ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪ್ರಯುಕ್ತ ಕಂದಾಯ ಸಚಿವ ಆರ್. ಅಶೋಕ್ ಅವರು ನ. 19ರಂದು ಎಚ್.ಡಿ. ಕೋಟೆ ತಾಲೂಕಿನ ಕೆಂಚನಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಸಚಿವರ ಕಾರ್ಯಕ್ರಮಕ್ಕೆ ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮೈಸೂರು (ನ. 06): ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪ್ರಯುಕ್ತ ಕಂದಾಯ ಸಚಿವ ಆರ್. ಅಶೋಕ್ ಅವರು ನ. 19ರಂದು ಎಚ್.ಡಿ. ಕೋಟೆ ತಾಲೂಕಿನ ಕೆಂಚನಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಸಚಿವರ ಕಾರ್ಯಕ್ರಮಕ್ಕೆ ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ನ. 19 ರಂದು ಹಮ್ಮಿಕೊಳ್ಳಲಾಗಿದ್ದು, ಕೃಷಿ, ತೋಟಗಾರಿಕೆ ಮುಂತಾದ ಇಲಾಖೆಗಳ ಕುಂದು ಕೊರತೆ ನಿವಾರಿಸಲು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಈಗಾಗಲೇ (Village stay ) ಮಾಡಿದ ಗ್ರಾಮಗಳಲ್ಲಿ ಸಮಸ್ಯೆಗಳು ಕಡಿಮೆ ಆಗಿದ್ದು, ಈ ಕಾರ್ಯಕ್ರಮವನ್ನು ಹಬ್ಬದ ರೀತಿ ಆಚರಿಸಬೇಕು. ತಮ್ಮ ಇಲಾಖೆಗಳ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಆ ಗ್ರಾಮದಲ್ಲಿ ವಿತರಿಸುವಂತಾಗಬೇಕು. ಹಕ್ಕು ಪತ್ರ, ಸಬ್ಸಿಡಿ ಯೋಜನೆ, ಕೃಷಿ ಉಪಕರಣ, ಪಡಿತರ ಚೀಟಿ (Ration Card) ವಿತರಣೆ ಮುಂತಾದ ಗಳನ್ನು ವಿತರಿಸಬೇಕು. ಯಾವುದೇ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗಬಾರದು. ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಚಿವರು ವಿವಿಧ ಇಲಾಖೆಯ ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಹಾಗೂ ವಿವಿಧ ಇಲಾಖೆಗಳ ಸವಲತ್ತು ವಿತರಿಸಲಿದ್ದು, ಪ್ರಮುಖ ಇಲಾಖೆಗಳ ಯೋಜನೆಗಳ ಕುರಿತು ಮಾಹಿತಿ ನೀಡುವ ಸ್ಟಾಲ್‌ಗಳನ್ನು ಅಳವಡಿಸಲು ಹಾಗೂ ಸಂಬಂಧಪಟ್ಟಗ್ರಾಮಗಳ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದರು.
ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಅಧಿಕಾರಿಗಳು ಸದಸ್ಯರು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಹಾಗೂ ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು.
ನಂತರ ಮಾತನಾಡಿದ ಎಡಿಸಿ ಡಾ.ಬಿ.ಎಸ್. ಮಂಜುನಾಥ ಸ್ವಾಮಿ, ಬೆಳಗ್ಗೆ 10 ಗಂಟೆಗೆ ಕಂದಾಯ ಸಚಿವರು ಭೀಮನ ಕೊಲ್ಲಿಗೆ ಆಗಮಿಸುತ್ತಾರೆ. ವಿವಿಧ ಇಲಾಖೆಗಳು ತಮ್ಮ ಇಲಾಖೆಯ ಯೋಜನೆಗಳ ಮಾಹಿತಿ ನೀಡುವ ಸ್ಟಾಲ್‌ಗಳನ್ನು ನಿರ್ಮಿಸಬೇಕು. ನಂತರ ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ವೇದಿಕೆ ಕಾರ್ಯಕ್ರಮ ನಡೆಯುತ್ತದೆ.
