ಬೆಂಗಳೂರು(ಏ.16): ಡಬಲ್ ಮರ್ಡರ್ ಆರೋಪಿಯನ್ನ ಬಂಧಿಸಲು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಆರೋಪಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಕುಮಾರಸ್ವಾಮಿ ಲೇಔಟ್‌ನ ದೇವರ ಕೆರೆ ಬಳಿ ನಡೆದಿದೆ. ಈ ವೇಲೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಮೇಲೆ ಫೈರಿಂಗ್ ನಡೆಸಿದ್ದಾರೆ.
ಈ ವೇಳೆ ಆರೋಪಿ ಸಂಜಯ್ ಅಲಿಯಾಸ್ ಚಿಕ್ಕಪ್ಪಿ ಕಾಲಿಗೆ ಗುಂಡು ತಗುಲಿದೆ. ಮೊನ್ನೆಯಷ್ಟೆ ಸಂಜಯ್ ಅಲಿಯಾಸ್ ಚಿಕ್ಕಪ್ಪಿ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಡಬಲ್ ಮರ್ಡರ್ ಮಾಡಿದ್ದ ಆರೋಪಿಯಾಗಿದ್ದಾನೆ. ಆರೋಪಿ ಸುಳಿವಿನ ಮೆರೆಗೆ ಪೊಲೀಸರು ಬಂಧಿಸಲು ಹೋಗಿದ್ದರು. ಈ ವೇಳೆ ಸುಬ್ರಮಣ್ಯ ಪುರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಮಧು ಅವರ ಮೇಲೆ ಸಂಜಯ್ ಅಲಿಯಾಸ್ ಚಿಕ್ಕಪ್ಪಿ ಮಾರಕಾಸ್ತ್ರದಿಂದ ಹಲ್ಲೆ ಮಾಡಲು ಮುಂದಾಗಿದ್ದನು.
ಬೆಳಗಾವಿ: ಸಾರ್ವಜನಿಕ ಪ್ರದೇಶದಲ್ಲಿ ಪೊಲೀಸರ ಮುಂದೆಯೇ ಫೈರಿಂಗ್..!
ಆಗ ಕೋಣನಕುಂಟೆ ಇನ್ಸ್‌ಪೆಕ್ಟರ್ ಧರ್ಮೇಂದ್ರ ಅವರು ಆತ್ಮರಕ್ಷಣೆಗಾಗಿ ಆರೋಪಿ ಮೇಲೆ ಫೈರಿಂಗ್ ಮಾಡಿದ್ದಾರೆ. ಇದೇ ಏಪ್ರಿಲ್ 12 ರಂದು ರೌಡಿ ಮುಕುಂದ @ ಕರಿಹಂದಿ ಹಾಗೂ ಮನೋಜ್‌ನನ್ನು ಸಂಜಯ್ ಮತ್ತು ಅವನ ತಂಡ ಹತ್ಯೆಗೈದಿದ್ದರು ಎಂದು ಆರೋಪಿಸಲಾಗಿದೆ. ಅದೃಷ್ಟವಷಾತ್ ಪೊಲೀಸ್ ಅಧಿಕಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.