Dharwad: ಜ.12ರಂದು ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ: ಜಿಲ್ಲಾಧಿಕಾರಿ ಗುರುದತ್ತ

By Govindaraj S  |  First Published Jan 1, 2023, 9:50 PM IST

ಧಾರವಾಡದಲ್ಲಿ ಮೊಟ್ಟಮೊದಲ ಬಾರಿಗೆ ರಾಷ್ಟ್ರೀಯ ಯುವಜನೋತ್ಸವ ಜರುಗುತ್ತಿದ್ದು ಜ. 12ರಂದು ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವರು. ಐದು ದಿನಗಳ ಕಾಲದ ಯುವಜನೋತ್ಸವ ಶಿಸ್ತುಬದ್ಧ ಆಯೋಜನೆಗೆ ಬರದ ಸಿದ್ಧತೆ ನಡೆದಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. 
 


ಧಾರವಾಡ (ಜ.01): ಧಾರವಾಡದಲ್ಲಿ ಮೊಟ್ಟಮೊದಲ ಬಾರಿಗೆ ರಾಷ್ಟ್ರೀಯ ಯುವಜನೋತ್ಸವ ಜರುಗುತ್ತಿದ್ದು ಜ. 12ರಂದು ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವರು. ಐದು ದಿನಗಳ ಕಾಲದ ಯುವಜನೋತ್ಸವ ಶಿಸ್ತುಬದ್ಧ ಆಯೋಜನೆಗೆ ಬರದ ಸಿದ್ಧತೆ ನಡೆದಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 12ರಂದು ಹುಬ್ಬಳ್ಳಿಯಲ್ಲಿ ಉದ್ಘಾಟನೆ ನಡೆದರೆ, ಜ. 13ರಿಂದ 16ರ ವರೆಗೆ ವಿವಿಧ ರೀತಿಯ ಸ್ಪರ್ಧೆಗಳು ಧಾರವಾಡದ ಕರ್ನಾಟಕ ಕಾಲೇಜು, ಕವಿವಿ ಮತ್ತು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿವೆ. ಬೇರೆ ಬೇರೆ ರಾಜ್ಯಗಳ 7500 ಯುವ ಕಲಾವಿದರು ಭಾಗವಹಿಸಿ ಪ್ರದರ್ಶನ ನೀಡಲಿದ್ದಾರೆ. 

ರಾಷ್ಟ್ರೀಯ ಯುವಜನೋತ್ಸವದ ಯಶಸ್ವಿಗಾಗಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಸತಿ, ಊಟ, ಸಾರಿಗೆ, ವೇದಿಕೆ ಸೇರಿದಂತೆ ವಿವಿಧ ಕಾರ್ಯಗಳ ಕುರಿತು 17ಕ್ಕೂ ಹೆಚ್ಚು ಸಮಿತಿ ರಚಿಸಿ, ಕಾರ್ಯಗಳ ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಯುವಜನೋತ್ಸವದಲ್ಲಿ ಸ್ಥಳೀಯ ಕಲಾವಿದರಿಗೂ ಅವಕಾಶ ನೀಡಲು ನಿರ್ಧರಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲ ಪ್ರತಿನಿಧಿಗಳಿಗೆ ಯೋಗಾ ಮ್ಯಾಟ್‌, ಧಾರವಾಡ ಪೇಢಾ, ಗರಗ ಖಾದಿ ಕೇಂದ್ರದಿಂದ ರಾಷ್ಟ್ರಧ್ವಜವಿರುವ ಒಂದು ಪ್ರೇಮ್‌ ಕೊಡಲು ತೀರ್ಮಾನಿಸಿದ್ದು ಈ ಎಲ್ಲ ವಸ್ತುಗಳನ್ನು ಸ್ಥಳೀಯ ಸಂಸ್ಥೆಗಳು ಹಾಗೂ ಇನ್ನಿತರ ಕಂಪನಿಗಳು ಪ್ರಾಯೋಜಕತ್ವ ವಹಿಸಿಕೊಳ್ಳುತ್ತಿವೆ. ಈ ಮೂಲಕ ಧಾರವಾಡ ಬ್ರ್ಯಾಂಡ್‌ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಅವಕಾಶ ಮಾಡುತ್ತಿರುವುದಾಗಿ ಜಿಲ್ಲಾಧಿಕಾರಿ ಹೇಳಿದರು.

