ಸೈಬರ್ ಕ್ರೈಂ ಹಾಗೂ ಫೇಕ್ ನ್ಯೂಸ್ ತಡೆಗಟ್ಟಲು ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ದೇಶದಾದ್ಯಂತ ಸೈಬರ್ ಕ್ರೈಂ ಸಂಖ್ಯೆ ಹೆಚ್ಚಾಗುತ್ತಿದೆ.
ಮೈಸೂರು (ಜು.02): ಸೈಬರ್ ಕ್ರೈಂ ಹಾಗೂ ಫೇಕ್ ನ್ಯೂಸ್ ತಡೆಗಟ್ಟಲು ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ದೇಶದಾದ್ಯಂತ ಸೈಬರ್ ಕ್ರೈಂ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲೂ ಸೈಬರ್ ಕ್ರೈಂ ಸಂಖ್ಯೆ ಹೆಚ್ಚಳವಾಗಿದೆ. ಇದನ್ನು ತಡೆಯಲು ಕಾಯಕಲ್ಪ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಸೈಬರ್ ವಿಭಾಗವನ್ನು ಹೆಚ್ಚು ಕ್ರಿಯಾಶೀಲಗೊಳಿಸುತ್ತೇವೆ. ಜೊತೆಗೆ ಫೇಕ್ ನ್ಯೂಸ್ ಬೇರೆ ಬೇರೆ ರೀತಿಯಲ್ಲಿ ಹಾಕುತ್ತಿದ್ದಾರೆ.
ರಾಜಕೀಯವಾಗಿ, ಸಮಾಜದ ಶಾಂತಿ ಕದಡಲು ಫೇಕ್ ನ್ಯೂಸ್ ಹಾಕುತ್ತಿದ್ದಾರೆ. ಇದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಫೇಕ್ ನ್ಯೂಸ್ ತಡೆಗೆ ರೂಪುರೇಷೆಗಳನ್ನು ಸಿದ್ದಪಡಿಸಲಾಗುತ್ತಿದೆ. ಕಾನೂನು ರೀತಿ ಕ್ರಮ ಕೈಗೊಳ್ಳಾಗುತ್ತದೆ ಎಂದು ಅವರು ಹೇಳಿದರು. ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ಧರಣಿ ನಡೆಸಲು ಕರೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದವರನ್ನು ಧರಣಿ ಮಾಡಬೇಡಿ ಎಂದು ಯಾರು ಹೇಳಿಲ್ಲ. ಧರಣಿ ಕೂರಬೇಡಿ ಎಂದು ಯಾರು ಹೇಳಿಲ್ಲ. ಅವರು ಯಾವ ಕಾರಣಕ್ಕೆ ಧರಣಿ ಮಾಡಿದರೂ ನಾವು ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ ಎಂದು ತಿಳಿಸಿದರು.
ಪೊಲೀಸರಿಗೆ ವಾರದ ರಜೆ, ರಾತ್ರಿ ಪಾಳಿ ಭತ್ಯೆ: ಗೃಹ ಸಚಿವ ಪರಮೇಶ್ವರ್
ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಪ್ರಗತಿಯಲ್ಲಿದೆ. ಅಕ್ರಮದಲ್ಲಿ ಭಾಗಿಯಾಗದ 500 ಹೆಚ್ಚು ಮಂದಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಹಿಂದಿನ ಸರ್ಕಾರ ಮರು ಪರೀಕ್ಷೆ ನಡೆಸಲು ಮುಂದಾಗಿತ್ತು. ಅದಕ್ಕೂ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ. ಬಡ್ತಿ ನೀಡಿರುವ ಪರಿಣಾಮ ಬಹುತೇಕ ಎಸ್‌ಐ ಹುದ್ದೆಗಳು ಖಾಲಿ ಬಿದ್ದಿವೆ. 1 ಸಾವಿರ ಎಸ್‌ಐ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ ಎಂದು ಅವರು ಹೇಳಿದರು.
