ಮಂಗಳೂರಿನಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳನ್ನು ಮತ್ತೆ ಮಂಗಳೂರಿಗೆ ಕರೆಸಲಾಗಿದೆ. ಮಂಗಳೂರು ನಗರದಲ್ಲಿ ಶುಕ್ರವಾರ ಕರ್ಫ್ಯೂ ಹೊರತಾಗಿಯೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದ್ದರಿಂದ ಪರಿಸ್ಥಿತಿಯನ್ನು ನೋಡಿಕೊಂಡು ಕರ್ಫ್ಯೂಸಡಿಲಿಕೆ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್. ಹರ್ಷ ಹೇಳಿದ್ದಾರೆ.
ಮಂಗಳೂರು(ಡಿ.21): ಮಂಗಳೂರು ನಗರದಲ್ಲಿ ಶುಕ್ರವಾರ ಕರ್ಫ್ಯೂ ಹೊರತಾಗಿಯೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದ್ದರಿಂದ ಪರಿಸ್ಥಿತಿಯನ್ನು ನೋಡಿಕೊಂಡು ಕಫä್ರ್ಯ ಸಡಿಲಿಕೆ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್. ಹರ್ಷ ಹೇಳಿದ್ದಾರೆ.
ಶುಕ್ರವಾರ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಪ್ರ್ಯೂ ಇದ್ದರೂ ಸಂಜೆ ವರೆಗೆ ಮಂಗಳೂರಿನ ಪರಿಸ್ಥಿತಿ ಶಾಂತವಾಗಿತ್ತು. ಮಧ್ಯಾಹ್ನ ವೇಳೆಗೆ 2 ಗಂಟೆಗಳ ಕಾಲ ಸಮುದಾಯದ ಮುಖಂಡರ ಕೋರಿಕೆ ಮೇರೆಗೆ ಪ್ರಾರ್ಥನೆಗೆ ಅವಕಾಶ ಮಾಡಿಕೊಡಲಾಗಿತ್ತು. ಮಂಗಳೂರು ನಗರದಲ್ಲಿ ಹಗಲು ಮತ್ತು ರಾತ್ರಿ ಕಟ್ಟುನಿಟ್ಟಿನ ಭದ್ರತೆ ಕೈಗೊಳ್ಳಲಾಗಿದೆ. ಗುರುವಾರ ರಾತ್ರಿ ವಿಧಿಸಿದ ಕರ್ಫ್ಯೂ ಡಿ.22ರ ಮಧ್ಯರಾತ್ರಿ ವರೆಗೆ ಮುಂದುವರಿಯಲಿದೆ ಎಂದಿದ್ದಾರೆ.
ಹಿಂಸಾಚಾರ ಪೊಲೀಸರ ಪೂರ್ವ ನಿಯೋಜಿತ ಕೃತ್ಯ: ಆರೋಪ
ಗುರುವಾರ ಸಂಭವಿಸಿದ ಹಿಂಸಾಚಾರದಲ್ಲಿ 33 ಮಂದಿ ಪೊಲೀಸರು ಹಾಗೂ ಐದು ಮಂದಿ ನಾಗರಿಕರು ಗಾಯಗೊಂಡಿದ್ದಾರೆ. ಗಾಯಾಳು ಪೊಲೀಸರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಮಂಗಳೂರು ದಕ್ಷಿಣದಲ್ಲಿ 2, ಮಂಗಳೂರು ಉತ್ತರದಲ್ಲಿ 5 ಪ್ರಕರಣ ದಾಖಲಾಗಿದೆ. ಗಾಯಾಳುಗಳು ಬೇರೆ ಬೇರೆ ಆಸ್ಪತ್ರೆಗಳಲ್ಲಿ ದಾಖಲಾಗಿದ್ದು, ಅವರು ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.
ಹಿಂಸಾಚಾರ ಪೊಲೀಸರ ಪೂರ್ವ ನಿಯೋಜಿತ ಕೃತ್ಯ: ಆರೋಪ
ನಗರದ ವೆನ್ಲಾಕ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಕೇರಳದ ಪತ್ರಕರ್ತರ ತಂಡ ಅಲ್ಲಿ ಪೊಲೀಸ್ ಭದ್ರತೆಗೆ ಅಡ್ಡಿಪಡಿಸಿತ್ತು. ಅಲ್ಲದೆ ಸೂಕ್ತ ಗುರುತು ಪತ್ರವನ್ನು ಹೊಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೇರಳ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದು ಎಂಟು ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಸಂಜೆ ವೇಳೆ ಅವರನ್ನು ಬಿಡುಗಡೆಗೊಳಿಸಲಾಗಿದೆ. ಹೊರ ರಾಜ್ಯದಿಂದ ಆಗಮಿಸುವ ಪತ್ರಕರ್ತರು ಕಪ್ರ್ಯೂ ಸಂದರ್ಭ ಸೂಕ್ತ ಗುರುತುಪತ್ರ ಹೊಂದಿರಬೇಕಾದ್ದು ಅತ್ಯವಶ್ಯಕ ಎಂದಿದ್ದಾರೆ.
ಮಂಗಳೂರಲ್ಲಿ ದಯಾನಂದ್ ಭದ್ರತಾ ಉಸ್ತುವಾರಿ
ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಭದ್ರತಾ ಕ್ರಮ ಕೈಗೊಳ್ಳುವ ಸಲುವಾಗಿ ಎಡಿಜಿಪಿ(ಕಾನೂನು-ಸುವ್ಯವಸ್ಥೆ) ದಯಾನಂದ್ ಮಂಗಳೂರಿಗೆ ಆಗಮಿಸಿದ್ದಾರೆ.
ಗುರುವಾರ ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದು, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಕ್ತ ಮಾರ್ಗದರ್ಶನ ಮಾಡಿದರು. ಅಲ್ಲದೆ ಮಂಗಳೂರಿನಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳನ್ನು ಸದ್ಯದ ಮಟ್ಟಿಗೆ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸಲು ಹೊರಗಿನ ಜಿಲ್ಲೆಗಳಿಂದ ಕರೆಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.