'ಕೊರೋನಾ 3ನೇ ಅಲೆ ಎದುರಿಸಲು ಸನ್ನದ್ಧರಾಗಿ'

By Kannadaprabha NewsFirst Published Jul 9, 2021, 12:54 PM IST
Highlights
  • ಕೊರೋನಾ ಮೂರನೇ ಅಲೆ ಆರಂಭಕ್ಕೂ ಮುನ್ನವೇ ಆಕ್ಸಿಜನ್‌ ಪ್ಲಾಂಟ್‌ ಆರಂಭಿಸಲು ಸಲಹೆ
  • ಸಂಸದ ಪ್ರತಾಪ ಸಿಂಹ ಅಧಿಕಾರಿಗಳಿಗೆ ತಾಕೀತು 
  • ನಾವು ಮೂರನೇ ಅಲ ಎದುರಿಸಲು ಸನ್ನದ್ಧರಾಗಬೇಕೆಂದು ಸೂಚನೆ

 ಮೈಸೂರು (ಜು.09):  ಕೊರೋನಾ ಮೂರನೇ ಅಲೆ ಆರಂಭಕ್ಕೂ ಮುನ್ನವೇ ಎಲ್ಲಾ ತಾಲೂಕು ಕೇಂದ್ರಗಳಲ್ಲಿಯೂ ಆಕ್ಸಿಜನ್‌ ಪ್ಲಾಂಟ್‌ ಆರಂಭಿಸುವ ಮೂಲಕ ಸನ್ನದ್ಧರಾಗಬೇಕು ಎಂದು ಸಂಸದ ಪ್ರತಾಪ ಸಿಂಹ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೆ.ಆರ್‌. ಆಸ್ಪತ್ರೆ ಸೇರಿದಂತೆ ಕೆಲವೆಡೆ ಖಾಸಗಿ ಕಂಪನಿಯವರು ತಮ್ಮ ಸಿಎಸ್‌ಆರ್‌ ಅನುದಾನದಲ್ಲಿ ಆಕ್ಸಿಜನ್‌ ಪ್ಲಾಂಟ್‌ ನಿರ್ಮಿಸಿಕೊಡಲು ಮುಂದಾಗಿದ್ದಾರೆ. ಆದರೆ ಅಧಿಕಾರಿಗಳು ಇದಕ್ಕೆ ಸಹಕಾರ ನೀಡುತ್ತಿಲ್ಲ. ನಾವು ಮೂರನೇ ಅಲ ಎದುರಿಸಲು ಸನ್ನದ್ಧರಾಗಬೇಕಿದ್ದು, ಕೂಡಲೇ ಪ್ಲಾಂಟ್‌ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದರು.

ಕೊರೋನಾದಿಂದ ಮೃತಪಟ್ಟ ರೈತರ ಸಾಲಮನ್ನಾ ...

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಕ್ಸಿಜನ್‌ ಪ್ಲಾಂಟ್‌ ನಿರ್ಮಾಣ ತುರ್ತಾಗಿ ನಡೆಯಬೇಕು. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಜಿಲ್ಲೆಯಲಲಿ ಆಕ್ಸಿಜನ್‌ ಪ್ಲಾಂಟ್‌ ನಿರ್ಮಾಣ ಸ್ಥಿತಿಗತಿಯ ಕುರಿತು ಡಿಎಚ್‌ಒ ನೀಡಿದ ಮಾಹಿತಿಯಿಂದ ಅಸಮಾಧಾನಗೊಂಡ ಅವರು, ಕೊರೋನಾ ಮೂರನೆ ಅಲೆ ಆರಂಭಕ್ಕೂ ಮುನ್ನವೇ ಎಲ್ಲಾ ತಾಲೂಕುಗಳಲ್ಲಿ ಆಕ್ಸಿಜನ್‌ ಪ್ಲಾಂಟ್‌ ಆರಂಭಿಸುವ ಸೋಂಕು ಎದುರಿಸಲು ಸನ್ನದ್ಧರಾಗಬೇಕು ಎಂದು ಅವರು ತಿಳಿಸಿದರು.

ಮೈಸೂರಿನಲ್ಲಿ ಏರಿದ ಕೊರೋನಾ - ಸಾವು ಹೆಚ್ಚಳ ..

