ಪ್ರವೀಣ್ ಹತ್ಯೆ ಖಂಡಿಸಿ ಯುವ ಮೋರ್ಚಾ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

By Kannadaprabha News  |  First Published Jul 29, 2022, 10:50 AM IST

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ತೀವ್ರವಾಗಿ ಖಂಡಿಸಿರುವ ಬಿಜೆಪಿ ಯುವಾ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರನ್ನು ರಕ್ಷಿಸದ ಬಿಜೆಪಿ ಪಕ್ಷದ ಪದಾಧಿಕಾರಿ ಸ್ಥಾನಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದರು.


ಕಾರವಾರ (ಜು.29) :\ ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಇಲ್ಲಿನ ಯುವ ಮೋರ್ಚಾ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ಹಲವು ಹಿಂದು ಕಾರ್ಯಕರ್ತರ ಹತ್ಯೆಗಳು ನಡೆದಿದ್ದರೂ ಬಿಜೆಪಿ ಸರ್ಕಾರದಿಂದ ಯಾವುದೇ ಕಠಿಣ ಕ್ರಮ ಆಗಿಲ್ಲ. ಬಿಜೆಪಿ ಹಿಂದುಗಳ ಸಮಾಧಿಯ ಮೇಲೆ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರನ್ನು ರಕ್ಷಿಸಲಾಗದ ಬಿಜೆಪಿ ಸರ್ಕಾರದಲ್ಲಿ ಇರುವುದಿಲ್ಲ ಎಂದು ವಿವಿಧ ಪದಾಧಿಕಾರಿ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದರು.

ಯುವ ಮೋರ್ಚಾ ನಗರಾಧ್ಯಕ್ಷ ಶುಭಂ ಕಳಸ(Shubham Kalasa) ಒಳಗೊಂಡು ನಗರ, ಗ್ರಾಮೀಣ ಮೋರ್ಚಾದಿಂದ 40ಕ್ಕೂ ಹೆಚ್ಚು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದು, ಬಿಜೆಪಿ ಸರ್ಕಾರದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಕಣ್ಣಿಗೆ ಕಪ್ಪುಬಟ್ಟೆಧರಿಸಿ ಇದುವರೆಗೂ ಆರೋಪಿಗಳನ್ನು ಬಂಧಿಸದ ರಾಜ್ಯ ಸರ್ಕಾರ, ಮುಖ್ಯಮಂತ್ರಿ, ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Latest Videos

undefined

ಪ್ರವೀಣ್‌ ಹತ್ಯೆ ಖಂಡಿಸಿ ಬಿಜೆಪಿಗೆ 200ಕ್ಕೂ ಅಧಿಕ ಪದಾಧಿಕಾರಿಗಳ ಗುಡ್‌ಬೈ

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಪ್ರವೀಣ ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಬೇಕು ಎಂದು ರಾಜ್ಯಪಾಲರಿಗೆ, ಮುಖ್ಯಮಂತ್ರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸುವ ಸಂದರ್ಭದಲ್ಲಿ ಮುಖಂಡರು ಬಾರದೇ ಇರುವುದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪಕ್ಷದ ಮುಖಂಡರ ವಿರುದ್ಧವೇ ಘೋಷಣೆ ಕೂಗಿದರು.

ಅಧ್ಯಕ್ಷ ಶುಭ ಕಳಸ ಮಾತನಾಡಿ, ಚುನಾವಣೆ ಸಂದರ್ಭಗಳಲ್ಲಿ ಪಕ್ಷದ ಮುಖಂಡು ಯುವ ಮೋರ್ಚಾ ಹಾಗೂ ಯುವಕರನ್ನು ಬಳಸಿಕೊಳ್ಳುತ್ತಾರೆ. ಆದರೆ ಹಿಂದೂ ಯುವಕರ, ಪಕ್ಷದ ಕಾರ್ಯಕರ್ತರ ಹತ್ಯೆ ಆಗುತ್ತಿದ್ದರೂ ಎಲ್ಲ ಮುಖಂಡರು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಪ್ರವೀಣ ಕೊಲೆ ಪ್ರಕರಣದ ಎಲ್ಲ ನೈಜ ಆರೋಪಿಗಳನ್ನು ಬಂಧಿಸಿದ ಬಳಿಕವೇ ಜಿಲ್ಲೆಗೆ ಸಿಎಂ ಬೊಮ್ಮಾಯಿ ಬರಬೇಕು. ಒಂದು ವೇಳೆ ಅದಕ್ಕೂ ಮೊದಲೇ ಆಗಮಿಸಿದರೆ ಅವರ ಬರುವ ದಿನದಂದು ಬಂದ್‌ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಹೆಚ್ಚಿತು Praveen Nettaru ಹತ್ಯೆ ಕಿಚ್ಚು, ತುಮಕೂರು ಬಿಜೆಪಿಯಲ್ಲಿ ಮುಂದುವರೆದ ರಾಜೀನಾಮೆ!

ಪ್ರತಿಭಟನೆ ಆರಂಭವಾಗಿ ಅರ್ಧ ತಾಸು ಕಳೆದರೂ ಅಧಿಕಾರಿಗಳು ಮನವಿ ಸ್ವೀಕರಿಸಲು ಆಗಮಿಸದ ಕಾರಣ ಡಿಸಿ ಕಚೇರಿ ಗೇಟ್‌ ಮೂಲಕ ಒಳಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದ ಗೇಟ್‌ ದೂಡಿ ಆವರಣದೊಳಗೆ ನುಗ್ಗಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕೊಠಡಿಗೆ ತೆರಳಿ ಡಿಸಿ ಮುಲ್ಲೈ ಮುಗಿಲನ್‌ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಣಯ ರಾಣೆ, ಅಜಯ ಜೋಶಿ, ಅವಿನಾಶ ಉಳ್ವೇಕರ, ಅಮಿತ ನಾಯ್ಕ ಮೊದಲಾದವರು ಇದ್ದರು.

click me!