Bengaluru: ಸಂಭ್ರಮ, ಸಡಗರಗಳೊಂದಿಗೆ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ

Published : Oct 31, 2022, 11:38 PM IST
Bengaluru: ಸಂಭ್ರಮ, ಸಡಗರಗಳೊಂದಿಗೆ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ

ಸಾರಾಂಶ

ನಗರದ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಸಂಪೂರ್ಣ ಸಂಭ್ರಮ ಸಡಗರಗಳಿಂದ ಆಚರಿಸಲು ಸೋಮವಾರವಿಡೀ ಭರದ ಸಿದ್ಧತೆಗಳನ್ನು ನಡೆಸಲಾಯಿತು. 

ಬೆಂಗಳೂರು (ಅ.31): ನಗರದ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಸಂಪೂರ್ಣ ಸಂಭ್ರಮ ಸಡಗರಗಳಿಂದ ಆಚರಿಸಲು ಸೋಮವಾರವಿಡೀ ಭರದ ಸಿದ್ಧತೆಗಳನ್ನು ನಡೆಸಲಾಯಿತು. ಇದಕ್ಕಾಗಿ ಕ್ಷೇತ್ರದ ಪ್ರತಿಯೊಂದು ಮನೆಗೂ ಹಳದಿ-ಕೆಂಪು ಬಣ್ಣಗಳ ಕನ್ನಡ ಧ್ವಜವನ್ನು ಹಾಗೂ ಸಿಹಿ ತಿನಿಸುಗಳ ಪೆಟ್ಟಿಗೆಯನ್ನು ವಿತರಿಸುವ ಕಾರ್ಯವನ್ನು ಬಿಜೆಪಿ ಕಾರ್ಯಕರ್ತರು ಮಾಡಿದರು. 

ರಾಜ್ಯೋತ್ಸವದ ದಿನವಾದ ಮಂಗಳವಾರ ಬೆಳಿಗ್ಗೆ ಮೊದಲಿಗೆ ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿರುವ ಗೋಕಾಕ್ ಚಳವಳಿ ಉದ್ಯಾನದಲ್ಲಿ ಮೊದಲಿಗೆ ಕನ್ನಡ ಧ್ವಜಾರೋಹಣವನ್ನು ಸಚಿವರು ನೆರವೇರಿಸಲಿದ್ದಾರೆ. ಇದಾದ ಬಳಿಕ ಗಾಯತ್ರೀನಗರ ಮತ್ತು ಸುಬ್ರಹ್ಮಣ್ಯ ನಗರಗಳಲ್ಲಿ ಇರುವ ಡಾ.ರಾಜಕುಮಾರ್ ಉದ್ಯಾನ ಮುಂತಾದ ಕಡೆಗಳಲ್ಲಿ ಕೂಡ ಕನ್ನಡ ಧ್ವಜವನ್ನು ಹಾರಿಸಲಾಗುವುದು. ಕೆಲವು ದಿನಗಳ ಹಿಂದೆ 75 ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನಡೆದ 'ಆಜಾದಿ ಕಾ ಅಮೃತ ಮಹೋತ್ಸವ'ದಂತೆಯೇ ಕನ್ನಡ ರಾಜ್ಯೋತ್ಸವವನ್ನು ಕೂಡ ವೈಭವ ಮತ್ತು ವಿಶೇಷ  ಸಂಭ್ರಮದೊಂದಿಗೆ ಆಚರಿಸಬೇಕೆಂದು ಕ್ಷೇತ್ರದ ಶಾಸಕರಾದ ಡಾ. ಸಿ.ಎನ್.ಅಶ್ವತ್ಥನಾರಾಯಣ ಕರೆ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು. 

