500ಕ್ಕೂ ಹೆಚ್ಚು ಜನರಿದ್ದ ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸ್ ರೈಡ್

Published : Dec 08, 2019, 11:04 AM IST
500ಕ್ಕೂ ಹೆಚ್ಚು ಜನರಿದ್ದ ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸ್ ರೈಡ್

ಸಾರಾಂಶ

ರಾಮನಗರದ ಖಾಸಗಿ ಜಮೀನೊಂದರಲ್ಲಿ 500ಕ್ಕೂ ಹೆಚ್ಚು ಜನರು ಸೇರಿ ನಡೆಸುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿ ಹಲವರನ್ನು ಅರೆಸ್ಟ್ ಮಾಡಲಾಗಿದೆ.

ರಾಮನಗರ[ಡಿ.08]: 500ಕ್ಕೂ ಹೆಚ್ಚು ಜನರು ಸೇರಿ ನಡೆಸುತ್ತಿದ್ದ ರೇವ್ ಪಾರ್ಟಿ ಅಡ್ಡೆ ಮೇಲೆ ರಾಮನಗರ ಪೊಲೀಸರು ದಾಳಿ ಮಾಡಿದ್ದಾರೆ. 

ರಾಮನಗರ ತಾಲೂಕಿನ ವಿಭೂತಿ ಕೆರೆಯ ಬಳಿಯ 32 ಎಕರೆ ಪ್ರದೇಶದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. 

ಬೆಂಗಳೂರು ಮೂಲದ ವೆಂಕಟೇಶ್  ಎನ್ನುವವರಜಮೀನಿನಲ್ಲಿ ಪಾರ್ಟಿ ನಡೆಸಲಾಗುತಿತ್ತು. ಕೇರಳ, ತಮಿಳುನಾಡು, ಬೆಂಗಳೂರಿನ 500ಕ್ಕೂ ಹೆಚ್ಚು ಯುವಕ ಯುವತಿಯರು ಸೇರಿ ಇಲ್ಲಿ ಪಾರ್ಟಿ ನಡೆಸುತ್ತಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆ್ಯಪ್ ಮೂಲಕ ಪಾರ್ಟಿ ಆಯೋಜನೆ ಮಾಡಲಾಗಿದ್ದು, ಮಧುಮಿತ, ನಬಿರಾ, ರಿಚು ಎಂಬುವವರು ಸೇರಿ ಕಾರ್ಯಕ್ರಮ ಆಯೋಜನೆ ಮಾಡಿದ್ದರು. 

ಈ ಬಗ್ಗೆ ಸೂಕ್ತ ಮಾಹಿತಿ ಆಧರಿಸಿ ರಾಮನಗರ ಎಸ್ ಪಿ ಅನೂಪ್ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 10ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೇ ಡಿಜೆ ಬಾಕ್ಸ್, ಶಾಮಿಯಾನ, ಕ್ಯಾಮರಾ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 

PREV
click me!

Recommended Stories

ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ
ಉಬರ್ ಆ್ಯಪ್‌ನಲ್ಲೂ ಬೆಂಗಳೂರು ಮೆಟ್ರೋ ಟಿಕೆಟ್ ಖರೀದಿ ಸೌಲಭ್ಯ, ಬುಕಿಂಗ್ ಮಾಡುವುದು ಹೇಗೆ?