ಮಂಗಳೂರು ಹೊರವಲಯದ ಕಾವೂರು ಆಸುಪಾಸಿನ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆಪೂರೈಕೆಯಾಗಿದ್ದು, ಆಕಾಶಭವನದಲ್ಲಿ ಗರ್ಭಿಣಿ ಮತ್ತು ಆಕೆಯ ಮಗು ಮೊಟ್ಟೆ ತಿಂದು ಅಸ್ವಸ್ಥರಾದ ಘಟನೆ ನಡೆದಿದೆ.
ಮಂಗಳೂರು(ಆ.11): ಇತ್ತೀಚೆಗೆ ರಾಜ್ಯದ ಕೆಲವೆಡೆ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆಗಳ ಪೂರೈಕೆ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಕಟ್ಟುನಿಟ್ಟಿ ನಿಗಾ ಹಾಗೂ ಕ್ರಮಕ್ಕೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದರ ಹೊರತೂ ಮತ್ತೆ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗುತ್ತಿರುವ ಪ್ರಕರಣ ವರದಿಯಾಗಿದೆ.
ಮಂಗಳೂರು ಹೊರವಲಯದ ಕಾವೂರು ಆಸುಪಾಸಿನ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆಪೂರೈಕೆಯಾಗಿದ್ದು, ಆಕಾಶಭವನದಲ್ಲಿ ಗರ್ಭಿಣಿ ಮತ್ತು ಆಕೆಯ ಮಗು ಮೊಟ್ಟೆ ತಿಂದು ಅಸ್ವಸ್ಥರಾದ ಘಟನೆ ನಡೆದಿದೆ.
ರಾಜ್ಯ ಸರ್ಕಾರ ವಿರುದ್ಧ ಭ್ರಷ್ಟಾಚಾರ ಆರೋಪ ಪರಾಕಾಷ್ಠೆಗೆ: ಕೋಟ ಶ್ರೀನಿವಾಸ ಪೂಜಾರಿ
ಕೊಳತೆ ಮೊಟ್ಟೆ ಪೂರೈಸುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಜಿಲ್ಲಾ ಅಧಿಕಾರಿ ಹೇಳಿಕೆ ನೀಡಿದ್ದರಲ್ಲದೆ, ಈ ಬಗ್ಗೆ ನೋಟಿಸ್ ಕೂಡ ನೀಡಿದ್ದಾಗಿ ತಿಳಿಸಿದ್ದರು. ಆದರೂ ಹೊರಜಿಲ್ಲೆಯ ಗುತ್ತಿಗೆದಾರರು ಕಳಪೆ ಮೊಟ್ಟೆಪೂರೈಸುವುದನ್ನು ನಿಲ್ಲಿಸಿಲ್ಲ. ಈ ಬಾರಿಯೂ ಜಿಲ್ಲೆಯ ಕೆಲವು ಕಡೆ ಕೊಳೆತ ಮೊಟ್ಟೆ ಪೂರೈಕೆ ಆಗಿರುವ ಬಗ್ಗೆ ಆರೋಪ ಕೇಳಿಬಂದಿದೆ.
ಗರ್ಭಿಣಿ ಮತ್ತು ಒಬ್ಬ ಬಾಲಕ ಅಸ್ವಸ್ಥಗೊಂಡಿದ್ದ ಬಗ್ಗೆ ಮಾಹಿತಿ ಬಂದಿದ್ದು, ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಾಪಬೋವಿ ತಿಳಿಸಿದ್ದಾರೆ.
ಈ ಕುರಿತು ಶಾಸಕ ಡಾ. ಭರತ್ ಶೆಟ್ಟಿ ಪ್ರತಿಕ್ರಿಯಿಸಿ, ಕೋಳಿಮೊಟ್ಟೆಪೂರೈಕೆ ಮಾಡುವ ಗುತ್ತಿಗೆದಾರರು ಮತ್ತು ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.