ಅರ್ಜಿ ಸ್ವೀಕಾರ ಮತ್ತು ವಿಲೇವಾರಿ ನಡೆಯುತ್ತದೆ. ಸಂಜೆ 4 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ನಂತರ ಸಂಜೆ ಐದು ಗಂಟೆಗೆ ಸಚಿವರು ಕೆಂಚನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಅಂದು ಗ್ರಾಮದಲ್ಲಿ ವಾಸ್ತವ್ಯ ಹೂಡುವುದಾಗಿ ಅವರು ಹೇಳಿದರು.
ಸಭೆಯಲ್ಲಿ ಜಿಪಂ ಸಿಇಒ ಡಾ.ಬಿ.ಆರ್. ಪೂರ್ಣಿಮಾ, ದೇವಸ್ಥಾನ ಸಮಿತಿ ಅಧ್ಯಕ್ಷ ಎಂಪಿಎಸ್ ಮೂರ್ತಿ, ಮುಖ್ಯ ಕಾರ್ಯದರ್ಶಿ ಮಂಜುನಾಥ್, ಕಾರ್ಯದರ್ಶಿ ಎಂ.ಎನ್. ಜಗದೀಶ್ ಹಾಗೂ ಪದಾಧಿಕಾರಿಗಳು, ವಿವಿಧ ಇಲಾಖೆಯ ಜಿಲ್ಲಾ ಅಧಿಕಾರಿಗಳು ಇದ್ದರು.
ಕಾಟಾಚಾರದ ವಾಸದತವ್ಯ
ಹೊಸದುರ್ಗ : ಡಿಸಿ ಮೇಡಂ ನಮ್ಮೂರಿಗೆ ಬರ್ತಾರೆ, ನಮ್ಮ ಸಂಕಷ್ಟಕ್ಕೆ ಅಲ್ಪ ಸ್ವಲ್ಪವಾದರೂ ಪರಿಹಾರ ಸಿಗುತ್ತೆ ಅಂದುಕೊಂಡಿದ್ವಿ . ಆದರೆ ಡಿಸಿ ಮೇಡಂ ಹಿಂಗ್ ಬಂದ್ರೂ ಹಂಗೋ ಹೋದ್ರು ಪರಿಹಾರ ಮಾತ್ರ ನಾವ್‌ಕಾಣೆ. ತಾಲೂಕಿನ ಮಾಡದಕೆರೆ ಹೋಬಳಿ ಎಂ. ಮಲ್ಲಾಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ, ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ನೇತೃತ್ವದಲ್ಲಿ ಜರುಗಿದ ಗ್ರಾಮ ವಾಸ್ತವ್ಯವು ಕೇವಲ ಭೇಟಿ ಪರಿಶೀಲನೇ, ಭರವಸೆಗಷ್ಟೇ ಸೀಮಿತವಾಗಿದ್ದರಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗ್ರಾಮಸ್ಥರು ಹೀಗೆ ಬೇಸರ ವ್ಯಕ್ತ ಪಡಿಸಿದರು.
