ತುಮಕೂರಿನಲ್ಲಿ ಕಾಂಗ್ರೆಸ್‌ನಿಂದ ಪ್ರಜಾಧ್ವನಿ‌ ಬಸ್ ಯಾತ್ರೆ

By Suvarna News  |  First Published Jan 23, 2023, 2:33 PM IST

ರಾಜ್ಯಾದ್ಯಂತ ಪ್ರಚಾರ ಹಮ್ಮಿಕೊಂಡಿರುವ ಕಾಂಗ್ರೆಸ್ ಮುಖಂಡರ   ಪ್ರಜಾಧ್ವನಿ ಬಸ್ ಯಾತ್ರೆ ನಾಳೆ ತುಮಕೂರಿಗೆ ಆಗಮಿಸಲಿದೆ. ನಾಳೆ ಬೆಳಗ್ಗೆ 10.30ಕ್ಕೆ ಬೆಂಗಳೂರಿನಿಂದ ತುಮಕೂರಿಗೆ ಬರಲಿದೆ.


ತುಮಕೂರು (ಜ.23): ರಾಜ್ಯಾದ್ಯಂತ ಪ್ರಚಾರ ಹಮ್ಮಿಕೊಂಡಿರುವ ಕಾಂಗ್ರೆಸ್ ಮುಖಂಡರ ಕಾಂಗ್ರೆಸ್ ನ  ಪ್ರಜಾಧ್ವನಿ ಬಸ್ ಯಾತ್ರೆ ನಾಳೆ ತುಮಕೂರಿಗೆ ಆಗಮಿಸಲಿದೆ. ನಾಳೆ ಬೆಳಗ್ಗೆ 10.30ಕ್ಕೆ ಬೆಂಗಳೂರಿನಿಂದ ತುಮಕೂರಿಗೆ ಆಗಮಿಸುವ ಪ್ರಜಾಧ್ವನಿ ಯಾತ್ರೆಗೆ ಕ್ಯಾತಸಂದ್ರದ ಟೋಲ್ ಗೇಟ್ ಬಳಿ  ಕಾಂಗ್ರೆಸ್ ಕಾರ್ಯಕರು ಅದ್ಧೂರಿ ಸ್ವಾಗತಕೊರಲಿದ್ದಾರೆ. ಬಳಿಕ ಬಿ.ಎಚ್ ರಸ್ತೆ ವಾರ್ಗವಾಗಿ  ಬಟವಾಡಿ, ಶಿವಕುಮಾರಸ್ವಾಮಿ ಸರ್ಕಲ್ ಮೂಲಕ ಟೌನ್ ಸರ್ಕಲ್‌ಗೆ ಆಗಮಿಸಲಿದೆ. ಅಲ್ಲಿಂದ ಅಮಾನಿಕೆರೆ ಪಾರ್ಕ್ ನಲ್ಲಿರುವ ಗಾಜಿಮನೆಯಲ್ಲಿ ಸಿದ್ದಪಡಿಸಿರುವ ವೇದಿಕೆಗೆ ಆಗಮಿಸಲಿದ್ದಾರೆ. 

ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಜಾಧ್ವನಿ ಬಸ್ ಯಾತ್ರೆಯಲ್ಲಿ  ಕಾಂಗ್ರೆಸ್ ಮುಖಂಡ ಸುರ್ಜೇವಾಲಾ, ಡಿ.ಕೆ ಶಿವಕುಮಾರ್ ಮಾಜಿ ಸಿಎಂ ಸಿದ್ದರಾಮಯ್ಯ, ಎಂ.ಬಿ ಪಾಟೀಲ್, ಬಿ.ಕೆ ಹರಿಪ್ರಸಾದ್, ಹಾಗೂ ಜಿಲ್ಲಾ ಕಾಂಗ್ರೆಸ್‌ ಮುಖಂಡರು  ಭಾಗಿಯಾಗಲಿದ್ದಾರೆ. ಸಂಜೆ 4  ಗಂಟೆವರೆಗೂ ಕಾರ್ಯಕ್ರಮ ನಡೆಯಲಿದ್ದು, ಸರಿಸುಮಾರು 25 ಸಾವಿರ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.  