Tap to resize

Latest Videos

ಅಭಿ​ವೃದ್ಧಿ ಕಾಮ​ಗಾ​ರಿ​ಗ​ಳ​ಲ್ಲಿ ನಿರ್ಲ​ಕ್ಷ್ಯತೆ, ತಪ್ಪು ಸರಿ​ಪ​ಡಿ​ಸಿ​ಕೊ​ಳ್ಳಿ: ಶಾಸಕ ಹಾಲಪ್ಪ

ಯುವಜನೋತ್ಸವಕ್ಕೆ ಆಗಮಿಸುವ ಸ್ಪರ್ಧಾಳು ಮತ್ತು ಅತಿಥಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ವಿವಿಧ ವಿದ್ಯಾರ್ಥಿನಿಲಯ ಹಾಗೂ ಹೊಟೇಲ್‌ಗಳಲ್ಲಿ ಮಾಡಲಾಗುತ್ತಿದೆ. ಉತ್ತಮ ಮತ್ತು ಸಕಾಲಿಕ ಸಾರಿಗೆ ವ್ಯವಸ್ಥೆ ಕಲ್ಪಿಸಲು ಖಾಸಗಿ ಶಾಲಾ-ಕಾಲೇಜುಗಳ ಬಸ್‌ಗಳನ್ನು ಪಡೆಯಲಾಗುತ್ತಿದೆ. ಯುವಜನೋತ್ಸವ ಅವಧಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಹು-ಧಾ ಅವಳಿನಗರದ ಎಲ್ಲ ಸರ್ಕಾರಿ ಕಚೇರಿಗಳಿಗೆ ಒಂದು ವಾರ ವಿದ್ಯುತ್‌ ಅಲಂಕಾರ ಮಾಡಲಾಗುತ್ತಿದೆ. ಅವಳಿನಗರದ ಮುಖ್ಯ ರಸ್ತೆ, ಪ್ರವಾಸಿ ಸ್ಥಳಗಳನ್ನು ವೈಭವೀಕರಿಸಲಾಗುತ್ತಿದೆ. ಮಹಾನಗರದ ಮುಖ್ಯ ರಸ್ತೆ, ಉದ್ಯಾನವನ, ಸಾಂಸ್ಕೃತಿಕ ಸ್ಥಳಗಳನ್ನು ಶೃಂಗರಿಸಲಾಗುತ್ತಿದೆ. ಒಟ್ಟಾರೆ ಅವಳಿ ನಗರದಲ್ಲಿ ಒಂದು ವಾರ ಹಬ್ಬದ ವಾತಾವರಣ ಮೂಡುವಂತೆ ಮಾಡಲು ಚಿಂತಿಸಲಾಗಿದೆ. 

ನೆನಗುದಿಗೆ ಬಿದ್ದ ಗಾರ್ಮೆಂಟ್ಸ್‌ ಘಟಕ ನಿರ್ಮಾಣ: ಚಲುವರಾಯಸ್ವಾಮಿ

ಕೇಂದ್ರ, ರಾಜ್ಯ ಸರ್ಕಾರ 20 ಕೋಟಿ ಅನುದಾನ ನೀಡಿದ್ದಲ್ಲದೇ, ಗಣ್ಯವ್ಯಕ್ತಿಗಳು, ಕೈಗಾರಿಕೋದ್ಯಮಿಗಳು ಹೆಚ್ಚಿನ ಪ್ರಮಾಣದಲ್ಲಿ ಪ್ರಾಯೋಜಕತ್ವ ವಹಿಸಿಕೊಳ್ಳುತ್ತಿದ್ದಾರೆ. ಮಹಾನಗರ ಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆಯಿಂದ ಅವಳಿ ನಗರಗಳ ರಸ್ತೆ ರಿಪೇರಿ ಕಾರ್ಯ ನಡೆಯಲಿದ್ದು, ಲೋಕೋಪಯೋಗಿ ಇಲಾಖೆಗೆ . 3.8 ಕೋಟಿ ಬಿಡುಗಡೆಯಾಗಿದೆ. ಧಾರವಾಡದ ವಿವಿಧ ಉದ್ಯಾನವನಗಳ ಹಸರೀಕರಣ ಕಾರ್ಯ ನಡೆಯುತ್ತಿದೆ. ಅವಳಿನಗರಗಳ ಪರಿಸರ ವ್ಯವಸ್ಥೆ ಕಾಪಾಡಿಕೊಳ್ಳುವ ದೃಷ್ಟಿಯಿಂದ ಸಾಧನಕೇರಿ, ಕೇಲಗೇರಿ ಸೇರಿದಂತೆ ಪ್ರಮುಖ 6 ಕೆರೆಗಳನ್ನು . 17 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆಯು ಶೀಘ್ರವೇ ಆರಂಭಿಸಲಾಗುವುದು ಎಂದರು.

click me!