ಈಗ ತುಮಕೂರು ಜಿಲ್ಲೆ ವಿಭಜನೆಗೆ ಪರಂ ಆಗ್ರಹ

By Kannadaprabha News  |  First Published Oct 1, 2019, 7:47 AM IST

ಬಳ್ಳಾರಿ ಜಿಲ್ಲೆ ವಿಭಜನೆ ಕೂಗು ಜೋರಾಗಿರುವ ಬೆನ್ನಲ್ಲೇ ಇದೀಗ ತುಮಕೂರಿನಲ್ಲಿಯೂ ಕೂಡ ಮತ್ತೊಂದು ಜಿಲ್ಲೆ ನಿರ್ಮಾಣದ ಬಗ್ಗೆ ಕಾಂಗ್ರೆಸ್ ಮುಖಂಡ ಪರಮೇಶ್ವರ್ ಆಗ್ರಹಿಸಿದ್ದಾರೆ. 


ಬೆಂಗಳೂರು [ಅ.01]: ಬಳ್ಳಾರಿ ಜಿಲ್ಲೆ ವಿಭಜನೆ ಬೇಡಿಕೆಯ ಬೆನ್ನಲ್ಲೇ ಇದೀಗ ತುಮಕೂರು ಜಿಲ್ಲೆಯನ್ನು ವಿಭಜಿಸಿ ಪ್ರತ್ಯೇಕ ಮಧುಗಿರಿ ಜಿಲ್ಲೆ ನಿರ್ಮಾಣಕ್ಕಾಗಿ ಬೇಡಿಕೆ ಬಂದಿದೆ.

ಈ ಬಗ್ಗೆ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಸೋಮವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಭೌಗೋಳಿಕವಾಗಿ ಹೆಚ್ಚಿನ ವಿಸ್ತಾರ ಹೊಂದಿದ್ದು, ಪ್ರತ್ಯೇಕ ಜಿಲ್ಲೆಗೆ ಅರ್ಹವಾಗಿದೆ. ಹೀಗಾಗಿ ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

Latest Videos

undefined

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಧುಗಿರಿ ಕೇಂದ್ರ ಸ್ಥಾನದಲ್ಲಿ ಲೋಕೋಪಯೋಗಿ, ಜಿಲ್ಲಾ ಪಂಚಾಯ್ತಿ, ಕೆಇಬಿ, ಡಿವೈಎಸ್‌ಪಿ ಸೇರಿದಂತೆ ಹಲವು ಇಲಾಖೆಗಳ ಉಪ ವಿಭಾಗಗಳು ಈಗಾಗಲೇ ಕಾರ್ಯ ನಿರ್ವಹಿಸುತ್ತಿವೆ. ಅಲ್ಲದೆ ಮಧುಗಿರಿ ಉತ್ತಮ ಶೈಕ್ಷಣಿಕ ತಾಣವೂ ಆಗಿದೆ. ಹೀಗಾಗಿ ಆಡಳಿತದ ದೃಷ್ಟಿಯಿಂದ ತುಮಕೂರು ಜಿಲ್ಲೆಯನ್ನು ವಿಭಜಿಸಿ ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆ ಮಾಡಬೇಕು ಎಂದು ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.

click me!