ, ಪಕ್ಷವನ್ನು ಸಂಘಟಿಸುವೆ: ವಿ.ಸೋಮಣ್ಣ

ವಿಚಾರಣೆ ನಡೆಸಿದ ಹೈಕೋರ್ಟ್‌, ಪ್ರತಿವಾದಿಗಳಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ, ಬಿಬಿಎಂಪಿ, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬಿಎಂಆರ್‌ಸಿಎಲ್‌ ಮುಖ್ಯ ಎಂಜಿನಿಯರ್‌ ಹಾಗೂ ಕಾಮಗಾರಿ ಗುತ್ತಿಗೆ ಪಡೆದಿರುವ ಮೆಸರ್ಸ್‌ ನಾಗಾರ್ಜುನ್‌ ಕನ್ಸಟ್ರಕ್ಷನ್‌ ಕಂಪನಿ ಲಿಮಿಟೆಡ್‌ನ (ಎನ್‌ಸಿಸಿ) ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್‌ ಜಾರಿಗೊಳಿಸಿತು. ಎರಡು ವಾರದಲ್ಲಿ ಅರ್ಜಿ ಕುರಿತು ಉತ್ತರಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿತು.

PREV
Read more Articles on
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