ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಸಾವು| ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಂತಾಪ| ಆನಂದ್ ನಿಧನಕ್ಕೆ ಕಂಬನಿ ಮಿಡಿದ ಜೆಡಿಎಸ್ ಪಕ್ಷದ ನಾಯಕರು|
ಬೆಂಗಳೂರು(ಮೇ.08): ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಆನಂದ್ (55) ಅವರು ಕೊರೋನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಆನಂದ್ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಬೇಸರವಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ. ಆನಂದ್ ನಿಧನ ನೋವು ತಂದಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಭಗವಂತ ಅವರ ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
undefined
ಹರಿ ಓಂ ಟ್ರಸ್ಟ್ ಸಂಸ್ಥಾಪಕ ಡಾ. ನಾರಾಯಣ ಸಾವಂತ್ ನಿಧನ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಡಿಸಿ, ಆನಂದ್ ಅವರ ನಿಧನ ಅತ್ಯಂತ ನೋವಿನ ಸಂಗತಿ. ಇವರ ನಿಧನದಿಂದ ಕ್ರಿಯಾಶೀಲ ಯುವ ಮುಖಂಡರನ್ನು ಪಕ್ಷ ಕಳೆದುಕೊಂಡಂತಾಗಿದೆ. ಅವರ ಕುಟುಂಬದವರಿಗೆ ಮೃತರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಇತರೆ ನಾಯಕರು ಆನಂದ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona