ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅಧಿಕಾರಿ, ಸಿಬ್ಬಂದಿಗಳ ಸೇವೆಯನ್ನು ಸ್ಮರಿಸಿ ಸತ್ಕರಿಸುವ ಉದ್ದೇಶದಿಂದ ಆಚರಿಸಲಾಗುವ ಪೊಲೀಸ್ ಧ್ವಜ ದಿನಾಚರಣೆಯನ್ನು ಹುಬ್ಬಳ್ಳಿಯಲ್ಲೂ ಆಚರಿಸಲಾಯಿತು.
ವರದಿ: ಗುರುರಾಜ ಹೂಗಾರ.
ಹುಬ್ಬಳ್ಳಿ (ಏ.02): ಪೊಲೀಸ್ ಇಲಾಖೆಯಲ್ಲಿ (Police Department) ಸೇವೆ ಸಲ್ಲಿಸಿ ನಿವೃತ್ತರಾದ ಅಧಿಕಾರಿ, ಸಿಬ್ಬಂದಿಗಳ ಸೇವೆಯನ್ನು ಸ್ಮರಿಸಿ ಸತ್ಕರಿಸುವ ಉದ್ದೇಶದಿಂದ ಆಚರಿಸಲಾಗುವ ಪೊಲೀಸ್ ಧ್ವಜ ದಿನಾಚರಣೆಯನ್ನು (Police Flag Day) ಹುಬ್ಬಳ್ಳಿಯಲ್ಲೂ (Hubballi) ಆಚರಿಸಲಾಯಿತು. ನಗರದ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತ್ ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಪೋಲಿಸ್ ಇನ್ಸ್ಪೆಕ್ಟರ್ ಎ.ಆರ್.ಕುಲಕರ್ಣಿ ಅವರು ತೆರೆದ ವಾಹನದಲ್ಲಿ ತೆರಳಿ ಪರೇಡ್ ವೀಕ್ಷಿಸಿದರು.
ನಿವೃತ್ತ ಪೋಲಿಸ್ ಇನ್ಸ್ಪೆಕ್ಟರ್ ಅರುಣಕುಮಾರ ಸಾಳುಂಕೆ ಅವರನ್ನು ಅತಿಥಿಗಳನ್ನಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿ ಗೌರವಿಸಲಾಯಿತು. ಆಕರ್ಷಕ ಪಥಸಂಚಲನದ ಮೂಲಕ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು. ಇದೇ ಮೊದಲ ಬಾರೀಗೆ ಕನ್ನಡದಲ್ಲಿ ಕವಾಯತ್ ಪರೇಡ ನಡೆಸಿದ್ದು ವಿಶೇಷವಾಗಿತ್ತು. ಇದುವರೆಗೆ ಕವಾಯತ್ ಸೂಚನೆಗಳ ಪರೇಡ್ ಕಮಾಂಡರ್ ಆಂಗ್ಲ ಭಾಷೆಯಲ್ಲಿ ನೀಡುತ್ತಿದ್ದರು. ಆದ್ರೇ ಇದೇ ಮೊದಲ ಬಾರೀ ಪರೇಡ್ ಕಮಾಂಡರ್ ಕನ್ನಡದಲ್ಲಿ ಸೂಚನೆಗಳನ್ನು ನೀಡಿ ಪರೇಡ್ ನಡೆಸಿದ್ದು ವಿಶೇಷವಾಗಿತ್ತು.
Hubballi: ಸಾಲ ಮಾಡಿ ಸಂಕಷ್ಟಕ್ಕೆ ಸಿಲುಕಿದ ಬ್ಯಾಂಕ್ ಉದ್ಯೋಗಿ!