ಮೈಸೂರು ಹೈವೆ ವ್ಯವಸ್ಥಿತವಾಗಿಲ್ಲ: ಬೆಂಗಳೂರು- ಮೈಸೂರು ಹೈವೆಯಲ್ಲಿ ಸುಗಮ ಸುರಕ್ಷಿತ ಸಂಚಾರಕ್ಕೆ ಯಾವುದೇ ಕ್ರಮವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೆಗೆದುಕೊಂಡಿಲ್ಲ. ಹೈವೆಯಲ್ಲಿ ಸಂಚಾರ ಸೂಚನಾಫಲಕ ಯಾವುದು ಅಳವಡಿಕೆ ಆಗಿಲ್ಲ. ಬೇರೆ ಹೈವೆಗಳ ರೀತಿ ಇಲ್ಲಿ ವ್ಯವಸ್ಥಿತವಾಗಿ ಏನೂ ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸಂಚಾರ ವಿಭಾಗದ ಎಡಿಜಿಪಿ ನನಗೆ ಈ ಬಗ್ಗೆ ಮೌಖಿಕವಾಗಿ ವರದಿ ಕೊಟ್ಟಿದ್ದಾರೆ. ಹೆದ್ದಾರಿಯಲ್ಲಿ ದರೋಡೆ ಕೂಡ ನಡೆಯುತ್ತಿವೆ. ಇದನ್ನು ತಡೆಯೋಕೆ ಕ್ರಮ ವಹಿಸಿದ್ದೇವೆ ಎಂದು ಹೇಳಿದರು.
ಅಕ್ಕಿ ಬದಲು ಹಣ ಕೊಡಿ ಎಂದವರಿಂದಲೇ ಈಗ ಟೀಕೆ, ಬಡವರ ಹಸಿವಲ್ಲಿ ರಾಜಕೀಯ ಬೇಡ: ಸಚಿವ ಪರಮೇಶ್ವರ್
ಹೆದ್ದಾರಿ ಪ್ರಾಧಿಕಾರಕ್ಕೆ ಟೋಲ್ ವಸೂಲಿ ಬೇಡ ಅಂತಾ ಸೂಚನೆ ಕೊಟ್ಟಿದ್ದೇವು. ಆದರೂ ಟೋಲ್ ವಸೂಲಿ ಶುರು ಮಾಡಿದ್ದಾರೆ. ಹೆದ್ದಾರಿ ಪ್ರಾಧಿಕಾರವು ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿದೆ. ಅವಸರವಾಗಿ ಹೆದ್ದಾರಿ ಉದ್ಘಾಟನೆ ಮಾಡಿದರು. ರಾಜಕೀಯ ಉದ್ದೇಶದಿಂದ ತರಾತುರಿಯಲ್ಲಿ ಉದ್ಘಾಟನೆ ಮಾಡಿದರು. ಹೀಗಾಗಿ, ಇಷ್ಟೆಲ್ಲ ಸಮಸ್ಯೆ ಆಗುತ್ತಿದೆ. ಹೈವೆಯಲ್ಲಿ ಇಷ್ಟುಬೇಗ ಅಷ್ಟುಜನ ಸಾಯುತ್ತಾರೆ ಎಂದರೆ ಅದರ ಅರ್ಥ ಬಹಳ ಲೋಪವಾಗಿದೆ ಎಂದರು. ಹೈವೆಯಲ್ಲಿ ಡ್ರಿಂಕ್ ಅಂಡ್ ಡ್ರೈವ್ ಚೆಕಿಂಗ್ ಅನ್ನು ಜನರಿಗೆ ತೊಂದರೆ ಆಗದಂತೆ ಜನರ ಸುರಕ್ಷತೆಗೆ ಬೇಕಾದ ಕ್ರಮ ಜರುಗಿಸುತ್ತೇವೆ ಎಂದು ಅವರು ಹೇಳಿದರು.