ಕೊಪ್ಪಳ : ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಆರೋಪಿ ಮದುವೆಯಲ್ಲಿ ಪೊಲೀಸ್ ಅಧಿಕಾರಿಗಳು

Suvarna News   | Asianet News
Published : Jul 20, 2021, 02:54 PM IST
ಕೊಪ್ಪಳ : ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಆರೋಪಿ ಮದುವೆಯಲ್ಲಿ ಪೊಲೀಸ್ ಅಧಿಕಾರಿಗಳು

ಸಾರಾಂಶ

ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ‌ ಪ್ರಕರಣದ ಆರೋಪಿಯ ಮದುವೆಯಲ್ಲಿ ಪೊಲೀಸ್ ಅಧಿಕಾರಿಗಳು ಕೊಪ್ಪಳದಲ್ಲೊಂದು ಪೊಲೀಸರ ನೈತಿಕ ಅಧಃಪತನದ ಪ್ರಕರಣ 

 ಕೊಪ್ಪಳ (ಜು.20): ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ‌ ಪ್ರಕರಣದ ಆರೋಪಿಯ ಮದುವೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದು  ಕೊಪ್ಪಳದಲ್ಲೊಂದು ಪೊಲೀಸರ ನೈತಿಕ ಅಧಃಪತನದ ಪ್ರಕರಣ ಬೆಳಕಿಗೆ ಬಂದಿದೆ. 

ಯಲ್ಲಾಲಿಂಗ ಕೊಲೆ ಪ್ರಕರಣದ ಆರೋಪಿಗಳ ಮದುವೆಯಲ್ಲಿ ಪೊಲೀಸ್‌ ಅಧಿಕಾರಿಗಳು ಭಾಗಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. 

ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಇದೀ ಅದೇ ಯಲ್ಲಾಲಿಂಗ ನ ಕೊಲೆ ಪ್ರಕರಣದ ಮೂರನೇ ಆರೋಪಿ ಮಹಾಂತೇಶ್ ನಾಯಕ್ ನ ಮದುವೆಯಲ್ಲಿ  ಪೊಲೀಸ್ ಅಧಿಕಾರಿಗಳಾದ  ಗಂಗಾವತಿ ಡಿವೈಎಸ್ಪಿ ಆರ್ ಎಸ್ ಉಜ್ಜನ ಕೊಪ್ಪ, ಗಂಗಾವತಿ ಸಿಪಿಐ ಉದಯರವಿ, ಕನಕಗಿರಿ ಪಿಎಸ್ಐ ತಾರಾಬಾಯಿ ಮದುವೆಯಲ್ಲಿ ಭಾಗಿಯಾಗಿದ್ದಾರೆ.

ಮೈಸೂರು; ಪ್ರಿಯಕರನ ಜತೆ ಸೇರಿ 50 ವರ್ಷದ ಪತಿಯನ್ನು ಹತ್ಯೆ ಮಾಡಿದ 29ರ ಪತ್ನಿ!

ಆರೋಪಿಯ ಮದುವೆ ಕಾರ್ಯಕ್ರಮದಲ್ಲಿ ಆತನ ಜೊತೆಗೆ ಪೊಲೀಸ್ ಅಧಿಕಾರಿಗಳು ಹೂವಿನ ಹಾರ ಹಾಕಿಕೊಂಡು ನಿಂತಿರುವ ಫೊಟೊ ಇದೀಗ ಎಲ್ಲೆಡೆ ವೈರಲ್ ಆಗಿದೆ. 

ಜನವರಿ 11, 2015ರಲ್ಲಿ ಕೊಪ್ಪಳ ರೈಲು ನಿಲ್ದಾಣದಲ್ಲಿ ಯಲ್ಲಾಲಿಂಗನ ಕೊಲೆ ನಡೆದಿತ್ತು.   ಈ ಪ್ರಕರಣದಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ ಆಪ್ತ ಹನುಮೇಶ್ ನಾಯಕ್ ಸೇರಿ ಹಲವರ ಬಂಧನವಾಗಿತ್ತು.

ಸದ್ಯ ಜಾಮೀನಿನ ಮೇಲೆ ಯಲ್ಲಾಲಿಂಗನ ಕೊಲೆ ಆರೋಪಿಗಳು ಹೊರಗಡೆ ಇದ್ದು, ಇದೀಗ ಆರೋಪಿಯ ಮದುವೆಯಲ್ಲಿ ಭಾಗಿಯಾಗಿರುವ ಪೊಲೀಸರ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.  

PREV
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು