
ಮೈಸೂರು(ಜೂ.21): ಮಾಜಿ ಸಚಿವ ಎಚ್. ವಿಶ್ವನಾಥ್ ರಾಜಕೀಯ ದುರಂತ ಅಂತ್ಯ ಕಂಡಿದ್ದಾರೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಲೇವಡಿ ಮಾಡಿದರು.
ಮೈಸೂರಿನಲ್ಲಿ ತಮ್ಮ ಕಚೇರಿ ಆವರಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಮತದಾರರಿಗೆ, ನಾಯಕರಿಗೆ, ಕ್ಷೇತ್ರದ ಜನರಿಗೆ ದ್ರೋಹ ಮಾಡಿದರೆ ಹೀಗೆ ಆಗುತ್ತದೆ. ರಾಜಕಾರಣಿಗೆ ಪ್ರಾಮಾಣಿಕತೆ ಇಲ್ಲ ಅಂದರೆ ಏನಾಗುತ್ತೆ ಅನ್ನೋದಕ್ಕೆ ಇವರೇ (ಎಚ್. ವಿಶ್ವನಾಥ್) ಉದಾಹರಣೆ ಎಂದು ಕುಟುಕಿದರು.
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರ ಹತ್ಯೆ
ಇನ್ನು ಅವರಿಗೆ ಬಾಕಿ ಇರುವುದು ಜಿಲ್ಲಾ ಪಂಚಾಯಿತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆ ಮಾತ್ರ. ಜಿಲ್ಲೆಯ ಎಲ್ಲ ಪಕ್ಷ ರಾಜಕಾರಣಿಗಳಿಗೆ ಇವರ ಸ್ಥಿತಿ ಸ್ಪಷ್ಟಉದಾಹರಣೆ. ಜೆಡಿಎಸ್ ನಾಯಕರು, ಕಾರ್ಯಕರ್ತರು ನೀಡಿದ ಭಿಕ್ಷೆಯಿಂದ ಅವರು ಎರಡು ವರ್ಷ ಚಲಾವಣೆಯಲ್ಲಿದ್ದರು ಎಂದರು.
ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಎಚ್. ವಿಶ್ವನಾಥ್‌ಗೆ ಇಲ್ಲ. ನಿಮ್ಮ ಮೇಲೆ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರ ಋುಣವಿದೆ. ಕುಮಾರಸ್ವಾಮಿ ಅವರ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಅವರು ಹೇಳಿದರು.
ಮೈಮುಲ್ ನೇಮಕಾತಿಗೆ ತಡೆ
ಮೈಮುಲ್ ಅಕ್ರಮ ನೇಮಕಾತಿ ಸಂಬಂಧ ಇಡೀ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ನೇಮಕಾತಿ ಪ್ರಕ್ರಿಯೆಗೆ 3 ವಾರಗಳ ನಿಷೇಧ ಹೇರಿದೆ. ಇದರಿಂದಾಗಿ ಮೈಮುಲ್ ಎಲ್ಲಾ ಪ್ರಕ್ರಿಯೆಗೆ ತಡೆ ಬಿದ್ದಿದ್ದು, ಕೊನೆಗೂ ನಮ್ಮ ಮನವಿಯನ್ನ ನ್ಯಾಯಾಲಯ ಪುರಸ್ಕರಿಸಿದೆ ಎಂದು ಅವರು ತಿಳಿಸಿದರು.
ವಿಶ್ವನಾಥ್ ಪೆದ್ದನೋ, ಜಾಣನೋ ಗೊತ್ತಿಲ್ಲ: ಸಿದ್ದು
ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಪಾರದಾರ್ಶಕವಾಗಿ ಮೈಮುಲ್ ವಿವಿಧ ಹುದ್ದೆಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕು. ನ್ಯಾಯಯುತವಾಗಿ ನೇಮಕಾತಿ ನಡೆಯಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕ್ರಮ ಕೈಗೊಳ್ಳಬೇಕು. ಹಣವನ್ನು ಅಡ್ವಾನ್ಸ್ ಮಾಡಿದವರು ಬಡ್ಡಿ ಸಮೇತ ವಾಪಸ್ ಪಡೆದುಕೊಳ್ಳಿ. ಹಣ ಕಳೆದುಕೊಂಡವರ ಜೊತೆ ನಾವು ಇರುತ್ತೇವೆ ಎಂದು ಅವರು ಅಭಯ ನೀಡಿದರು. ಶಾಸಕ ಅಶ್ವಿನ್‌ಕುಮಾರ್, ಜಿಪಂ ಮಾಜಿ ಸದಸ್ಯ ದ್ವಾರಕೀಶ್ ಮೊದಲಾದವರು ಇದ್ದರು.
"