ರಾಜ್ಯದಲ್ಲಿ ಮತ್ತೊಂದು ಉಪ ಚುನಾವಣೆ ನಡೆಯಲಿದ್ದು ಇದಕ್ಕೆ ಈಗಾಗಲೇ ಬಿಜೆಪಿ ಟಿಕೆಟ್ ಕೂಡ ಫೈನಲ್ ಆದಂತಾಗಿದೆ.
ಬಳ್ಳಾರಿ (ನ.09): ಮಸ್ಕಿಯಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್ ಅವರಿಗೆ ಬಿಜೆಪಿ ಟಿಕೆಟ್ ನೀಡಿ ಗೆಲ್ಲಿಸಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸವನಗೌಡ ತುರ್ವಿಹಾಳ್ ಕೇವಲ 203 ಮತಗಳ ಅಂತರದಿಂದ ಸೋತಿದ್ದರು.
ಆದರೆ, ಆಗ ಜಯಗಳಿಸಿದ್ದ ಪ್ರತಾಪ್‌ಗೌಡ ಪಾಟೀಲ್ ಅವರು ರಾಜೀನಾಮೆ ನೀಡಿದ್ದರಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆ.
ಡಿಸೆಂಬರ್‌ನಲ್ಲಿ ಮತ್ತೊಂದು ಮಹಾ ಮಿನಿಸಮರ: ಬಿ.ವೈ.ವಿಜಯೇಂದ್ರ ಕಣಕ್ಕಿಳಿಯುವ ಸಾಧ್ಯತೆ..
ಹಾಗಾಗಿ ಉಪಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗುತ್ತದೆ. ಈ ಕುರಿತು ಪಕ್ಷದ ಹೈಕಮಾಂಡ್ ನಿರ್ಣಯ ಕೈಗೊಳ್ಳಲಿದೆ ಎಂದರು.