ಮೋಡ ಬಿತ್ತನೆ ಕಾರ್ಯಕ್ಕೆ ಎರಡು ಕಂಪನಿಗಳಿಗೆ ರಾಜ್ಯ ಸರ್ಕಾರದಿಂದ ಅನುಮತಿ ನೀಡಿದೆ. ಮೋಡ ಬಿತ್ತನೆ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾಡಳಿತದಿಂದ ಅಗತ್ಯ ನೆರವು ನೀಡಲಾಗುವುದು. ಮೋಡ ಬಿತ್ತನೆ ಅಂತಿಮ ಹಂತದ ಸಿದ್ಧತೆಯನ್ನು ನಡೆಸಿವೆ: ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ(ಸೆ.23): ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲದ ಛಾಯೆ ಆವರಿಸಿದ್ದು, ಬೆಳಗಾವಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಳಗಾಂ ಶುಗರ್ಸ್ ಹಾಗೂ ಕ್ಯಾತಿ ಕ್ಲೈಮೆಟ್ ಮೊಡಿಫಿಕೇಶನ್ ಕನ್ಸ್‌ಲ್ಟನ್ಸಿ ಕಂಪನಿಯಿಂದ ಮೋಡ ಬಿತ್ತನೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋಡ ಬಿತ್ತನೆ ಕಾರ್ಯಕ್ಕೆ ಎರಡು ಕಂಪನಿಗಳಿಗೆ ರಾಜ್ಯ ಸರ್ಕಾರದಿಂದ ಅನುಮತಿ ನೀಡಿದೆ. ಮೋಡ ಬಿತ್ತನೆ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾಡಳಿತದಿಂದ ಅಗತ್ಯ ನೆರವು ನೀಡಲಾಗುವುದು. ಮೋಡ ಬಿತ್ತನೆ ಅಂತಿಮ ಹಂತದ ಸಿದ್ಧತೆಯನ್ನು ನಡೆಸಿವೆ ಎಂದರು.
ಕೈಕೊಟ್ಟ ಮಳೆ: ಬೆಳಗಾವಿಯಲ್ಲೂ ಮೋಡ ಬಿತ್ತನೆಗೆ ಗ್ರೀನ್ ಸಿಗ್ನಲ್
ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಬೆಳಗಾವಿ ಜಿಲ್ಲೆಯ 13 ತಾಲೂಕುಗಳನ್ನು ಬರಪೀಡಿತ ಎಂದು ಬೆಳಗಾವಿ, ಖಾನಾಪುರ ತಾಲೂಕನ್ನು ಪಟ್ಟಿಗೆ ಸೇರಿಸಬೇಕು ಎಂದು ರೈತರ ಆಗ್ರಹವಿದೆ. ಬೆಳಗಾವಿಯಲ್ಲಿ ಮಳೆಯ ಕೊರತೆಯಿಂದ ಭತ್ತ, ಆಲೂಗಡ್ಡೆ ಬೆಳೆ ನಷ್ಟದಲ್ಲಿವೆ. ವಿದ್ಯುತ್ ಅಭಾವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಾಡಿಕೆ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ 514 ಮಿಮೀ ಮಳೆಯಾಗಬೇಕಿತ್ತು. ಆದರೆ, ಜಿಲ್ಲೆಯಲ್ಲಿ 456 ಮಿಮೀ ಮಳೆಯಾಗಿದ್ದು, ಶೇ.11 ಮಳೆಯ ಕೊರತೆಯಾಗಿದೆ. ಜಿಲ್ಲೆಯಲ್ಲಿ 6.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣವಾಗಿದೆ ಎಂದರು.
ಕೇಂದ್ರ ಸರ್ಕಾರದ ನಿಯಮದ ಪ್ರಕಾರ ರಾಜ್ಯದಲ್ಲಿ ಬರ ಘೋಷಣೆ ಆಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಮೋಡ ಬಿತ್ತನೆಗೆ ಬೆಳಗಾಂ ಶುಗರ್ಸ್ ಸಕ್ಕರೆ ಕಾರ್ಖಾನೆಗೆ ಅನುಮತಿ ನೀಡಿದೆ. ನಾವು ಖಾಸಗಿಯಾಗಿ ಕೃತಕ ಮಳೆ ಸುರಿಸಲು ಅನುಮತಿ ಪಡೆದಿದ್ದೇವೆ. ಮುಂದಿನ ಒಂದು ವಾರದಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. ಆದರೆ, ದೆಹಲಿಯಿಂದ ಇನ್ನೊಂದು ಅನುಮತಿ ಪಡೆಯುವ ಬಾಕಿ ಇದೆ. ಮೋಡ ಇದ್ದ ಕಡೆಯಲ್ಲಿ ಬಿತ್ತನೆ ಕಾರ್ಯ ನಡೆಯಲಿದೆ. ನಮ್ಮ ಕಂಪನಿಯಿಂದಲೇ ಖರ್ಚು ವೆಚ್ಚ ಭರಿಸಲಾಗುವುದು ಎಂದರು.