ಬಿಜೆಪಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಸ್ವಾಮೀಜಿ

By Kannadaprabha News  |  First Published Oct 1, 2019, 3:16 PM IST

ರಾಜ್ಯದಲ್ಲಿ  ಸರ್ಕಾರ ರಚನೆ ಮಾಡಿರುವ ಬಿಜೆಪಿಗೆ ಸ್ವಾಮೀಜಿಯೋರ್ವರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. 


ಬಾಗಲಕೋಟೆ (ಅ.01): ಬಾಗಲಕೋಟೆಯಲ್ಲಿ ರಾಜೇನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಬಿಜೆಪಿ ಹೈಕಮಾಂಡ್ ಗೆ ವಾರ್ನಿಂಗ್ ನೀಡಿದ್ದಾರೆ. 

ಬೈ ಎಲೆಕ್ಷನ್ ಒಳಗೆ ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡದೇ ಹೋದರೆ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ. 

Tap to resize

Latest Videos

ಚುನಾವಣೆಯಲ್ಲಿ ಸೋತವರಿಗೆ ಮಂತ್ರಿ ಸ್ಥಾನ ನೀಡಿರುವ ಜೊತೆಗೆ ಡಿಸಿಎಂ ಕೂಡ ಮಾಡಿದ್ದು ನಮಗೆ ಆಶ್ಚರ್ಯವನ್ನುಂಟು ಮಾಡಿದೆ. ನಮ್ಮ ಸಮುದಾಯವನ್ನ ಓಟ್ ಬ್ಯಾಂಕ್ ಮಾಡಿಕೊಂಡು ಆಶ್ವಾಸನೆ, ಭರವಸೆ ಕೊಟ್ಟು ಈಡೇರಿಸದೇ ಇರುವುದು ನೋವಿನ ಸಂಗತಿ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆಯಲ್ಲಾದರೂ ವಾಲ್ಮೀಕಿ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಉಪ ಚುನಾವಣೆ ಒಳಗೆ ಡಿಸಿಎಂ ಸ್ಥಾನ ನೀಡದೇ ಹೋದಲ್ಲಿ ತಕ್ಕಪಾಠ ಕಲಿಸಲಾಗುತ್ತದೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

click me!