'ಹಸು ಸಾಕಲು ಅನುಮತಿ' ಸಚಿವ ಸಚಿವ ಪ್ರಭು ಚವ್ಹಾಣ್ ಹೇಳೋದಿಷ್ಟು!

By Suvarna NewsFirst Published Oct 23, 2020, 5:24 PM IST
Highlights

ಹಸು ಸಾಕಲು ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ಪಡೆಯಬೇಕು/ ಈ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಪ್ರಭು ಚವ್ಹಾಣ್/ ರೈತರಿಗೆ ತೊಂದರೆ ಆಗಲು ಬಿಡುವುದಿಲ್ಲ/ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ

ಬೆಂಗಳೂರು(ಅ. 23)  ಹಸು ಸಾಕಲು ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ಪಡೆಯುವ ವಿಚಾರಕ್ಕೆ ಸಂಬಂಧಿಸಿ ಪಶುಸಂಗೋಪನಾ ಷಚಿವ ಪ್ರಭು ಚವ್ಹಾಣ್ ಸ್ಪಷ್ಟನೆ ನೀಡಿದ್ದಾರೆ.

ರೈತರಿಗೆ ತೊಂದರೆ ಆಗಲು ಬಿಡುವುದಿಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶ  ರಾಜ್ಯದ ರೈತರನ್ನು ಸಂಪಷ್ಟಕ್ಕೆ ಸಿಲುಕಿಸಲಿದೆ. ರಾಜ್ಯದ ಅನೇಕ ರೈತರು ಈ ಆದೇಶದಿಂದ ಆಂತಕಗೊಂಡಿದ್ದಾರೆ. ಈ ಆದೇಶದ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಮ್ಮ ಗಮನಕ್ಕೆ ತಂದಿಲ್ಲ.  ರಾಜ್ಯದ ರೈತರ ಹಿತದೃಷ್ಟಿಯಿಂದ ಈ ನಿರ್ಣಯವನ್ನು ಕೈ ಬಿಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಜಾನುವಾರುಗಳ ಕೊಂಬಿಗೆ ರೇಡಿಯಂ ಸ್ಟಿಕರ್

ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಆಗಲು ಬಿಡುವುದಿಲ್ಲ. ಈ ನಿರ್ಧಾರವನ್ನು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಯಾವ ಆಧಾರದ ಮೇಲೆ ಕೈಗೊಂಡಿದೆ ಎಂದು ತಿಳಿದಿಲ್ಲ. ನಾನು ಅರಣ್ಯ ಸಚಿವರು ಹಾಗೂ ಕಾನೂನು ಸಚಿವರಿಗೂ ಪತ್ರ ಬರೆದಿದ್ದೇನೆ. ಈ ಬಗ್ಗೆ ರೈತಪರವಾದ ತಿರ್ಮಾನ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇನೆ ಎಂದು ಸಚಿವರು ಹೇಳಿಕೆ ನೀಡಿದ್ದಾರೆ. 

click me!