ಬೆಂಗಳೂರು ಜನರಿಗೆ ಶಾಕಿಂಗ್ ನ್ಯೂಸ್; ಇಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಪೂರೈಕೆ ಸ್ಥಗಿತ!

Published : May 15, 2025, 08:20 AM IST
ಬೆಂಗಳೂರು ಜನರಿಗೆ ಶಾಕಿಂಗ್ ನ್ಯೂಸ್; ಇಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಪೂರೈಕೆ ಸ್ಥಗಿತ!

ಸಾರಾಂಶ

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ ೧೦ ರಿಂದ ಸಂಜೆ ೬ ರವರೆಗೆ ವಿದ್ಯುತ್ ಕಡಿತವಿರುತ್ತದೆ. ಬಾಣಸವಾಡಿ ೬೬ ಕೆ.ವಿ. ಮಾರ್ಗಗಳ ತುರ್ತು ನಿರ್ವಹಣೆ ಕಾರಣ, ಹೊರಮಾವು, ಕಮ್ಮನಹಳ್ಳಿ, ಬೈರತಿ ಸೇರಿದಂತೆ ಹಲವು ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಬೆಸ್ಕಾಂ ಜನರಿಗೆ ಸಹಕರಿಸಲು ಮನವಿ ಮಾಡಿದೆ.

ಬೆಂಗಳೂರಿನ ವಿವಿಧೆಡೆ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ. ಒಂದೆಡೆ ವಿಪರೀತ ಶೆಖೆ, ಮತ್ತೊಂದೆಡೆ ಎಸಿ, ಫ್ಯಾನ್ ಬಳಸೋಕು ಕರೆಂಟ್ ಇಲ್ಲದಂತಾಗಲಿದೆ. ಬೆಂಗಳೂರಿನ 66 ಕೆವಿ ಬಾಣಸವಾಡಿ - ಹೆಚ್‌ಬಿ ಆರ್ ಲೈನ್ ಮತ್ತು 66 ಕೆವಿ ಬಾಣಸವಾಡಿ - ಐಟಿಐ ಲೈನ್‌ಗಳಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ನಗರದ ಆಯ್ದ ಸಬ್‌ಸ್ಟೇಷನ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ, ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು : 
ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇ ಔಟ್, ಚಿನ್ನಸ್ವಾಮಪ್ಪ ಲೇ ಔಟ್, ಕೋಕೋನಟ್‌ ಗ್ರೋವ್, ದೇವಮಾತಾ ಶಾಲೆ, ಅಮರ್‌ ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್,ಕ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯೂ.ಎಸ್. ಎಸ್.ಬಿ ವಾಟರ್‌ ಟ್ಯಾಂಕ್, ಹೆಣ್ಣೂರು ಗ್ರಾಮ

ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯ ಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ, ಎನ್.ಆರ್.ಐ ಲೇಔಟ್, ಸುಂದರಾಂಜನೇಯ ದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್

5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ನೆಹರು ರಸ್ತೆ, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ ಗಾರ್ಡನ್.

ಎಂ.ಎಂ. ಗಾರ್ಡನ್, ದಿವ್ಯ ಉನ್ನತಿ ಲೇಔಟ್, ಪ್ರಕೃತಿ ಟೌನ್‌ ಶಿಪ್, ಮಲ್ಲಪ್ಪ ಲೇಔಟ್, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿ ಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಮುನೆಗೌಡ ರಸ್ತೆ, ಸತ್ಯಮೂರ್ತಿ ರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್, ಬೆಥೆಲ್‌ ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇನ್ನು ಬೆಂಗಳೂರು ನಿವಾಸಿಗಳು ಕಚೇರಿಗೆ ಹೋಗುವವರು ಹಾಗೂ ಇತರೆ ಕೆಲಸ ಮಾಡಿಕೊಳ್ಳುವವರು ಬೆಳಗ್ಗೆ 10 ಗಂಟೆಯೊಳಗೆ ವಿದ್ಯುತ್ ಮೇಲಿನ ಅವಲಂಬಿತ ಕಾರ್ಯಗಳನ್ನು ಮುಗಿಸಿಕೊಳ್ಳಬೇಕು. ಇನ್ನು ಅಗತ್ಯವಿದ್ದಲ್ಲಿ ಬ್ಯಾಟರಿಗಳನ್ನು ಚಾರ್ಜ್ ಮಾಡಿಕೊಳ್ಳುವಂತೆ ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಜೊತೆಗೆ, ಸಂಜೆ 6 ಗಂಟೆವರೆಗೂ ವಿದ್ಯುತ್ ಸಂಪರ್ಕ ಮರುಪೂರಣ ಆಗುವವರೆಗೆ ಸಹಕಾರ ನೀಡುವಂತೆ ಗ್ರಾಹಕರಿಗೆ ಮನವಿ ಮಾಡಿಕೊಂಡಿದೆ.

PREV
Read more Articles on
click me!

Recommended Stories

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ರೆನಾಲ್ಟ್ ಡಸ್ಟರ್ ಕಾರು!
ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್