
ಚಾಮರಾಜನಗರ (ಅಕ್ಟೋಬರ್ 25): ಕೆಲವರಿಗೆ ನಮ್ಮ ಆಡಳಿತ ಸಹಿಸಿಕೊಳ್ಳಲು ಆಗ್ತಿಲ್ಲ. ಕೆಲವರಿದ್ದಾರೆ, ಸುಳ್ಳೇ ಅವರ ಮನೆದೇವರು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ವಿರೋಧಿಗಳ ಹೆಸರನ್ನು ಹೇಳದಯೇ ವಾಗ್ದಾಳಿ ನಡೆಸಿದ್ದಾರೆ.
ಅಂತರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನದಲ್ಲಿ ಮಾರ್ಮಿಕವಾಗಿ ಮಾತನ್ನಾಡಿರುವ ಮುಖ್ಯಮಂತ್ರಿಗಳು.. ಹೆಸರು ಹೇಳದಯೇ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ. ನಮ್ಮ ಅಧಿಕಾರವನ್ನು ಸಹಿಸಿಕೊಳ್ಳಲು ಅವರಿಗೆ ಆಗ್ತಾ ಇಲ್ಲ. ಅಸೂಯೆಯಿಂದ ಬದುಕು ಹಾಳು ಮಾಡುತ್ತಿದ್ದಾರೆ, ಅಶಾಂತಿ ಉಂಟು ಮಾಡುತ್ತಿದ್ದಾರೆ. ಅಂತಹವರನ್ನು ಖಾಯಂ ಆಗಿ ಮನೆಯಲ್ಲಿ ಕೂರಿಸಬೇಕು. ನಾನು ದ್ವೇಷ ತೀರಿಸಿಕೊಳ್ಳಲು ಅಧಿಕಾರ ಬಳಸಿಕೊಳ್ಳಲ್ಲ.
ನೀವು ಅಂತವರಿಗೆ ವೋಟ್ ಹಾಕಬೇಡಿ. ಅಧಿಕಾರ ಯಾವತ್ತೂ ಶಾಶ್ವತವಲ್ಲ. ನಂಗೆ ನಮ್ಮ ಕ್ಷೇತ್ರದಲ್ಲಿ 99% ರಷ್ಟು ದಲಿತರೇ ವೋಟ್ ಮಾಡಿ ಗೆಲ್ಲಿಸಿದ್ದಾರೆ. ನನ್ನನ್ನು ಬರೋಬ್ಬರಿ ಎಂಟು ಬಾರಿ ಆರಿಸಿ ವಿಧಾನಸೌಧಕ್ಕೆ ಕಳುಹಿಸಿದ್ದಾರೆ ಎಂದರು. ಬೆನ್ನಲ್ಲೇ ಸಿಎಂ ಅವರು ಯಾಕೆ ಹಾಗೆ ಮಾತನ್ನಾಡಿದರು? ಯಾರಿಗೆ ಟಾಂಗ್ ಕೊಟ್ಟರು ಅನ್ನೋದ್ರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.
ಬಳಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಬೃಹತ್ ಬೌದ್ಧ ಮಹಾ ಸಮ್ಮೇಳನವನ್ನು ಉದ್ಘಾಟಿಸಿ, ಭಗವಾನ್ ಬುದ್ಧರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ದೀಪ ಬೆಳಗಿಸುವ ಮೂಲಕ ಗೌರವ ವಂದನೆ ಸಲ್ಲಿಸಿದೆ.
ಬೌದ್ಧ ಧರ್ಮವು ಪ್ರತಿಪಾದಿಸುವ ಸಮಾನತೆ, ಕರುಣೆ, ಸಹೋದರತೆ ಹಾಗೂ ಮಾನವೀಯ ಮೌಲ್ಯಗಳು ಸಂವಿಧಾನದ ಆಶಯಗಳನ್ನು ಪ್ರತಿಬಿಂಬಿಸುವುದರಿಂದ, ಈ ಸಮ್ಮೇಳನದಲ್ಲಿ ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಭಗವಾನ್ ಬುದ್ಧರ ಶಾಂತಿ, ಅಹಿಂಸೆ, ಕರುಣೆ ಮತ್ತು ಸಮಾನತೆಯ ಸಂದೇಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ.
