ಬಳ್ಳಾರಿ: ಕುರುಬರ ಸಂಘದ ಅಧ್ಯಕ್ಷ ಕೃಷ್ಣ ನಿಧನ

By Kannadaprabha News  |  First Published Aug 16, 2020, 7:24 AM IST

ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಜಿ. ಕೃಷ್ಣ ನಿಧನ| ಸುಮಾರು 35 ವರ್ಷಗಳಿಂದಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರಾಗಿದ್ದು ಸಾಮಾಜಿಕ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿದ್ದ ಜಿ. ಕೃಷ್ಣ| ಮೃತರ ಅಗಲಿಕೆಗೆ ಸಮುದಾಯದ ಮುಖಂಡರಾದ ಶಿವಣ್ಣ ಸೇರಿದಂತೆ ಹಲವರ ಸಂತಾಪ|
 
 


ಬಳ್ಳಾರಿ(ಆ.16): ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಜಿ. ಕೃಷ್ಣ (62) ಅವರು ಶನಿವಾರ ನಿಧನರಾದರು. ಕೃಷ್ಣ ಅವರು ಇತ್ತೀಚೆಗಷ್ಟೆ ನಡೆದ ಚುನಾವಣೆಯಲ್ಲಿ ಗೆದ್ದು ಕುರುಬರ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 

ಮೂಲತಃ ಬಳ್ಳಾರಿಯವರಾಗಿದ್ದ ಕೃಷ್ಣ ಅವರು ವಕೀಲ ವೃತ್ತಿ ಆರಂಭಿಸಿದ್ದರು. ನಂತರ ರಾಜಕೀಯಕ್ಕೆ ಬಂದು ಕುರಿ ಅಭಿವೃದ್ಧಿ ಮಂಡಳಿ ,ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸುಮಾರು 35 ವರ್ಷಗಳಿಂದಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರಾಗಿದ್ದು ಸಾಮಾಜಿಕ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿದ್ದರು.

Tap to resize

Latest Videos

ಬಳ್ಳಾರಿ: ಶಾಲಾ ಕಾಂಪೌಂಡ್ ಕುಸಿದು ಓರ್ವ ವ್ಯಕ್ತಿ ಸಾವು

ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಗಲಿಕೆಗೆ ಸಮುದಾಯದ ಮುಖಂಡರಾದ ಶಿವಣ್ಣ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕೃಷ್ಣ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷರಾದ ಕೃಷ್ಣ ಅವರ ಅಕಾಲಿಕ ನಿಧನಕ್ಕೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಕೃಷ್ಣ ಅವರ ನಿಧನ ಆಘಾತ ಉಂಟು ಮಾಡಿದೆ. ಸರಳ, ಸಜ್ಜನಿಕೆ ಹಾಗೂ ಸೌಮ್ಯ ಸ್ವಭಾವದ ಕೃಷ್ಣ ಅವರು ಕುರುಬರ ಸಂಘದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇತ್ತೀಚೆಗೆ ಸಂಘದ ಅಧ್ಯಕ್ಷರಾಗಿ  ಚುನಾಯಿತರಾಗಿದ್ದ ಅವರು ಸಂಘದ ಕಾರ್ಯ ಚಟುವಟಿಕೆಗಳ ಯೋಜನೆ ಹಾಕಿಕೊಂಡಿದ್ದರು. ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ಕುಟುಂಬದವರಿಗೆ ಕೊಡಲಿ ಎಂದು ಸಿದ್ದರಾಮಯ್ಯ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

click me!