ಕಬ್ಬು ಬೆಳೆಗಾರರ ಬೇಡಿಕೆ ಈಡೇರದಿದ್ದರೆ ಸಿಎಂ ಮನೆ ಎದುರು ಧರಣಿ: ಮುತಾಲಿಕ್‌

ಈ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ಅಧಿಕಾರಿಗಳ ಸಭೆ ನಡೆಸಿದ್ದ ಅವರು, ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರತಿಯೊಂದು ಮನೆಯಲ್ಲೂ ಧ್ವಜಾರೋಹಣ ನಡೆಸಲಾಗುವುದು ಎಂದು ತಿಳಿಸಿದ್ದರು. ಇದಕ್ಕೆ ಪೂರಕವಾಗಿ ಅ.28ರಂದು ಕ್ಷೇತ್ರದಲ್ಲಿ 'ಕೋಟಿ ಕಂಠ ಗಾಯನ' ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿತ್ತು. ಇದೇ ವೇಳೆ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಸಾರುವ ವಿವಿಧ ವಾದ್ಯಗಳು ಹಾಗೂ ನೃತ್ಯಗಳಿಂದ ಕೂಡಿದ ವೈಭವದ ಮೆರವಣಿಗೆ ಕೂಡ ನಡೆಯಲಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷರ ಮನೆಯಲ್ಲಿ ಕನ್ನಡ ನಿತ್ಯೋತ್ಸವ: ಕನ್ನಡ ರಾಜ್ಯೋತ್ಸವ ಬಂತೆಂದರೆ ನಾಡು- ನುಡಿ, ಸಂಸ್ಕೃತಿಯ ಬಗ್ಗೆ ಪುಂಖಾನುಪುಂಖ ಭಾಷಣ ಮಾಡುವ ಬಹುತೇಕ ಎಲ್ಲ ರಾಜಕಾರಣಿಗಳು ತಮ್ಮ ಮಕ್ಕಳನ್ನು ಪ್ರತಿಷ್ಠಿತ ಖಾಸಗಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಲ್ಲಿ ಕಲಿಸುತ್ತಿದ್ದರೆ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಮಾತ್ರ ಇದಕ್ಕೆ ಅಪವಾದ. ರಾಜ್ಯಾದ್ಯಂತ ಕನ್ನಡ ಶಾಲೆಗಳು ಮುಚ್ಚುತ್ತಿರುವ ‘5ಜಿ’ ಜಮಾನದಲ್ಲೀಗ ಇವರ ಮೂವರೂ ಮಕ್ಕಳು ಕನ್ನಡ ಶಾಲೆಯಲ್ಲೇ ಕಲಿಯುತ್ತಿದ್ದಾರೆ, ಅದೂ ಸರ್ಕಾರಿ ಶಾಲೆಯಲ್ಲಿ ಎನ್ನುವುದು ವಿಶೇಷ! ನಿಜವಾದ ಅರ್ಥದಲ್ಲಿ ಸುದರ್ಶನ್‌ ಅವರ ಮನೆಯಲ್ಲಿ ಕನ್ನಡಾಂಬೆಗೆ ನಿತ್ಯೋತ್ಸವ..

ಮುಖದಲ್ಲಿ ಅರಳಿದ 'ಗಂಧದ ಗುಡಿ': ಮಂಗಳೂರಿನ ಮೇಕಪ್ ಆರ್ಟಿಸ್ಟ್ ಕೈಚಳಕ!

ರಾಜಕಾರಣಿಗಳು ಮಾತ್ರವಲ್ಲದೆ, ಬಡತನವಿದ್ದರೂ ಮಕ್ಕಳನ್ನು ಇಂಗ್ಲಿಷ್‌ ಶಾಲೆಗೆ ಕಳಿಸುವ ಎಲ್ಲರಿಗೂ ಸುದರ್ಶನ್‌ ಅವರು ದೇಸಿ ಸಂಸ್ಕಾರದ ಹೊಸ ಮಾದರಿಯನ್ನು ಸಮಾಜದ ಮುಂದಿಟ್ಟಿದ್ದಾರೆ. ‘ದೊಡ್ಡವರ’ ಮಕ್ಕಳು ದೊಡ್ಡ ಶಾಲೆಗೇ ಹೋಗ್ತಾರೆ ಎನ್ನುವುದನ್ನು ಸುಳ್ಳು ಮಾಡಿ, ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಿ ಸಾಮಾನ್ಯ ಜನರ ಮಕ್ಕಳೊಂದಿಗೆ ಬೆರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಒಂದೂವರೆ ಶತಮಾನ ಪೂರೈಸಿದ ಸರ್ಕಾರಿ ಶಾಲೆಯೊಂದರ ಉಳಿವಿಗೂ ಇದು ನಾಂದಿ ಹಾಡಿದೆ.

PREV
Read more Articles on
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