Tap to resize

Latest Videos

ಈಗಾಗ್ಲೇ ಅಮಾನಿಕೆರೆ ಗಾಜಿಮನೆಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೆ ಉತ್ಸಾಹ ತುಂಬುವ ಕಾರ್ಯಕ್ರಮ ಇದಾಗಲಿದೆ.

ಪ್ರಜಾ ಧ್ವನಿ ಸಮಾವೇಶ ಯಶಸ್ವಿಗೊಳಿಸಿ
ಗುಂಡ್ಲುಪೇಟೆ: ಜ.26 ರಂದು ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ನಡೆಯಲಿರುವ ಕಾಂಗ್ರೆಸ್‌ ಪ್ರಜಾ ಧ್ವನಿ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತೆರಳಬೇಕು ಎಂದು ಕ್ಷೇತ್ರದ ಕಾಂಗ್ರೆಸ್‌ ಮುಖಂಡ ಎಚ್‌.ಎಂ.ಗಣೇಶಪ್ರಸಾದ್‌ ಮನವಿ ಮಾಡಿದ್ದಾರೆ.

ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ಪ್ರಜಾ ಧ್ವನಿ ಸಮಾವೇಶ ಸಂಬಂಧ ಭಾನುವಾರ ನಡೆದ ಪೂರ್ವ ಸಭೆಯಲ್ಲಿ ಮಾತನಾಡಿ, ಜ.26ರಂದು ಚಾಮರಾಜನಗರದಲ್ಲಿ ನಡೆವ ಪ್ರಜಾಧ್ವನಿ ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಮಟ್ಟದ ನಾಯಕರು ಆಗಮಿಸಲಿದ್ದಾರೆ ಎಂದರು.

ಕಾಂಗ್ರೆಸ್‌ ಪ್ರಜಾಧ್ವನಿ ಬಸ್‌ ಯಾತ್ರೆ ಇಂದು ಪುನಾರಂಭ: ಹೊಸಪೇಟೆ, ಕೊಪ್ಪಳದಲ್ಲಿ ಬೃಹತ್‌ ಸಮಾವೇಶ

ಈ ಹಿಂದೆ ತಾಲೂಕಿನಲ್ಲಿ ನಡೆದ ಭಾರತ್‌ ಐಕ್ಯತಾ ಯಾತ್ರೆಗೆ ಜಿಲ್ಲೆಯ ಕಾರ್ಯಕರ್ತರ ಪಡೆ ಬಂದ ರೀತಿಯಲ್ಲಿ ಪ್ರಜಾಧ್ವನಿ ಸಮಾವೇಶಕ್ಕೆ ಸಾವಿರಾರು ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಗಮಿಸಬೇಕು ಎಂದರು.

'ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಪ್ರಜಾಧ್ವನಿ ಯಾತ್ರೆ'

ಪೂರ್ವ ಭಾವಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಪಂ ಮಾಜಿ ಅಧ್ಯಕ್ಷರಾದ ಎಚ್‌.ಸಿ.ಬಸವರಾಜು, ಬಿ.ಎಂ.ಮುನಿರಾಜು, ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಪಿ.ಬಿ.ರಾಜಶೇಖರ್‌, ಪ್ರಧಾನ ಕಾರ್ಯದರ್ಶಿ ಬಿ.ಕುಮಾರಸ್ವಾಮಿ, ಚಾಮುಲ್‌ ಮಾಜಿ ಅಧ್ಯಕ್ಷ ಎಚ್‌.ಎಸ್‌.ನಂಜುಂಡಪ್ರಸಾದ್‌, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್‌.ಮಹೇಶ್‌, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಲತಾ ಜತ್ತಿ, ತಾಪಂ ಮಾಜಿ ಅಧ್ಯಕ್ಷ ಎಚ್‌.ಎನ್‌.ನಟೇಶ್‌, ಕಾಂಗ್ರೆಸ್‌ ಮುಖಂಡರಾದ ಮಂಚಹಳ್ಳಿ ಲೋಕೇಶ್‌, ಬೆಟ್ಟಹಳ್ಳಿ ಕೆಂಪರಾಜು, ಕಬ್ಬಹಳ್ಳಿ ದೀಪು, ಗ್ರಾಪಂ ಅಧ್ಯಕ್ಷ ಕಗ್ಗಳ ಮಾದಪ್ಪ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಇದ್ದರು.

click me!