ಈ ಸಂದರ್ಭದಲ್ಲಿ ಮಾತನಾಡಿದ ಪೋಲಿಸ್ ಆಯುಕ್ತ ಲಾಬೂರಾಮ್ ಅವರು, ಪ್ರತಿ ವರ್ಷ ಏಪ್ರಿಲ್ 2 ರಂದು ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಗುತ್ತಿದೆ. ಪೊಲೀಸ್ ಧ್ವಜ ಮಾರಾಟದಿಂದ ಬಂದ ಹಣವನ್ನು ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯ, ಅವರ ಮಕ್ಕಳ ಶಿಕ್ಷಣಕ್ಕಾಗಿ ವಿನಿಯೋಗಿಸಲಾಗುತ್ತದೆ ಎಂದರು. ಪೋಲಿಸ್ ಧ್ವಜ ಆಚರಣೆ ಕಾರ್ಯಕ್ರಮದಲ್ಲಿ ಡಿಸಿಪಿಗಳಾದ ಎಸ್.ವಿ ಯಾದವ್, ಸಾಹಿಲ್ ಬಾಗಲಾ, ಎಸಿಪಿಗಳಾದ ಆರ್.ಕೆ.ಪಾಟೀಲ್, ತಾಯಪ್ಪ ದೊಡ್ಡಮನಿ, ಗಣ್ಯರಾದ ಮಾಜಿ ಸಂಸದ ಐ.ಜಿ. ಸನದಿ, ಉದ್ಯಮಿ ವಿ.ಎಸ್.ವಿ ಪ್ರಸಾದ್ ಸೇರಿದಂತೆ ಮುಂತಾದವರು ಇದ್ದರು.
ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ವಿಂಗ್ಸ್ ಇಂಡಿಯಾ- 2022 ಪ್ರಶಸ್ತಿ: ಉತ್ತರ ಕರ್ನಾಟಕ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದ ಹುಬ್ಬಳ್ಳಿಯಲ್ಲಿ ರೈಲು ಹಾಗೂ ಸಾರಿಗೆ ಸೇವೆ ಜನಪ್ರಿಯತೆ ಪಡೆದಿರುವಂತೆ ವಿಮಾನ ಸೇವೆ ಕೂಡ ಸಾಕಷ್ಟು ಜನಪ್ರಿಯತೆ ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಉತ್ತಮ ಸೇವೆ ಹಾಗೂ ಸಂಪರ್ಕದ ಮೂಲಕ ಹುಬ್ಬಳ್ಳಿಯ ವಿಮಾನ ನಿಲ್ದಾಣ ವಿಂಗ್ಸ್ ಇಂಡಿಯಾ-2022 ಅತ್ಯುತ್ತಮ ವಿಮಾನ ನಿಲ್ದಾಣ ಎಂಬ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ವಿಂಗ್ಸ್ ಇಂಡಿಯಾ 2022 ಅವರ ಪ್ರಾದೇಶಿಕ ಸಂಪರ್ಕದ ವಿಭಾಗದಲ್ಲಿ ಅತ್ಯುತ್ತಮ ವಿಮಾನ ನಿಲ್ದಾಣ ಪ್ರಶಸ್ತಿ ದೊರಕಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
Legend With Evening: ಅಹಂ ಕಿತ್ಹಾಕಿದರೆ ಗೆಲವು ನಿಶ್ಚಿತ: ಕಪೀಲ್ ದೇವ್
ಕೋವಿಡ್ ನಂತರದಲ್ಲಿ ಚೇತರಿಕೆ ಕಂಡಿರುವ ಹುಬ್ಬಳ್ಳಿ ವಿಮಾನ ನಿಲ್ದಾಣ ಇತ್ತಿಚೆಗೆ ಕಾರ್ಗೋ ಸೇವೆಯ ಮೂಲಕ ಸರಕು ಸಾಗಾಣಿಕೆಯಲ್ಲಿಯೂ ಸಾಧನೆ ಮಾಡುತ್ತಿದ್ದು, ಪ್ರಯಾಣಿಕರ ಮೆಚ್ಚುಗೆಗೆ ಪಾತ್ರವಾಗಿರುವ ವಿಮಾನ ನಿಲ್ದಾಣವಾಗಿದೆ. ಒಟ್ಟಿನಲ್ಲಿ ಸ್ವಚ್ಚತೆ, ವ್ಯವಸ್ಥಿತ ಪರಿಸರ ಹೀಗೆ ಹಲವಾರು ವಿಷಯ ವಸ್ತಗಳ ಮಾನದಂಡವನ್ನು ಆಧರಿಸಿ ಅತ್ಯುತ್ತಮ ವಿಮಾನ ನಿಲ್ದಾಣ ಎಂಬುವಂತ ಪ್ರಶಸ್ತಿಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣ ಭಾಜನವಾಗಿರುವುದು ಹುಬ್ಬಳ್ಳಿಯ ಹೆಮ್ಮೆ ವಿಷಯವಾಗಿದೆ.