ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ಆಗಿದ್ದರೂ ಇನ್ನೂ ಹಳ್ಳಿಗಳಿಗೆ ಸ್ವಾತಂತ್ರ್ಯ, ನ್ಯಾಯ ಸಿಕ್ಕಿಲ್ಲ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ: ಪ್ರಣವಾನಂದ ಸ್ವಾಮೀಜಿ
ಹಾವೇರಿ(ಆ.17): ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಗ್ರಾಮೀಣಾಭಿವೃದ್ಧಿ ಇಲಾಖೆ ವೈಫಲ್ಯ ಖಂಡಿಸಿ ಗ್ರಾಪಂ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ಅರೇಮಲ್ಲಾಪುರ ಶರಣಬಸವೇಶ್ವರ ಮಠದ ಪೀಠಾಧಿಪತಿ, ಗ್ರಾಪಂ ಸದಸ್ಯ ಪ್ರಣವಾನಂದ ಸ್ವಾಮೀಜಿ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ಆಗಿದ್ದರೂ ಇನ್ನೂ ಹಳ್ಳಿಗಳಿಗೆ ಸ್ವಾತಂತ್ರ್ಯ, ನ್ಯಾಯ ಸಿಕ್ಕಿಲ್ಲ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕೇಂದ್ರ, ರಾಜ್ಯ ಸರ್ಕಾರದಿಂದ ಬರುವ ಅನುದಾನ ನಿಜವಾದ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಪ್ರತಿ ಹಂತದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಜನರಿಗೆ ಸೇವೆ ಮಾಡಲು ಅವಕಾಶವೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಹೀಗಾಗಿ ಜನರಿಗೆ ನ್ಯಾಯ ಕೊಡಿಸಲು ಸಾಧ್ಯವಾಗದ ಹಿನ್ನೆಲೆ ನನಗೆ ಮತನೀಡಿ ಆಯ್ಕೆ ಮಾಡಿದ್ದ ಜನರಲ್ಲಿ ಕ್ಷಮೆ ಕೇಳಿ ಗ್ರಾಪಂ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದರು.
undefined
HAVERI: ಒಂದು ಕಿಲೋಮೀಟರ್ ನೀರಲ್ಲಿ ತೇಲಿ, ಗಿಡಗಂಟಿ ಹಿಡಿದು ಬದುಕಿತು ಬಡ ಜೀವ
ಅಲ್ಲಿನ ಭ್ರಷ್ಟವ್ಯವಸ್ಥೆಯೊಂದಿಗೆ ಹೊಂದಿಕೊಳ್ಳಲು ನನಗೆ ಸಾಧ್ಯವಾಗುತ್ತಿಲ್ಲ. ಜಾತಿ ನಿಂದನೆ, ಜೀವ ಬೇದರಿಕೆ ಹಾಕಿ ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಗ್ರಾಪಂ ಮಟ್ಟದಲ್ಲಿ ಗುತ್ತಿಗೆದಾರರು, ರಾಜಕೀಯ ಮುಖಂಡರು ಪ್ರಜಾಪ್ರಭುತ್ವ ವ್ಯವಸ್ಥೆ ಹಾಳು ಮಾಡುತ್ತಿರುವ ನೋವು ಕಾಡುತ್ತಿದೆ. ಬಡವರಿಗೆ ಆಶ್ರಯ ಮನೆ ಮಂಜೂರು ಮಾಡುವಾಗ ಸರ್ಕಾರದ ಯಾವುದೇ ನಿಯಮಗಳನ್ನು ಅನುಸರಿಸದೇ ಅನರ್ಹರಿಗೆ ಮನೆಗಳನ್ನು ಮಂಜೂರು ಮಾಡುತ್ತಿದ್ದಾರೆ. ಜನರಿಂದ ಪಿಡಿಒಗಳು ಹಣವನ್ನು ಸುಲಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.