ಬೆಳಗಾವಿ: ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ, ಪೊಲೀಸ್‌ ಇನ್ಸಪೆಕ್ಟರ್‌ ಸಸ್ಪೆಂಡ್‌

By Kannadaprabha NewsFirst Published Dec 16, 2023, 8:20 PM IST
Highlights

ಕಾಕತಿ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ

ಬೆಳಗಾವಿ(ಡಿ.16): ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಆದೇಶ ಹೊರಡಿಸಿದ್ದಾರೆ. 

ಒಂದು ಕಡೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್‌, ಸರ್ಕಾರಕ್ಕೆ ಮತ್ತು ಪೊಲೀಸ್ ಇಲಾಖೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರೆ ಮತ್ತೊಂದು ಕಡೆ ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಅಷ್ಟೇ ಅಲ್ಲದೇ ವಿಪಕ್ಷ ನಾಯಕ ಆರ್.ಅಶೋಕ ನೇತೃತ್ವದ ತಂಡ ಶುಕ್ರವಾರ ಸಂಜೆ ಕಾಕತಿ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ಪಡೆದುಕೊಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. 

Latest Videos

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವುದು ತಲೆ ತಗ್ಗಿಸುವ ಕೃತ್ಯ, ಅಕ್ಷಮ್ಯ ಅಪರಾಧ: ಬಿ.ವೈ. ವಿಜಯೇಂದ್ರ

ಅಲ್ಲದೇ ಶನಿವಾರದಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿತ್ತು. ಇದೇ ವೇಳೆ ಪ್ರಕರಣದ ಕುರಿತು ಮಾಹಿತಿ ಪಡೆದುಕೊಂಡು ಬರಲು ಬಿಜೆಪಿ ಹೈಕಮಾಂಡ್‌ 5 ಜನ ಸದಸ್ಯರ ಸತ್ಯಶೋಧನಾ ಸಮಿತಿಯನ್ನು ನೇಮಿಸಿದೆ. ಈ ಸಮಿತಿ ಕೂಡ ಶನಿವಾರ ಬೆಳಗಾವಿಗೆ ಆಗಮಿಸಲಿದೆ. ಅಲ್ಲದೆ, ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಗೆ ಸಾಂತ್ವನ ಹೇಳಲಿದ್ದು, ಕಾಕತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ಕುರಿತು ಮಾಹಿತಿ ಪಡೆಯಲಿದೆ.

click me!