ಹೆಣ್ಣು ಭ್ರೂಣ ಹತ್ಯೆ ತಡೆ ಮಹಿಳೆಯ ಪ್ರಥಮ ಆದ್ಯತೆಯಾಗಲಿ : ಡಾ.ಅನಿತಾ

By Kannadaprabha News  |  First Published Mar 27, 2024, 8:55 AM IST

ನಗರದ ಟೌನ್‌ಹಾಲ್ ಸಮೀಪವಿರುವ ಐಎಂಎ ಸಭಾಂಗಣದಲ್ಲಿ ಭಾರತೀಯ ವೈದ್ಯಕೀಯ ಸಂಘ ಹಾಗೂ ಮಹಿಳಾ ವೈದ್ಯ ವೃಂದದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು.


 ತುಮಕೂರು :  ನಗರದ ಟೌನ್‌ಹಾಲ್ ಸಮೀಪವಿರುವ ಐಎಂಎ ಸಭಾಂಗಣದಲ್ಲಿ ಭಾರತೀಯ ವೈದ್ಯಕೀಯ ಸಂಘ ಹಾಗೂ ಮಹಿಳಾ ವೈದ್ಯ ವೃಂದದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ವೈದ್ಯವೃಂದದ ಅಧ್ಯಕ್ಷೆ ಡಾ.ಅನಿತಾ ಬಿ.ಗೌಡ ಮಾತನಾಡಿ, ಹೆಣ್ಣು ಭ್ರೂಣ ಹತ್ಯೆ ತಡೆಯುವುದು ಪ್ರಸ್ತುತ ಸಂದರ್ಭದಲ್ಲಿ ಮಹಿಳೆಯ ಪ್ರಥಮ ಆದ್ಯತೆ ಆಗಬೇಕು. ಯಾವುದೇ ಸಂದರ್ಭದಲ್ಲಿ ಮತ್ತು ಯಾವುದೇ ಕಾರಣಕ್ಕೂ ಹೆಣ್ಣು ಭ್ರೂಣಹತ್ಯೆಯಲ್ಲಿ ಪಾಲುದಾರರಾಗದಂತೆ ಎಚ್ಚರವಹಿಸಬೇಕು ಎಂದು ಕರೆ ನೀಡಿದರು.

Tap to resize

Latest Videos

ಗೃಹಿಣಿಯರು ಮನೆ ಕೆಲಸವನ್ನು ದ ವ್ಯಾಪ್ತಿಯಲ್ಲಿ ಪರಿಗಣಿಸಬೇಕು. ರಾಜಕೀಯ ಪ್ರಾತಿನಿಧ್ಯದಲ್ಲಿ ಶೇ. ೫೦ ರಷ್ಟು ಜಾರಿಯಾಗಬೇಕು, ಕಾಯ್ದೆಯ ಮಟ್ಟದಲ್ಲಷ್ಟೇ ಇರುವ ಆಸ್ತಿ ಹಕ್ಕನ್ನು ಅನುಷ್ಠಾನಗೊಳಿಸುವ ಬಗ್ಗೆ ಗಂಭೀರ ಪ್ರಯತ್ನಗಳನ್ನು ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಬೇಕು, ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಡಾ. ರಚನಾ ಅವರು, ಮಹಿಳಾ ದಿನಾಚರಣೆಯ ಹಿನ್ನೆಲೆ ಅಂದಿನ-ಇಂದಿನ ಮಹಿಳೆಯರ ಸ್ಥಿತಿಗತಿಗಳ ಬಗ್ಗೆ ಬೆಳಕು ಚೆಲ್ಲಿದರು. ಮಹಿಳಾ ದಿನಾಚರಣೆ ಘೋಷ ವಾಕ್ಯಗಳ ಒಳಗೊಳ್ಳುವಿಕೆಯನ್ನು ಪ್ರೇರೇಪಿಸಿ ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸಿ ಅಭಿವೃದ್ಧಿಯತ್ತ ಉತ್ತೇಜಿಸಬೇಕು. ಕೇರಳ ರಾಜ್ಯದ ಅಭಿವೃದ್ಧಿಯಲ್ಲಿ ಶಿಕ್ಷಣ ಹೊಂದಿದ ಮಹಿಳೆಯರ ಪಾತ್ರ, ಲಿಂಗ ಸಮಾನತೆ ಸಾಧಿಸಿರುವುದು ಮತ್ತು ಮಹಾರಾಷ್ಟ್ರದಲ್ಲಿ ರಾಜಕೀಯ ಪ್ರಾತಿನಿಧ್ಯ ನೀಡಿರುವುದನ್ನು ಬೇರೆ ರಾಜ್ಯಗಳು ಮತ್ತು ದೇಶದ ಮಟ್ಟದಲ್ಲೂ ಈ ಮಾದರಿಗಳನ್ನು ಮಹಿಳೆಯರ ಸಬಲೀಕರಣಕ್ಕೆ ಸಂಬಂಧಿಸಿದಂತೆ ಪರಿಗಣಿಸುವುದು ಸೂಕ್ತ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಸಿದ್ದಗಂಗಾ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಾಲಿನಿ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಅಸಾಧಾರಣ ಸಾಧನೆ ಮಾಡಿದ್ದಾರೆ. ಮಹಿಳೆಯರ ಸಾಧನೆಗೆ ಪುರುಷರ ಸಹಕಾರವೂ ಮುಖ್ಯವಾಗಿದೆ. ಪುರುಷರು ಸಹಕಾರ ನೀಡಿದರೆ ಇನ್ನು ಹೆಚ್ಚಿನದಾಗಿ ಮಹಿಳೆಯರು ಸಾಧನೆ ಮಾಡಬಲ್ಲರು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಾಗಿ ನಿವೃತ್ತರಾದ ಡಾ.ವೀಣಾ, ಭಕ್ತರಹಳ್ಳಿಯ ದಯಾ ಭವನ ಸಂಸ್ಥೆಯ ಶುಶ್ರೂಷಕಿ ಲತಾ ಕುಮಾರಿ ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ರಶ್ಮಿ ರವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಜ್ಗರ್ ಬೇಗ್, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ. ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ. ಮಹೇಶ್, ಡಾ. ಪ್ರಭಾಕರ್, ಡಾ. ಜ್ಯೋತಿ ಸ್ವರೂಪ್ ರಾಜ್, ಡಾ. ಹನುಮಕ್ಕ, ಡಾ. ನಾಗಲಕ್ಷಿ ಮತ್ತಿತರರು ಉಪಸ್ಥಿತರಿದ್ದರು.

click me!