ಅಯೋಧ್ಯೆ ರಾಮಮಂದಿರ ಪುನರ್ ಪ್ರತಿಷ್ಠಾಪನೆಗೆ 4 ಶಂಕರಪೀಠ ದೂರ ವಿಚಾರ: ಗೌರಿಶಂಕರ್ ಹೇಳಿದ್ದೇನು?

By Govindaraj S  |  First Published Jan 11, 2024, 10:23 PM IST

ಕೆಲವು ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ ಅಯೋಧ್ಯೆ ರಾಮಮಂದಿರದ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಶ್ರೀಗಳು ವಿರೋಧಿಸುತ್ತಿದ್ದಾರೆ.


ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಜ.11): ಕೆಲವು ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ ಅಯೋಧ್ಯೆ ರಾಮಮಂದಿರದ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಶ್ರೀಗಳು ವಿರೋಧಿಸುತ್ತಿದ್ದಾರೆ ಎಂಬ ಅರ್ಥ ಬರುವ ಹಾಗೆ ಸಂದೇಶವನ್ನು ಹಾಕಿದ್ದು ಇದು ಮಿಥ್ಯಾಪ್ರಚಾರವಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ  ಶ್ರೀಮಠದ ಆಡಳಿತಾಧಿಕಾರಿ ಗೌರಿಶಂಕರ್ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಬಹಿರಂಗ ಪತ್ರ ಬಿಡುಗಡೆ ಮಾಡಲಾಗಿದ್ದು, ಆಸ್ತಿಕ ಮಹಾಜನರು ಯಾವುದೇ ಕಾರಣಕ್ಕೆ ಇಂತಹ ಅಪ ಪ್ರಚಾರಗಳಿಗೆ ಬೆಲೆ ಕೊಡಬಾರದು ಹಾಗೆಯೇ ದಕ್ಷಿಣಾಮ್ನಾಯ ಶೃಂಗೇರಿ ಶಾರದಾಪೀಠದ ಅಧಿಕೃತವಾದ ವೆಬ್ಸೈಟಿನಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ವಿಷಯಗಳನ್ನು ಮಾತ್ರವೇ ಪ್ರಾಮಾಣಿಕವಾಗಿ ಪರಿಗಣಿಸಬೇಕು ಎಂದು ನಿವೇದಿಸಿಕೊಳ್ಳಲಾಗಿದೆ.

Tap to resize

Latest Videos

undefined

ಶ್ರೀರಾಮ ತಾರಕ ಮಹಾ ಮಂತ್ರ ಜಪಕ್ಕೆ ಕರೆ: ಶಾರದಾ ಪೀಠಂ ಎಂಬ ಯೂಟ್ಯೂಬ್ ಚಾನೆಲ್ ಮೂಲಕ ಕಳೆದ ದೀಪಾವಳಿ ಸಂದರ್ಭದಲ್ಲಿ ಪವಿತ್ರ ಪ್ರಾಣ ಪ್ರತಿಷ್ಠಾ ಮಹೋತ್ಸವವನ್ನು ಮನಸಿನಲ್ಲಿಟ್ಟುಕೊಂಡು ಶ್ರೀರಾಮ ತಾರಕ ಮಹಾ ಮಂತ್ರವನ್ನು ಜಪಿಸುವಂತೆ ಎಲ್ಲಾ ಆಸ್ತಿಕರಿಗೂ ಶೃಂಗೇರಿ ಜಗದ್ಗುರುಗಳ ಸಂದೇಶ ನೀಡಿದ್ದಾರೆ. ಅದನ್ನು ಅನುಸರಿಸಿ ಆಸ್ತಿಕರು ಅತ್ಯಧಿಕ ಸಂಖ್ಯೆಯಲ್ಲಿ ಮಂತ್ರಜಪವನ್ನು ಮಾಡುತ್ತಿರುವುದು ಈ ಸಂದರ್ಭದಲ್ಲಿ ಗಮನಾರ್ಹವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಅತ್ಯಂತ ಪವಿತ್ರವೂ, ಅಪರೂಪವೂ ಆದ ಈ ಪ್ರಾಣ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ಎಲ್ಲಾ ಆಸ್ತಿಕರು ಯಥಾಯೋಗ್ಯವಾಗಿ ಭಾಗವಹಿಸಿ ಶ್ರೀರಾಮನ ಪರಿಪೂರ್ಣ ಕೃಪೆಗೆ ಪಾತ್ರರಾಗಿ ಕೃತಾರ್ಥರಾಗಬೇಕೆಂದು ಜಗದ್ಗುರುಗಳು ಆಶೀರ್ವದಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಇದೇ ವೇಳೆ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಸಂಬಂಧ ಶ್ರೀಮಠಕ್ಕೆ ತಲುಪಿರುವ ಆಹ್ವಾನ ಪತ್ರಿಕೆಯನ್ನು ಪ್ರದರ್ಶಿಸಿ ಕಿರಿಯ ಶ್ರೀಗಳು ಭಾವಚಿತ್ರವನ್ನೂ ಹಂಚಿಕೊಂಡಿದ್ದಾರೆ.

ರೆಸಾರ್ಟ್‌ನಲ್ಲಿ ಮಾಜಿ ಸಿಎಂ ಎಚ್‌ಡಿಕೆ ತಂತ್ರಗಾರಿಕೆ: ರಾಜಕೀಯ ಲೆಕ್ಕಚಾರದಲ್ಲಿ ಕುಮಾರಸ್ವಾಮಿ!

ವಿವಿಧ ಕಾರ್ಯಕ್ರಮ: ಅಯೋಧ್ಯೆಯಲ್ಲಿ ರಾಮ ಮಂದಿರ ಪುನರ್ ಪ್ರತಿಷ್ಠಾಪನ ಕಾರ್ಯಕ್ರಮ ಹಿನ್ನಲೆ ಶೃಂಗೇರಿಯಲ್ಲಿ ಒಂದು ವಾರಗಳ ಕಾಲ ನಿರಂತರ ಧಾರ್ಮಿಕ ಕಾರ್ಯಕ್ರಮ, ರಾಮ ಜಪ, ರಾಮಾಯಣ ಪಾರಾಯಣ, ಅಖಂಡ ರಾಮ ಜಪ, ರಾಮತಾರಕ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಮಠದ ಸಮೀಪವಿರುವ ವಿದ್ಯಾರಣ್ಯಪುರದ ರಾಮ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಜನವರಿ 22ರಂದೇ ವಿದ್ಯಾರಣ್ಯಪುರ ಶ್ರೀರಾಮ ದೇಗುಲ ಉದ್ಘಾಟನೆ ಆಗಲಿದೆ. ಜನವರಿ 16 ರಿಂದ 22ರವರೆಗೆ ಜಗದ್ಗುರುಗಳ ಉಪಸ್ಥಿತಿಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

click me!