Raichur: ಅರಕೇರಾದಲ್ಲಿ ಅ.15ಕ್ಕೆ ಸಚಿವ ಅಶೋಕ್ ಗ್ರಾಮ ವಾಸ್ತವ್ಯ
ಗ್ರಾಮ ವಾಸ್ತವ್ಯ ಮಾಡಲಿಲ್ಲ :
ಗ್ರಾಮ ವಾಸ್ತವ್ಯದ ಮಾಹಿತಿ ನಮಗೆ ಬೆಳಗ್ಗೆ ಗೊತ್ತಾಯಿತು. ಸಮಸ್ಯೆ ಇದ್ದಲ್ಲಿ ಪರಿಹಾರಕ್ಕೆ ಅರ್ಜಿ ಕೊಡಿ ಎಂದು ಯಾವ ಅಧಿಕಾರಿಗಳು ಹೇಳಲಿಲ್ಲ. ರಾತ್ರಿ ವಾಸ್ತವ್ಯ ಮಾಡುತ್ತಾರೆ. ಅಲ್ಲಿ ನಮ್ಮ ಸಮಸ್ಯೆ ಹೇಳಿಕೊಳ್ಳೋಣ ಎಂದುಕೊಂಡಿದ್ದೆವು. ಆದರೆ ಜಿಲ್ಲಾಧಿಕಾರಿ ಒಂದೂವರೆ ಗಂಟೆ ಗ್ರಾಮದಲ್ಲಿದ್ದು, ತರಾತುರಿಯಲ್ಲಿ ಹೋಗಿರುವುದಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.
ವೈದ್ಯರ ಸೇವೆ ಸಿಗುತ್ತಿಲ್ಲ:
ಮಾಡದಕೆರೆ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸೇವೆ ಸಿಗುತ್ತಿಲ್ಲ. ಬೇಗ ಮನೆಗೆ ತೆರಳುತ್ತಾರೆ. ನರ್ಸ್‌ಗಳು ಮಾತ್ರ ಇರುತ್ತಾರೆ ಎಂದು ಗ್ರಾಮಸ್ಥರೊಬ್ಬರೂ ಡಿಸಿ ಗಮನ ಸೆಳೆಯಲು ಮುಂದಾದಾಗ ಆ ವ್ಯಕ್ತಿಯನ್ನು ಡಿಸಿ ಅಂಗರಕ್ಷಕ ತಡೆದರು. ಆಗ ಜಿಲ್ಲಾಧಿಕಾರಿ ತಾಲೂಕು ಅರೋಗ್ಯಧಿಕಾರಿ ಅವರಿಂದ ರಿಪೋರ್ಚ್ ಪಡೆದು ಆ ವೈದ್ಯನಿಗೆ ನೋಟಿಸ್ ನೀಡುವುದಾಗಿ ಹೇಳಿದರು.
ದೂರುಗಳ ಸುರಿಮಳೆ:
ತೋಟದ ಮನೆಗಳಿಗೆ ವಿದ್ಯುತ್ ಇಲ್ಲ. ಕಾಡು ಪ್ರಾಣಿಗಳ ಹಾವಳಿ ಇದೆ. ಹಲವು ಬಾರಿ ಅರ್ಜಿ ನೀಡಿದರೂ ಪ್ರಯೋಜನವಾಗಿಲ್ಲ. ಕೇವಲ ಭರವಸೆಯಾಗಿಯೇ ಉಳಿಯುತ್ತಿವೆ ಎಂದು ಬುಕ್ಕಸಾಗರ ಗ್ರಾಮದ ನಟರಾಜ್ ದೂರಿದರೆ, ಗಂಗಾ ಕಲ್ಯಾಣ ದ ಅಡಿಯಲ್ಲಿ ಕೊಳವೆ ಬಾವಿ ಕೊರೆದು 5 ವರ್ಷ ಆಯಿತು. 2 ಇಂಚು ನೀರು ಬಂದಿದ್ದು, ವಿದ್ಯುತ್ ಸಂಪರ್ಕ ಕೊಟ್ಟಿಲ್ಲ. ಪಕ್ಕದ ಜಮೀನಿನಲ್ಲಿ ವಿದ್ಯುತ್ ಸಂಪರ್ಕ ಪಡೆದಿದ್ದೇವೆ. ಸಾಲ ಮಾಡಿ 2 ಎಕರೆಯಲ್ಲಿ ಅಡಕೆ ತೋಟ ಮಾಡಿದ್ದೇವೆ. ವಿದ್ಯುತ್ ಸಂಪರ್ಕ ನೀಡುವಂತೆ ಕಮಲಮ್ಮ ಮನವಿ ಮಾಡಿದರು.