
ಬೆಂಗಳೂರು (ಆ.21): ಬೆಂಗಳೂರಿನಲ್ಲಿ ಇಂದು ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಇಂದು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯಬಾಗಲಿದೆ. 66/11ಕೆ.ವಿ ಬಿಎಂಟಿಸಿ' ಸ್ಟೇಷನ್" ನಲ್ಲಿ ತುರ್ತುನಿರ್ವಹಣೆಯ ಕಾರಣ ವಿದ್ಯುತ್ ನೀಡಿಕೆಯಲ್ಲಿ ವ್ಯತ್ಯಾಸವಾಗಲಿದೆ. ಯು.ಬಿ.ಸಿಟಿ, ಐ.ಟಿ.ಸಿ ಹೋಟೆಲ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ ರೋಡ್, ಶಾಂತಿನಗರ, ಬಿಟಿಎಸ್ ರೋಡ್, ರಿಚ್ಚಂಡ್ ಸರ್ಕಲ್, ರೆಸಿಡೆನೆಸ್ಸಿ ರೋಡ್, ಸುಧಾಮನಗರ, ಕೆ.ಎಚ್ ರೋಡವೀಲ್ಸನ್ ಗಾರ್ಡನ್, ಡಬಲ್ ರೋಡ್, ಲಾಲ್‌ಬಾಗ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.