ಜಿಲ್ಲೆಯ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯು ಕೆ.ಆರ್‌. ಆಸ್ಪತ್ರೆಯಂತೆ ಅವ್ಯವಸ್ಥೆ ಆಗಬಾರದು. ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಈ ಆಸ್ಪತ್ರೆಗೆ ಖಾಸಗಿ ಕಂಪನಿಗಳು ಸಿಎಸ್‌ಆರ್‌ ಅನುದಾನದಲ್ಲಿ ವೈದ್ಯಕೀಯ ಸೌಲಭ್ಯ ಕಲ್ಪಿಸಿದೆ. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯು ಖಾಸಗಿ ಆಸ್ಪತ್ರೆಯಂತೆ ವ್ಯವಸ್ಥಿತವಾಗಿ ನಿರ್ವಹಿಸಲು ಸಲಹಾ ಸಮಿತಿ ರಚಿಸಬೇಕು ಎಂದು ಪ್ರತಾಪ ಸಿಂಹ ಸಲಹೆ ನೀಡಿದರು. ಈ ಬಗ್ಗೆ ಸಹಮತ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌ ಅವರು, ಶೀಘ್ರದಲ್ಲಿಯೇ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.

ಅಧಿಕಾರಿಗಳು ಜನ ಪ್ರತಿನಿಧಿಗಳ ಮನೆ ಕಾಯಬಾರದು.ಹಣ ಕೊಟ್ಟು ಬಂದು ಉಂಡಾಡಿ ಗುಂಡನಂತೆ ಕೂರಲು ಅವಕಾಶವಿಲ್ಲ. ಸರಿಯಾಗಿ ಕೆಲಸ ಮಾಡಬೇಕು, ಏನೇ ಕೆಲಸ ಆಗಬೇಕಾದರೂ ನನ್ನ ಕಿವಿಯಲ್ಲಿ ಹೇಳಿ, ಅನಗತ್ಯ ವಿಳಂಬ ಬೇಡ. ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಸಮಸ್ಯೆ ತೀವ್ರವಾಗಿದೆ. ಈ ಸಂಬಂಧ ನಗರ ಪಾಲಿಕೆ ಆಯುಕ್ತರು ಮತ್ತು ಜಿಪಂ ಸಿಇಒ ಕ್ರಮಕ್ಕೆ ಮುಂದಾಗಬೇಕು. ಮಾರುಕಟ್ಟೆಪ್ರದೇಶದಲ್ಲಿ ದಾಳಿ ನಡೆಸಿ ಎಚ್ಚರಿಕೆ ನೀಡಿ, ದಂಡ ವಿಧಿಸಬೇಕು. ಚಾಮುಂಡಿಬೆಟ್ಟದಲ್ಲಿ ನೆನಗುದಿಗೆ ಬಿದ್ದಿರುವ ವಾಣಿಜ್ಯ ಮಳಿಗೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಪ್ರತಾಪ್‌ಸಿಂಹ ಸೂಚಿಸಿದರು.

ಡಿಸಿ ಮಾತನಾಡಿ, ಕೂಡಲೇ . 4 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡುವುದಾಗಿ ತಿಳಿಸಿದರು.

ಸಭೆಯಲ್ಲಿ ಅವರು ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿ ಬಿಪಿಎಲ್‌ ಮತ್ತು ಅಂತ್ಯೋದಯ ಕಾರ್ಡ್‌ ಹೊಂದಿರುವವರಿಗೆ ಮೂರು ತಿಂಗಳ ಕಾಲ ತಲಾ ಐದು ಕೆ.ಜಿ. ಅಕ್ಕಿ ನೀಡುವ ಕಾರ್ಯಕ್ರಮದ ಪೋಸ್ಟರ್‌ ಮತ್ತು ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಪೋಸ್ಟರ್‌ ಅನ್ನು ಪ್ರತಾಪ ಸಿಂಹ ಬಿಡುಗಡೆಗೊಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ನಗರಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎ.ಎಂ. ಯೋಗೀಶ್‌, ಡಿಸಿಎಫ್‌ ಕೆ.ಸಿ. ಪ್ರಶಾಂತ್‌ಕುಮಾರ್‌ ಇದ್ದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!