ಈ ಸಮ್ಮೇಳನದಲ್ಲಿ ಸಚಿವರಾದ ಕೆ.ಎಚ್. ಮುನಿಯಪ್ಪ, ಪಿ.ಎಂ. ನರೇಂದ್ರಸ್ವಾಮಿ, ಸಿ. ಪುಟ್ಟರಂಗಶೆಟ್ಟಿ, ಬೌದ್ಧ ಸಮ್ಮೇಳನದ ಅಧ್ಯಕ್ಷರು ಹಾಗೂ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ್, ಹೆಚ್.ಎಂ. ಗಣೇಶ್ ಪ್ರಸಾದ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನರೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚೇತವನ ಬೌದ್ಧ ವಿಹಾರದ ಮನೋರಕ್ಷಿತ ಭಂತೇಜಿ, ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗಿಯಾಗಿದ್ದರು.
"ನಮ್ಮ ಆಲೋಚನೆಗಳಿಂದ ನಾವು ಜಗತ್ತನ್ನು ಸೃಷ್ಟಿಸುತ್ತೇವೆ." - ಬುದ್ಧ
ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಬೃಹತ್ ಬೌದ್ಧ ಮಹಾ ಸಮ್ಮೇಳನವನ್ನು ಉದ್ಘಾಟಿಸಿ, ಭಗವಾನ್ ಬುದ್ಧರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ದೀಪ ಬೆಳಗಿಸುವ ಮೂಲಕ ಗೌರವ ವಂದನೆ ಸಲ್ಲಿಸಿದೆ.
ಬೌದ್ಧ ಧರ್ಮವು ಪ್ರತಿಪಾದಿಸುವ ಸಮಾನತೆ, ಕರುಣೆ, ಸಹೋದರತೆ ಹಾಗೂ ಮಾನವೀಯ ಮೌಲ್ಯಗಳು ಸಂವಿಧಾನದ ಆಶಯಗಳನ್ನು ಪ್ರತಿಬಿಂಬಿಸುವುದರಿಂದ, ಈ ಸಮ್ಮೇಳನದಲ್ಲಿ ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಭಗವಾನ್ ಬುದ್ಧರ ಶಾಂತಿ, ಅಹಿಂಸೆ, ಕರುಣೆ ಮತ್ತು ಸಮಾನತೆಯ ಸಂದೇಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ.
ಈ ಸಮ್ಮೇಳನದಲ್ಲಿ ಸಚಿವರಾದ ಶ್ರೀ ಕೆ.ಎಚ್. ಮುನಿಯಪ್ಪ, ಶ್ರೀ ಪಿ.ಎಂ. ನರೇಂದ್ರಸ್ವಾಮಿ, ಶ್ರೀ ಸಿ. ಪುಟ್ಟರಂಗಶೆಟ್ಟಿ, ಬೌದ್ಧ ಸಮ್ಮೇಳನದ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಎ.ಆರ್. ಕೃಷ್ಣಮೂರ್ತಿ, ಶ್ರೀ ದರ್ಶನ್ ಧ್ರುವನಾರಾಯಣ್, ಶ್ರೀ ಹೆಚ್.ಎಂ. ಗಣೇಶ್ ಪ್ರಸಾದ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ನರೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಶ್ರೀ ಹೆಚ್.ವಿ. ಚಂದ್ರು, ಚೇತವನ ಬೌದ್ಧ ವಿಹಾರದ ಮನೋರಕ್ಷಿತ ಭಂತೇಜಿ, ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
— DK Shivakumar (@DKShivakumar) October 25, 2026